ಸಂದರ್ಭ: ಗುಜರಾತ್‌ನ ಸೂರತ್ ಮತ್ತು ಬಿಲಿಮೊರಾ ನಡುವಿನ 50 ಕಿ.ಮೀ. ಉದ್ದದ ಬುಲೆಟ್ ರೈಲು ಯೋಜನೆ 2027ರಲ್ಲಿ ಪೂರ್ಣಗೊಳ್ಳಲಿದ್ದು, ಈ ಮೂಲಕ ದೇಶದ ಮೊದಲ ಬುಲೆಟ್ ರೈಲು ಸಂಚಾರಕ್ಕೆ ಚಾಲನೆ ಸಿಗಲಿದೆ.
ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಯ ಮೊದಲ ಹಂತ ಇದಾಗಿದೆ.
‘ಬುಲೆಟ್ ರೈಲು ಯೋಜನೆಯ ಕಾಮಗಾರಿಯು ಭರದಿಂದ ಸಾಗುತ್ತಿದೆ. ಠಾಣೆ–ಅಹಮದಾಬಾದ್ ನಡುವೆ 2028ರಲ್ಲಿ ಬುಲೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ 2029ರಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
ಈ ಯೋಜನೆಯು ಪೂರ್ಣಗೊಂಡ ಬಳಿಕ ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಯಾಣದ ಅವಧಿ ಕೇವಲ 2 ಗಂಟೆ 7 ನಿಮಿಷ ಇರಲಿದೆ.
ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗೆ 2017ರಲ್ಲಿ ಚಾಲನೆ ನೀಡಲಾಗಿತ್ತು. 2023ರಲ್ಲಿ ಈ ಯೋಜನೆ ಪೂರ್ಣಗೊಳಿಸಲು ಯೋಜಿಸಲಾಗಿತ್ತು, ಆದರೆ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಕಾಮಗಾರಿ ವಿಳಂಬಗೊಂಡಿದೆ.
ಕಾಂತಾರಕ್ಕೆ ಕೆಎಸ್‌ಡಿಎಲ್ ಸಹ ಪ್ರಾಯೋಜಕ: ಎಂ.ಬಿ.ಪಾಟೀಲ
ಸಂದರ್ಭ: ‘ಕಾಂತಾರ– ಚಾಪ್ಟರ್ 1 ಸಿನಿಮಾಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್‌ಡಿಎಲ್), ಸುಗಂಧ ಭಾಗಿದಾರ ಆಗಿ ಸಹ ಪ್ರಾಯೋಜಕತ್ವ ನೀಡಲಿದೆ’.
‘ಕನ್ನಡ ಚಿತ್ರರಂಗವು ಸ್ಯಾಂಡಲ್ ವುಡ್ ಎಂದೇ ಹೆಸರಾಗಿದೆ. ಇನ್ನು ಕೆಎಸ್‌ಡಿಎಲ್ ಮೈಸೂರ್ ಸ್ಯಾಂಡಲ್ ಸೋಪ್‌ಗಳಿಗೆ ಖ್ಯಾತಿ. ಈಗ ಚಿತ್ರತಂಡ ಮತ್ತು ಕೆಎಸ್‌ಡಿಎಲ್ ಮಧ್ಯೆ ಒಪ್ಪಂದ ವಾಗಿದ್ದು, ಚಿತ್ರದ ಪ್ರತಿ ಪ್ರದರ್ಶನದಲ್ಲೂ ಕೆಎಸ್‌ಡಿಎಲ್ ಉತ್ಪನ್ನ ಗಳಿಗೆ ಪ್ರಚಾರ ಸಿಗಲಿದೆ’.
‘ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳ, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಸೇರಿ 7 ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಅಲ್ಲೆಲ್ಲಾ ಕೆಎಸ್‌ಡಿಎಲ್ ಉತ್ಪನ್ನಗಳಿಗೆ ಪ್ರಚಾರ ಸಿಗಲಿದೆ. ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಯತ್ನಿಸುತ್ತಿರುವ ಕೆಎಸ್‌ಡಿಎಲ್‌ಗೆ ಇದರಿಂದ ಅನುಕೂಲ ವಾಗಲಿದೆ’.
ಅಂಡಮಾನ್‌ನಲ್ಲಿ ತೈಲ ನಿಕ್ಷೇಪ ಪತ್ತೆ
ಸಂದರ್ಭ: ಅಂಡಮಾನ್ ದ್ವೀಪದ ಬಳಿ ತೈಲ ನಿಕ್ಷೇಪ ಪತ್ತೆ ಆಗಿದೆ ಎಂದು ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ (ಒಐಎಲ್) ತಿಳಿಸಿದೆ. ಆದರೆ, ಪತ್ತೆಯಾದ ನಿಕ್ಷೇಪದ ಅಂದಾಜನ್ನು ತಿಳಿಸಿಲ್ಲ.
ಅಂಡಮಾನ್ ಸಮುದ್ರ ಪ್ರದೇಶದ ವಿಜಯಪುರಂ–2ರ ಎರಡನೇ ಬಾವಿಯಲ್ಲಿ ನಿಕ್ಷೇಪ ಪತ್ತೆಯಾಗಿದೆ.
ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ಒಎನ್‌ಜಿಸಿ) ಅಂಡಮಾನ್ ಸಮುದ್ರದಲ್ಲಿ ಹೈಡ್ರೋಕಾರ್ಬನ್ ನಿಕ್ಷೇಪದ ಪತ್ತೆಗಾಗಿ ಸಂಶೋಧನೆ ನಡೆಸುತ್ತಿವೆ.
ಅಂಡಮಾನ್ ದ್ವೀಪದ ಪೂರ್ವ ಕರಾವಳಿಯಿಂದ 9.20 ನಾಟಿಕಲ್ ಮೈಲು (17 ಕಿ.ಮೀ) ದೂರದಲ್ಲಿನ ಬಾವಿಯಲ್ಲಿ ತೈಲ ನಿಕ್ಷೇಪ ಪತ್ತೆ ಆಗಿದೆ.
ಅಮೆರಿಕ ಸುಂಕ: ದೇಶದ ಜಿಡಿಪಿ ಮೇಲೆ ಪರಿಣಾಮ?
ಸಂದರ್ಭ: ಭಾರತದ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಅಧಿಕ ಸುಂಕವು ದೇಶದ ಜಿಡಿಪಿ ಬೆಳವಣಿಗೆ ಮೇಲೆ ಪರಿಣಾಮ ಬೀರಬಹುದು ಎಂದು ಕ್ರಿಸಿಲ್ ಇಂಟೆಲಿಜೆನ್ಸ್ ತನ್ನ ಸೆಪ್ಟೆಂಬರ್ ತಿಂಗಳ ವರದಿಯಲ್ಲಿ ಹೇಳಿದೆ.
ಈ ಸುಂಕವು ದೇಶದ ಸರಕು ರಫ್ತು ಮತ್ತು ಹೂಡಿಕೆ ಮೇಲೆ ಪರಿಣಾಮ ಬೀರಲಿದೆ. ಆದರೂ, ದೇಶದಲ್ಲಿ ಹಣದುಬ್ಬರ ಇಳಿಕೆ ಮತ್ತು ರೆಪೊ ದರ ಕಡಿತವು ಬೆಳವಣಿಗೆಗೆ ನೆರವಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7.8ರಷ್ಟಾಗಿತ್ತು. ಇದು 15 ತಿಂಗಳ ಗರಿಷ್ಠ ಮಟ್ಟ. ಇದೇ ಅವಧಿಯಲ್ಲಿ ನಾಮಿನಲ್ ಜಿಡಿಪಿ ಶೇ 10.8ರಿಂದ ಶೇ 8.8ಕ್ಕೆ ಇಳಿದಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ ಶೇ 3.5ಕ್ಕೆ ಇಳಿಯುವ ನಿರೀಕ್ಷೆ ಇದೆ. ಇದು ಕಳೆದ ಆರ್ಥಿಕ ವರ್ಷದಲ್ಲಿ ಶೇ 4.6ರಷ್ಟಿತ್ತು.
ಉತ್ತಮ ಕೃಷಿ ಚಟುವಟಿಕೆಯಿಂದ ಆಹಾರ ಪದಾರ್ಥಗಳ ಹಣದುಬ್ಬರವು ನಿಯಂತ್ರಣದಲ್ಲಿ ಇರುವ ಸಾಧ್ಯತೆ ಇದೆ. ಕಚ್ಚಾ ತೈಲ ಮತ್ತು ಸರಕುಗಳ ಬೆಲೆ ನಿಯಂತ್ರಣದಲ್ಲಿ ಇದೆ. ಇದು ಆಹಾರೇತರ ವಸ್ತುಗಳ ಹಣದುಬ್ಬರ ಪ್ರಮಾಣವನ್ನು ತಗ್ಗಿಸುವ ನಿರೀಕ್ಷೆ ಇದೆ. ಅಲ್ಲದೆ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತೊಮ್ಮೆ ರೆಪೊ ದರ ಕಡಿತ ಮಾಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಶೀತಲ್ ದೇವಿ ಚಾರಿತ್ರಿಕ ಸಾಧನೆ: ಪ್ಯಾರಾ ವಿಶ್ವ ಆರ್ಚರಿ: ಕೈಗಳಿಲ್ಲದೇ ಚಿನ್ನ ಗೆದ್ದ ಮೊದಲ ಮಹಿಳೆ
ವಿಶ್ವ ಆರ್ಚರಿ ಚಾಂಪಿಯನ್‌ಷಿಪ್‌ನಲ್ಲಿ ಕೈಗಳ ಸಹಾಯವಿಲ್ಲದೇ ಚಿನ್ನ ಗೆದ್ದ ವಿಶ್ವದ ಮೊದಲ ಮಹಿಳಾ ಸ್ಪರ್ಧಿ ಎಂಬ ಹೆಗ್ಗಳಿಕೆ ಭಾರತದ ಶೀತಲ್ ದೇವಿ ಅವರದಾಯಿತು.
ಇಲ್ಲಿ ನಡೆಯುತ್ತಿರುವ ಪ್ಯಾರಾ ವಿಶ್ವ ಆರ್ಚರಿ ಚಾಂಪಿಯನ್ ಷಿಪ್‌ನ ಪುರುಷರ ವಿಭಾಗದ ಕಾಂಪೌಂಡ್ ವೈಯಕ್ತಿಕ ಸ್ಪರ್ಧೆಯಲ್ಲಿ ತೊಮನ್ ಕುಮಾರ್ ಅವರೂ ಚಿನ್ನ ಗೆದ್ದರು.
ಕಾಂಪೌಂಡ್ ವೈಯಕ್ತಿಕ ವಿಭಾಗದ ಫೈನಲ್‌ನಲ್ಲಿ 18 ವರ್ಷ ವಯಸ್ಸಿನ ಶೀತಲ್, ಟರ್ಕಿಯ ಅಗ್ರಕ್ರಮಾಂಕದ ಸ್ಪರ್ಧಿ ಒಝ್ನೂರ್ ಕ್ಯುರ್ ಗಿರ್ದಿ ಅವರನ್ನು 146–143 ರಿಂದ ಸೋಲಿಸಿದರು. ಕೈಗಳನ್ನು ಕಳೆದುಕೊಂಡ ಜಮ್ಮು–ಕಾಶ್ಮೀರದ ಬಾಲೆ ಶೀತಲ್ ಕಾಲಿನಿಂದಲೇ ಬಾಣ ಪ್ರಯೋಗಿಸಿ ಹೆಸರು ಮಾಡಿದ್ದಾರೆ.
ಕಾಂಪೌಂಡ್ ವಿಭಾಗದ ಸ್ಪರ್ಧಿಗಳು ಬಳಸುವ ಬಿಲ್ಲು ಕೇಬಲ್ ಮತ್ತು ಪುಟ್ಟ ರಾಟೆಗಳನ್ನು ಹೊಂದಿರುತ್ತದೆ. ರೀಕರ್ವ್ ವಿಭಾಗದ ಬಿಲ್ಲು ಸಾಂಪ್ರದಾಯಿಕ ರೀತಿಯಲ್ಲಿರುತ್ತದೆ.
ಶೀತಲ್ ಅವರು ಈ ಟೂರ್ನಿಯಲ್ಲಿ ಕೈಗಳಿಲ್ಲದೇ ಭಾಗವಹಿಸಿರುವ ಏಕೈಕ ಸ್ಪರ್ಧಿ ಎನಿಸಿದ್ದಾರೆ. ಅವರು ಗಲ್ಲದ ನೆರವು ಪಡೆದು ಕಾಲಿನಿಂದ ಬಾಣ ಪ್ರಯೋಗಿಸು ತ್ತಾರೆ. ಈ ಹಿಂದೆ ಪುರುಷರ ವಿಭಾಗದಲ್ಲಿ ಕೈಗಳಿಲ್ಲದೇ ಬಾಣ ಪ್ರಯೋಗಿಸಿ ಚಿನ್ನ ಗೆದ್ದ ಏಕೈಕ ದಾಖಲೆ ಇರುವುದು ಅಮೆರಿಕದ ಮ್ಯಾಟ್ ಸ್ಟುಟ್ಜ್‌ಮನ್ ಹೆಸರಿನಲ್ಲಿ. ಅವರು ದುಬೈ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದಿದ್ದರು.
ತೊಮನ್‌ಗೆ ಚಿನ್ನ: ಇದಕ್ಕೆ ಮೊದಲು ಶೀತಲ್ ಅವರು ತೊಮನ್ ಕುಮಾರ್ ಜೊತೆಗೂಡಿ ಕಾಂಪೌಂಡ್ ಮಿಶ್ರ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದರು. ಪ್ಲೇಆಫ್‌ನಲ್ಲಿ ಬ್ರಿಟನ್‌ನ ಜೋಡೀ ಗ್ರೀನ್ಹಮ್– ನಥಾನ್ ಮೆಕ್‌ಕ್ವೀನ್ ಜೋಡಿಯನ್ನು 152–149 ರಿಂದ ಸೋಲಿಸಿದ್ದರು.
ನಂತರ ನಡೆದ ಪುರುಷರ ವಿಭಾಗದ ಕಾಂಪೌಂಡ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ತೊಮನ್ ಅವರು ಸ್ವದೇಶದ ರಾಕೇಶ್ ಕುಮಾರ್ ಅವರನ್ನು 40–20 ರಿಂದ ಸೋಲಿಸಿದರು. ರಾಕೇಶ್ ಅವರು ತಾಂತ್ರಿಕ ತೊಂದರೆಯ ಕಾರಣ ಅರ್ಧದಲ್ಲೇ ಹಿಂದೆ ಸರಿದರು. ರಾಕೇಶ್, ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಇಲ್ಲಿ ಅವರ ಬಾಣ ಪ್ರಯೋಗಿಸುವ ವೇಳೆ ತಾಂತ್ರಿಕ ತೊಂದರೆ ಕಾಣಿಸಿತು.
ಕಾಂಪೌಂಡ್ ಪುರುಷರ ಓಪನ್ ವಿಭಾಗದಲ್ಲಿ ಕಂಚಿನ ಪದಕಕ್ಕೆ ನಡೆದ ಸ್ಪರ್ಧೆಯಲ್ಲಿ ಶ್ಯಾಮ್ ಸುಂದರ್ ಸ್ವಾಮಿ 141–148 ರಲ್ಲಿ ಬ್ರಿಟನ್‌ನ ನಥಾನ್ ಮೆಕ್‌ಕ್ವೀನ್ ಅವರಿಗೆ ಸೋತರು. ಸ್ವಾಮಿ ಸೆಮಿಫೈನಲ್‌ನಲ್ಲಿ ತೊಮನ್ ಅವರನ್ನು ಸೋಲಿಸಿದ್ದರು.
‘ಬಹುಪಕ್ಷೀಯ ವ್ಯವಸ್ಥೆ ‘ಬ್ರಿಕ್ಸ್’ ರಕ್ಷಿಸಲಿ’
ಸಂದರ್ಭ: ಹೆಚ್ಚುತ್ತಿರುವ ರಕ್ಷಣಾ ನೀತಿ, ಸುಂಕದ ಏರಿಳಿತ ಹಾಗೂ ಇತರ ಅಡೆತಡೆಗಳು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಜಾಗತಿಕ ವ್ಯಾಪಾರ ಸಂಬಂಧವನ್ನು ರಕ್ಷಿಸುವಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ‘ಬ್ರಿಕ್ಸ್’ಗೆ ಕರೆ ನೀಡಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಉನ್ನತ ಮಟ್ಟದ ಸಭೆಯ (ಯುಎನ್‌ಜಿಎ) ಸಂದರ್ಭದಲ್ಲಿ ‘ಬ್ರಿಕ್ಸ್’ ದೇಶಗಳ ವಿದೇಶಾಂಗ ಸಚಿವರ ಸಭೆಯು ಭಾರತದ ಅಧ್ಯಕ್ಷತೆಯಲ್ಲಿ ನಡೆಯಿತು.
‘ಬಹುಪಕ್ಷೀಯತೆಯು ಒತ್ತಡದಲ್ಲಿದ್ದಾಗ, ರಚನಾತ್ಮಕ ಬದಲಾವಣೆಯ ಗಟ್ಟಿ ದನಿಯಾಗಿ ‘ಬ್ರಿಕ್ಸ್’ ನಿಂತಿದೆ. ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಶಾಂತಿ ಸ್ಥಾಪನೆ, ಮಾತುಕತೆ, ರಾಜತಾಂತ್ರಿಕತೆ ಹಾಗೂ ಅಂತರ ರಾಷ್ಟ್ರೀಯ ಕಾನೂನಿನ ಪಾಲನೆಯನ್ನು, ‘ಬ್ರಿಕ್ಸ್’ ಬಲಪಡಿಸಬೇಕು’ ಎಂದು ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
2026ರಲ್ಲಿ ಭಾರತವು ‘ಬ್ರಿಕ್ಸ್’ ಅಧ್ಯಕ್ಷತೆ ವಹಿಸಿಕೊಳ್ಳುತ್ತಿರುವ ಕುರಿತು ಮಾತನಾಡಿದ ಅವರು, ‘ಡಿಜಟಲೀಕರಣ, ಸ್ಟಾರ್ಟ್‌ಅಪ್ ಗಳು, ನಾವೀನ್ಯತೆ ಮತ್ತು ಅಭಿವೃದ್ಧಿ ಪಾಲುದಾರಿಕೆಗಳ ಮೂಲಕ ಆಹಾರ, ಇಂಧನ, ಹವಾಮಾನ ಹಾಗೂ ಸುಸ್ಥಿರ ಅಭಿವೃದ್ಧಿಯ ಮೇಲೆ ದೇಶವು ಕೇಂದ್ರೀಕರಿಸಲಿದೆ’ ಎಂದರು.
ಶೈಲೇಶ್‌ಗೆ ಹೈಜಂಪ್ ಚಿನ್ನ
ಸಂದರ್ಭ: ಭಾರತದ ಶೈಲೇಶ್ ಕುಮಾರ್ ಮತ್ತು ವರುಣ್ ಸಿಂಗ್ ಭಾಟಿ ಅವರು ಶನಿವಾರ ಆರಂಭವಾದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್‌ನಲ್ಲಿ ಪುರುಷರ ಹೈಜಂಪ್ ಟಿ63 ವಿಭಾಗದಲ್ಲಿ ಕ್ರಮವಾಗಿ ಚಿನ್ನ ಮತ್ತು ಕಂಚಿನ ಪದಕ ಗೆದ್ದುಕೊಂಡರು.
ಮೊದಲ ದಿನವೇ ಆತಿಥೇಯರು ಪದಕ ಖಾತೆ ತೆರೆದರು. 25 ವರ್ಷ ವಯಸ್ಸಿನ ಶೈಲೇಶ್ 1.91 ಮೀ. ಜಿಗಿದು ವೈಯಕ್ತಿಕ ಶ್ರೇಷ್ಠ ಸಾಧನೆ ದಾಖಲಿಸಿದರು. ಆ ಹಾದಿಯಲ್ಲಿ ಏಷ್ಯನ್ ಮತ್ತು ಚಾಂಪಿಯನ್‌ಷಿಪ್ ದಾಖಲೆ ಸುಧಾರಿಸಿದರು.
ಹಾಲಿ ಪ್ಯಾರಾಲಿಂಪಿಕ್ ಚಾಂಪಿಯನ್, ಅಮೆರಿಕದ ಎಝ್ರಾ ಫ್ರೆಚ್ ಬೆಳ್ಳಿ ಗೆದ್ದರೆ, ವರುಣ್ ಕಂಚಿನ ಪದಕ ಗೆದ್ದರು. ಇಬ್ಬರೂ 1.85 ಮೀ. ಜಿಗಿದರೂ, ಕೌಂಟ್ ಬ್ಯಾಂಕ್ ಆಧಾರದಲ್ಲಿ ಅಮೆರಿಕದ ಸ್ಪರ್ಧಿ ಎರಡನೇ ಸ್ಥಾನ ತಮ್ಮದಾಗಿಸಿಕೊಂಡರು. ಮೊಣಕಾಲಿನ ಮೇಲಿನವರೆಗೆ ಒಂದು ಕಾಲು ಕಳೆದುಕೊಂಡವರು ಈ ವಿಭಾಗದಲ್ಲಿ (ಟಿ63) ಸ್ಪರ್ಧಿಸುತ್ತಾರೆ.
ಸಂದರ್ಭ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಶೇ 35ರಷ್ಟು ಸಹಾಯಧನ ಅಂದರೆ ₹60.90 ಕೋಟಿ ಬಿಡುಗಡೆ ಮಾಡಲಾಗಿದೆ.
ಸೆ.28ರವರೆಗೆ ನವದೆಹಲಿಯಲ್ಲಿ ನಡೆಯಲಿರುವ ವರ್ಲ್ಡ್ ಫುಡ್ ಇಂಡಿಯಾ 2025 ವ್ಯಾಪಾರ ಮೇಳದ ಭಾಗವಾಗಿ ಸಹಾಯಧನವನ್ನು 1,642 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ.
ಇದರಲ್ಲಿ ಕೇಂದ್ರದ ಪಾಲು ₹ 36.54 ಕೋಟಿ ಹಾಗೂ ರಾಜ್ಯದ ಪಾಲು ₹ 24.36 ಕೋಟಿ ಆಗಿರಲಿದೆ. ಹಾಗೆಯೇ ರಾಜ್ಯ ಸರ್ಕಾರದಿಂದ ₹ 27.17 ಕೋಟಿ ಹೆಚ್ಚುವರಿ ಟಾಪ್-ಅಪ್ ಅನುದಾನವನ್ನು ಫಲಾನುಭವಿಗಳಿಗೆ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಅಧ್ಯಕ್ಷ ಬಿ.ಎಚ್. ಹರೀಶ್ ತಿಳಿಸಿದ್ದಾರೆ.
ಈ ಅನುದಾನ ಆಹಾರ ಸಂಸ್ಕರಣಾ ಕ್ಷೇತ್ರ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ನಾಪತ್ತೆಪ್ರಕರಣ: ಆಧಾರ್ಮಾಹಿತಿಒದಗಿಸಲುನಿರ್ದೇಶನ
ಸಂದರ್ಭ: ‘ನನ್ನ ಮಗ ನಾಪತ್ತೆ ಆಗಿದ್ದು ಆತ ಆಧಾರ್ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಒದಗಿಸಲು ನಿರ್ದೇಶಿಸಬೇಕು’ ಎಂಬ ತಂದೆಯೊಬ್ಬರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಮಾಹಿತಿ ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ (ಯುಐಎಡಿಐ) ನಿರ್ದೇಶಿಸಿದೆ.
ಈ ಸಂಬಂಧ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ (ಧಾರವಾಡ) ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ತನಿಖೆಯ ವೇಳೆ ಪೊಲೀಸರಾಗಲಿ ಅಥವಾ ಇತರೆ ಯಾವುದೇ ಸಂಸ್ಥೆಯಾ ಗಲಿ ದೃಢೀಕರಣ ಸೇರಿದಂತೆ ಆಧಾರ್ ಅನ್ನು ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್ ಕಾಯ್ದೆ-2016ರ ಕಲಂ 33ರ ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು.
ಹೈಕೋರ್ಟ್ ಯುಐಡಿಎಐಗೆ ಆಧಾರ್ ವಿವರಗಳನ್ನು ಬಳಸಿಕೊಳ್ಳಲು ಮತ್ತು ಅದನ್ನು ಕೊನೆಯದಾಗಿ ಯಾವ ಸ್ಥಳದಲ್ಲಿ ಬಳಕೆ ಮಾಡಲಾಗಿದೆ ಎಂಬ ವಿವರ ಒದಗಿಸಲು ಸೂಕ್ತ ಆದೇಶಗಳನ್ನು ಹೊರಡಿಸಲು ಸಮಯ ಮತ್ತು ಅವಕಾಶ ನೀಡುವ ಮೂಲಕ ಆದೇಶಗಳನ್ನು ನೀಡಲಿದೆ’ ಎಂದು ನ್ಯಾಯಪೀಠ ತಿಳಿಸಿದೆ.
‘ಆಧಾರ್ ಕಾಯ್ದೆಯ ಕಲಂ 29ರ ಅಡಿಯಲ್ಲಿ ಮಾಹಿತಿ ನೀಡಲು ನಿರ್ಬಂಧವಿದೆ. ಆದರೆ, ಆ ನಿರ್ಬಂಧ ಮೂಲ ಬಯೋಮೆಟ್ರಿಕ್ ಮಾಹಿತಿಗಷ್ಟೇ ಸೀಮಿತವಾಗಿದೆ. ಆದರೆ, ಯಾರಾದರೂ ನಿರ್ದಿಷ್ಟವಾಗಿ ಅರ್ಜಿ ಸಲ್ಲಿಸಿದಾಗ ಆಧಾರ್ ಸಂಖ್ಯೆ, ಬಯೋಮೆಟ್ರಿಕ್ ಮಾಹಿತಿ ಮತ್ತು ಡೆಮೋಗ್ರಾಫಿಕ್ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ತನಿಖೆಯ ಉದ್ದೇಶಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಯುಐಡಿಎಐಗೆ ನ್ಯಾಯಾಲಯಗಳು ಸೂಕ್ತ ನಿರ್ದೇಶನ ನೀಡಬಹುದಾಗಿದೆ’ ಎಂದು ನ್ಯಾಯಪೀಠ ವಿವರಿಸಿದೆ.
‘ನನ್ನ ಮಗ 2019ರಿಂದ ಕಾಣೆ ಆಗಿದ್ದಾನೆ. ಈವರೆಗೂ ಪತ್ತೆಯಾಗಿಲ್ಲ. ಆದರೆ, 2023ರ ಜೂನ್ 20ರಂದು ಆತನ ಆಧಾರ್ ಬಳಕೆ ದೃಢೀಕರಣವಾಗಿರುವ ಮಾಹಿತಿ ಇದೆ. ಹಾಗಾಗಿ, ಆ ವಿವರ ಒದಗಿಸಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಬ್ಯಾಡ್ಮಿಂಟನ್: ಭಾರತಕ್ಕೆ 4 ಪದಕ
ಸಂದರ್ಭ: ಭಾರತ ತಂಡದ ಸ್ಪರ್ಧಿಗಳು, ಕ್ವಾಲಾಲಂಪುರದಲ್ಲಿ ಸೆ. 16 ರಿಂದ 20ರವರೆಗೆ ನಡೆದ ವಿಶೇಷ ಒಲಿಂಪಿಕ್ಸ್ ಏಷ್ಯಾ ಪೆಸಿಫಿಕ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಒಂದು ಚಿನ್ನ, ಮೂರು ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಚಾನ್ವಿ ಶರ್ಮಾ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದರು. ನಂತರ ಸುಜಿತಾ ಸುಕುಮಾರನ್ ಜೊತೆಗೂಡಿ ಡಬಲ್ಸ್‌ನಲ್ಲಿ ಬೆಳ್ಳಿ ಜಯಿಸಿದರು ಎಂದು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಪ್ರಕಟಣೆ ತಿಳಿಸಿದೆ.
ಅಂಕಿತ್ ದಲಾಲ್ ಪುರುಷರ ಸಿಂಗಲ್ಸ್‌ನಲ್ಲಿ ಬೆಳ್ಳಿ ಜಯಿಸಿದರಲ್ಲದೇ, ನಂತರ ಡಬಲ್ಸ್‌ನಲ್ಲಿ ಅಮಲ್ ಬಿಜು ಜೊತೆಗೂಡಿ ಇನ್ನೊಂದು ಬೆಳ್ಳಿ ಪದಕವನ್ನೂ ಗೆದ್ದರು.
ಜೂನಿಯರ್ ಶೂಟಿಂಗ್: ಜೊನಾಥನ್ಗೆಸ್ವರ್ಣ
ಸಂದರ್ಭ: ಭಾರತದ ಉದಯೋನ್ಮುಖ ಶೂಟರ್ ಜೊನಾಥನ್ ಗ್ಯಾವಿನ್ ಆ್ಯಂಟನಿ ಅವರು ಇಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವಕಪ್ ಟೂರ್ನಿಯ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಗುರಿ ಇಟ್ಟರು.
ಟೂರ್ನಿಯ ಎರಡನೇ ದಿನವಾದ ಶುಕ್ರವಾರ ನಡೆದ ಫೈನಲ್ ಸುತ್ತಿನಲ್ಲಿ ಜೊನಾಥನ್ ಅವರು 244.8 ಪಾಯಿಂಟ್ಸ್ ಸಂಪಾದಿಸಿದರು. ಇಟಲಿಯ ಲ್ಯೂಕಾ ಅರಿಘಿ (236.3) ಹಾಗೂ ಸ್ಪೇನ್‌ನ ಲ್ಯೂಕಾಸ‌್ ಸ್ಯಾಂಚೆಝ್ ಟೋಮ್ (215.1) ಅವರು ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದರು.
ಕ್ವಾಲಿಫಿಕೇಶನ್ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದಿದ್ದ ಭಾರತದ ಚಿರಾಗ್ ಶರ್ಮಾ ಅವರು, ಫೈನಲ್ ಹಣಾಹಣಿಯಲ್ಲಿ ನೀರಸ ಪ್ರದರ್ಶನದೊಂದಿಗೆ (115.6) ಎಂಟನೇ ಹಾಗೂ ಕೊನೆಯ ಸ್ಥಾನ ಪಡೆದರು.
ರಜತಗೆದ್ದರಶ್ಮಿಕಾ: ಜೂನಿಯರ್ ಮಹಿಳೆಯರ 10 ಮೀ. ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತದ ರಶ್ಮಿಕಾ ಸೆಹಗಲ್ ಅವರು 236.1 ಪಾಯಿಂಟ್ಸ್‌ಗಳೊಡನೆ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಸ್ವತಂತ್ರ ತಟಸ್ಥ ಸ್ಪರ್ಧಿ (ಎಎನ್‌ಎ) ಎವಿಲಿನಾ ಶೀನಾ (240.9) ಸ್ವರ್ಣ ಗೆದ್ದರೆ, ಇರಾನ್‌ನ ಫಾತಿಮಾ ಶೆಕರಿ (213.8) ಕಂಚಿನ ಪದಕ ತಮ್ಮದಾಗಿಸಿಕೊಂಡರು.
ಆದರೆ, ಕ್ವಾಲಿಫಿಕೇಶನ್ ಸ್ಪರ್ಧೆಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದ ವಂಶಿಕಾ ಚೌಧರಿ ಹಾಗೂ ಮೋಹಿನಿ ಸಿಂಗ್ ಅವರು ಪ್ರಶಸ್ತಿ ಸುತ್ತಿನಲ್ಲಿ ನಿರಾಸೆ ಅನುಭವಿಸಿದರು. ವಂಶಿಕಾ (174.2) ಅವರು 5ನೇ ಸ್ಥಾನ ಪಡೆದರೆ, ಮೋಹಿನಿ (153.2) ಅವರು 6ನೇ ಸ್ಥಾನ ಪಡೆಯಲಷ್ಟೇ ಶಕ್ತರಾದರು.
ಇವಿಎಂ ಎಣಿಕೆ ಪೂರ್ಣಗೊಳ್ಳುವ ಮೊದಲು ಅಂಚೆ ಮತಪತ್ರಗಳ ಎಣಿಕೆಯನ್ನು ಪೂರ್ಣಗೊಳಿಸಬೇಕು ಎಂಬುದು ವಿರೋಧ ಪಕ್ಷಗಳ ದೀರ್ಘಕಾಲದ ಬೇಡಿಕೆಯಾಗಿತ್ತು. ಅಂಗವಿಕಲರು ಮತ್ತು 85 ವರ್ಷ ದಾಟಿದ ಹಿರಿಯ ನಾಗರಿಕರ ಮತದಾನಕ್ಕಾಗಿ ಆಯೋಗ ಇತ್ತೀಚೆಗೆ ತೆಗೆದುಕೊಂಡ ಕ್ರಮಗಳಿಂದಾಗಿ ಅಂಚೆ ಮತಪತ್ರಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಹೀಗಾಗಿ ಆಯೋಗ ಈ ಕುರಿತು ನಿರ್ಧಾರ ತೆಗೆದುಕೊಂಡಿದೆ.
‘ಅಗ್ನಿಪ್ರೈಮ್’ ಕ್ಷಿಪಣಿಪರೀಕ್ಷೆಯಶಸ್ವಿ
ಸಂದರ್ಭ: 2,000 ಕಿ.ಮೀ ವ್ಯಾಪ್ತಿಯಲ್ಲಿನ ಗುರಿಯನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ‘ಅಗ್ನಿ ಪ್ರೈಮ್’ ಕ್ಷಿಪಣಿಯನ್ನು ರೈಲು ಬೋಗಿಯ ಮೇಲೆ ಅಳವಡಿಸಿದ್ದ ಲಾಂಚರ್‌ನಿಂದ ಉಡಾಯಿಸುವ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ.
ದೇಶದಲ್ಲಿಇದೇಮೊದಲಬಾರಿಗೆರೈಲುಬೋಗಿಯಮೇಲಿನಿಂದಕ್ಷಿಪಣಿಉಡಾಯಿಸಲಾಗಿದೆ. ಯಾವುದೇ ಭಾಗಕ್ಕೆ ತ್ವರಿತವಾಗಿ ಕ್ಷಿಪಣಿ ಕೊಂಡೊಯ್ದು, ಉಡ್ಡಯನಕ್ಕೆ ಅನುಕೂಲವಾಗುವಂತೆ ಈ ವ್ಯವಸ್ಥೆಯನ್ನು ರೂಪಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಈ ಪರೀಕ್ಷೆಯಿಂದ, ರೈಲಿನ ಮೇಲಿಂದ ಕ್ಷಿಪಣಿಯನ್ನು ಉಡಾಯಿಸಬಲ್ಲ ಸಾಮರ್ಥ್ಯವಿರುವ ದೇಶಗಳ ಗುಂಪಿಗೆ ಭಾರತ ಸೇರಿತು’ ಎಂದಿದ್ದಾರೆ.
‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಹಾಗೂ ವ್ಯೂಹಾತ್ಮಕ ಪಡೆಗಳ ಕಮಾಂಡ್ (ಎಸ್‌ಎಫ್‌ಸಿ) ಸಹಯೋಗದಲ್ಲಿ ಮಧ್ಯಂತರ ಶ್ರೇಣಿಯ ‘ಅಗ್ನಿ ಪ್ರೈಮ್’ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು’ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಅತ್ಯಾಧುನಿಕ ಸಂವಹನ ವ್ಯವಸ್ಥೆ ಹಾಗೂ ರಕ್ಷಣಾ ಕಾರ್ಯವಿಧಾನಗಳು ಸೇರಿದಂತೆ ಕ್ಷಿಪಣಿಯು ಎಲ್ಲಾ ವೈಶಿಷ್ಟ್ಯಗಳನ್ನು ಹೊಂದಿದೆ.
₹65 ಸಾವಿರಕೋಟಿಹೂಡಿಕೆಪ್ರಸ್ತಾವ
ಸಂದರ್ಭ: ‘ದೇಶದ ಆಹಾರ ಸಂಸ್ಕರಣಾ ವಲಯವು ₹1 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆ ಪ್ರಸ್ತಾವಗಳನ್ನು ಆಕರ್ಷಿಸುವ ನಿರೀಕ್ಷೆ ಇದೆ’ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
ವಿಶ್ವ ಆಹಾರ ಭಾರತ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್) ಮತ್ತು ಕೋಕಾ–ಕೋಲಾ ಕಂಪನಿಗಳ ಘಟಕಗಳನ್ನು ಸ್ಥಾಪಿಸಲು ಅಂದಾಜು ₹65 ಸಾವಿರ ಕೋಟಿ ಹೂಡಿಕೆ ಮಾಡಲು ಸಹಿ ಹಾಕಿವೆ ಎಂದು ಹೇಳಿದ್ದಾರೆ. ವಿಶ್ವ ಆಹಾರ ಭಾರತ ಶೃಂಗಸಭೆ ಸೆಪ್ಟೆಂಬರ್ 28ರ ವರೆಗೆ ನಡೆಯಲಿದೆ.
ದೇಶದಾದ್ಯಂತ ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಆಹಾರ ಸಂಸ್ಕರಣಾ ಸಚಿವಾಲಯದ ಜೊತೆಗೆ ಆರ್‌ಸಿಪಿಎಲ್ ಒಪ್ಪಂದ ಮಾಡಿ ಕೊಂಡಿದೆ. ಈ ಒಪ್ಪಂದದ ಮೌಲ್ಯ ₹40 ಸಾವಿರ ಕೋಟಿಯಾಗಿದೆ.
ಒಪ್ಪಂದದಪ್ರಕಾರ, ಆಹಾರಉತ್ಪನ್ನಗಳುಮತ್ತುಪಾನೀಯಗಳನ್ನುತಯಾರಿಸಲುಮಹಾರಾಷ್ಟ್ರದನಾಗ್ಪುರಮತ್ತುಆಂಧ್ರಪ್ರದೇಶದಕರ್ನೂಲುಜಿಲ್ಲೆಯಲ್ಲಿಘಟಕಸ್ಥಾಪಿಸಲಿದೆ. ಇದಕ್ಕೆ ಆರ್‌ಸಿಪಿಎಲ್ ₹1,500 ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದೆ.
ಕೋಕಾ–ಕೋಲಾ ₹25,760 ಕೋಟಿ ಹೂಡಿಕೆ ಮಾಡಲಿದೆ. ಇದರಿಂದ 30 ಸಾವಿರ ನೇರ ಉದ್ಯೋಗ ಮತ್ತು 3 ಲಕ್ಷ ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಈ ಯೋಜನೆಯ ಅನುಷ್ಠಾನವು ಈ ವರ್ಷ ಪ್ರಾರಂಭವಾಗಲಿದ್ದು, 2030ರ ವೇಳೆಗೆ ಪೂರ್ಣಗೊಳ್ಳುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
97 ತೇಜಸ್ ಜೆಟ್ಗಳನಿರ್ಮಾಣಕ್ಕೆಎಚ್ಎಎಲ್ಜೊತೆಗೆಒಪ್ಪಂದ
ಸಂದರ್ಭ: ಭಾರತೀಯ ವಾಯುಪಡೆಗಾಗಿ ₹62,370 ಕೋಟಿ ವೆಚ್ಚದಲ್ಲಿ 97 ತೇಜಸ್ ಲಘು ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಹಿಂದೂಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಜೊತೆಗೆ ಒಪ್ಪಂದ ಮಾಡಿಕೊಂಡಿದೆ.
2027–28ರ ವೇಳೆಗೆ ಈ ಯುದ್ಧ ವಿಮಾನಗಳನ್ನು ಎಚ್‌ಎಎಲ್ ವಿತರಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿ (ಸಿಸಿಎಸ್) ಈ ಬೃಹತ್ ಖರೀದಿಗೆ ಒಪ್ಪಿಗೆ ನೀಡಿದ ಸುಮಾರು ಒಂದು ತಿಂಗಳ ನಂತರ ಒಪ್ಪಂದ ಮಾಡಿಕೊಳ್ಳಲಾಗಿದೆ.
ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ನೀಡಲಾದ ಎರಡನೇ ಗುತ್ತಿಗೆ ಇದಾಗಿದೆ. 2021ರ ಫೆಬ್ರವರಿಯಲ್ಲಿ ವಾಯುಪಡೆಗಾಗಿ 83 ತೇಜಸ್ ಎಮ್‌ಕೆ–1ಎ ಜೆಟ್‌ಗಳನ್ನು ಖರೀದಿಸಲು ₹48,000 ಕೋಟಿಗಳ ಒಪ್ಪಂದವನ್ನು ಮಾಡಿಕೊಂಡಿತ್ತು.
ಲಡಾಖ್: ರಾಜ್ಯಸ್ಥಾನ, ಸ್ವಾಯತ್ತೆಗಾಗಿಹೋರಾಟ
2019ರ ಆಗಸ್ಟ್ 5. ಸಂವಿಧಾನದ 370ರ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ಅನ್ನು ಪ್ರತ್ಯೇಕಿಸಿ ಎರಡನ್ನೂ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರೂಪಿಸಿತ್ತು. ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳು, ಮುಖಂಡರು ವಿರೋಧಿಸಿದ್ದರು. ಜನರು ಪ್ರತಿಭಟನೆ ನಡೆಸಿದ್ದರು. ಅದು ಹಿಂಸೆಗೂ ತಿರುಗಿತ್ತು. ಆದರೆ, ಪಕ್ಕದ ಲಡಾಖ್ ಶಾಂತವಾಗಿತ್ತು. ಅಲ್ಲಿನ ಮುಖಂಡರು ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದರು. ತಮ್ಮ ಬೇಡಿಕೆಗಳು ಈಡೇರುವ ಸಮಯ ಕೊನೆಗೂ ಬಂತು ಎಂಬುದು ಲಡಾಖ್ ಜನರ ನಿರೀಕ್ಷೆಯಾಗಿತ್ತು. ಆದರೆ, ಆರಂಭದಲ್ಲಿ ಕೇಂದ್ರದ ನಿರ್ಧಾರ ಸ್ವಾಗತಿಸಿದವರೇ ವರ್ಷವಾಗುವಷ್ಟರಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಲು ಆರಂಭಿಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟದ ದಾರಿ ಕಂಡುಕೊಂಡರು. ಪ್ರತಿಭಟನೆ, ರ‍್ಯಾಲಿ, ಉಪವಾಸ ಸತ್ಯಾಗ್ರಹಗಳಿಗೆ ಸೀಮಿತವಾಗಿದ್ದ ಹೋರಾಟ ಎರಡು ವರ್ಷಗಳಿಂದೀಚೆಗೆ ತೀವ್ರಗೊಂಡು, ಅದೀಗ ಹಿಂಸಾರೂಪ ತಾಳುವ ಮಟ್ಟಕ್ಕೆ ಏರಿದೆ.
ಲಡಾಖ್‌ನ ಲೇಹ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯು ಹಿಂಸಾಚಾರವಾಗಿ ಪರಿವರ್ತನೆಗೊಂಡು ನಾಲ್ವರು ಮೃತಪಟ್ಟಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ ಸ್ವಾಯತ್ತ ಪ್ರದೇಶ ಎಂದು ಘೋಷಿಸಬೇಕು ಎಂಬುದು ಲಡಾಖ್ ಜನರ ಪ್ರಮುಖ ಬೇಡಿಕೆ.
‘ಝೆನ್ ಜಿ’ ಹೋರಾಟ: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಇಬ್ಬರು ತೀವ್ರ ಅಸ್ವಸ್ಥಗೊಂಡಿದ್ದು ಬುಧವಾರ ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ನೆಪ. ಹಿಂಸೆಗೆ ತಿರುಗಿದ ಈ ಹೋರಾಟವನ್ನು ನೇಪಾಳದಲ್ಲಿ ಇತ್ತೀಚೆಗೆ ನಡೆದ ‘ಝೆನ್ ಜಿ’ ಪೀಳಿಗೆಯವರ ಪ್ರತಿಭಟನೆಗೆ ಹೋಲಿಸಲಾಗುತ್ತಿದೆ. ರಾಜ್ಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಚಳವಳಿಯ ಮುಂಚೂಣಿಯಲ್ಲಿರುವ ಪರಿಸರವಾದಿ, ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರೇ ಇದು ‘ಝೆನ್ ಜಿ’ ಹೋರಾಟ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಇದೇ ರೀತಿ ಬಿಂಬಿಸಲಾಗುತ್ತಿದೆ. ಹಿಂಸಾಚಾರ ನಿಯಂತ್ರಣಕ್ಕೆ ಬಂದಿದೆ. ಆದರೆ, ಲೇಹ್ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.
2019ರಲ್ಲಿ ವಿಶೇಷ ಸ್ಥಾನಮಾನ ರದ್ದುಪಡಿಸುವಾಗ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ್ದರೂ ಅಲ್ಲಿ ವಿಧಾನಸಭೆಯನ್ನು ಉಳಿಸಿಕೊಳ್ಳಲಾಗಿತ್ತು (ವಿಧಾನ ಪರಿಷತ್ ಅನ್ನು ರದ್ದುಪಡಿಸಲಾಗಿತ್ತು). ಆದರೆ, ಲಡಾಖ್ ಅನ್ನು ಶಾಸಕಾಂಗ ವ್ಯವಸ್ಥೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ರೂಪಿಸಲಾಗಿತ್ತು. ಇದರಿಂದಾಗಿ ಲಡಾಖ್‌ನಲ್ಲಿ ರಾಜಕೀಯ ಶೂನ್ಯ ಆವರಿಸಿದೆ. ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ನೇರವಾಗಿ ಆಡಳಿತ ನಡೆಸುವುದರಿಂದ ಸ್ಥಳೀಯರಿಗೆ ರಾಜಕೀಯ ಪ್ರಾತಿನಿಧ್ಯ ಇಲ್ಲದಂತಾಗಿದೆ, ಪ್ರಜಾಪ್ರಭುತ್ವದ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂಬುದು ವಾಂಗ್‌ಚುಕ್ ಹಾಗೂ ಹೋರಾಟಗಾರರ ಆರೋಪ.
ಸೂಕ್ಷ್ಮ ಪರಿಸರ ವ್ಯವಸ್ಥೆ, ನೈಸರ್ಗಿಕ ಸಂಪತ್ತು ಹೊಂದಿರುವ ಈ ಪ್ರದೇಶದಲ್ಲಿ ಕೈಗಾರಿಕೆಗಳಿಗೆ, ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ. ಇದರಿಂದ ಪರಿಸರ ನಾಶವಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ತೊಂದರೆಯಾಗುತ್ತಿದೆ. ಲಡಾಖ್‌ನ ಸಾಂಸ್ಕೃತಿಕ ಅಸ್ಮಿತೆಗೂ ಧಕ್ಕೆಯಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗಗಳು ಸಿಗುತ್ತಿಲ್ಲ ಎಂಬ ಆತಂಕ ಅವರದ್ದು. ಸ್ವಾಯತ್ತ ಪ್ರದೇಶವಾಗಿ ಘೋಷಿಸಿದರೆ, ಸ್ಥಳೀಯವಾಗಿ ರಾಜಕೀಯ ಪ್ರಾತಿನಿಧ್ಯ ಸಿಕ್ಕಿ, ಸ್ಥಳೀಯರೇ ಆಡಳಿತ ನಡೆಸಲು ಅನುಕೂಲವಾಗುತ್ತದೆ ಎಂಬುದು ಅವರ ವಾದ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 2019ರಲ್ಲಿ ಲಡಾಖ್ ಅನ್ನು ಆರನೇ ಪರಿಚ್ಛೇದಕ್ಕೆ ಸೇರಿಸುವ ಭರವಸೆ ನೀಡಿತ್ತು. ಆದರೆ, ಅದನ್ನು ಇನ್ನೂ ಈಡೇರಿಸಿಲ್ಲ ಎಂಬುದು ಹೋರಾಟಗಾರರ ಕೋಪಕ್ಕೆ ಪ್ರಮುಖ ಕಾರಣ.
ಸಮಿತಿ ರಚನೆ: 2020ರಿಂದೀಚೆಗೆ ಲಡಾಖ್‌ನಲ್ಲಿ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮತ್ತು ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಅಡಿಯಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿದ್ದರಿಂದ ಅಲ್ಲಿನ ಜನರ ಬೇಡಿಕೆಗಳನ್ನು ಅಧ್ಯಯನ ನಡೆಸುವುದಕ್ಕಾಗಿ ಕೇಂದ್ರ ಸರ್ಕಾರ 2023ರ ಜನವರಿ 2ರಂದು ಉನ್ನತಾಧಿಕಾರ ಸಮಿತಿಯನ್ನು ರಚಿಸಿತ್ತು. ಕೇಂದ್ರ ಸರ್ಕಾರವು ಈ ವಿಚಾರವಾಗಿ ಲಡಾಖ್ ನಾಯಕತ್ವದೊಂದಿಗೆ ಹಲವು ಸುತ್ತಿನ ಮಾತುಕತೆಯನ್ನೂ ನಡೆಸಿದೆ. ಅಕ್ಟೋಬರ್ 6ರಂದು ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದೆ.
ಈ ಹಿಂದೆ, ಲಡಾಖ್‌ನ ಮುಖಂಡರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟ ವೇಳೆ ರಾಜ್ಯ ಸ್ಥಾನಮಾನ ನೀಡಲು ಮತ್ತು ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಅವರು ನಿರಾಕರಿಸಿದ್ದರು ಎನ್ನಲಾಗಿದ್ದು, ಇದು ಚಳವಳಿ ನಡೆಸುತ್ತಿರುವವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಆಧಾರ: ಪಿಟಿಐ, ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ ಕಾಯ್ದೆ, ಪಿಐಬಿ, ಮಾಧ್ಯಮ ವರದಿಗಳು
ಏನಿದು 6ನೇ ಪರಿಚ್ಛೇದ?
ಸಂವಿಧಾನದ ವಿಧಿ 244(2) ಮತ್ತು ವಿಧಿ 275(1) ಅಡಿಯಲ್ಲಿ ಈ ಪರಿಚ್ಛೇದವನ್ನು ಸೇರ್ಪಡೆಗೊಳಿಸಲಾಗಿದೆ.
ಭಾರತದ ಈಶಾನ್ಯ ಭಾಗದಲ್ಲಿರುವ ಅಸ್ಸಾಂ, ಮೇಘಾಲಯ, ತ್ರಿಪುರಾ ಮತ್ತು ಮಿಜೋರಾಂ ರಾಜ್ಯಗಳ ಬುಡಕಟ್ಟು ಜನರು ವಾಸಿಸುವ ಪ್ರದೇಶಗಳಲ್ಲಿ ಆಡಳಿತ ನಿರ್ವಹಣೆಯ ಅವಕಾಶವನ್ನು ಈ ಪರಿಚ್ಛೇದ ನೀಡುತ್ತದೆ.
ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶದಲ್ಲಿ ಸ್ವಾಯತ್ತ ಜಿಲ್ಲಾ ಕೌನ್ಸಿಲ್‌ಗಳನ್ನು ಮತ್ತು ಪ್ರಾದೇಶಿಕ ಕೌನ್ಸಿಲ್‌ಗಳನ್ನು ಸ್ಥಾಪಿಸಬಹುದು ಎಂದು ಇದು ಹೇಳುತ್ತದೆ.
ಸ್ವಯಂ ಆಡಳಿತ ನಡೆಸಲು, ಈಶಾನ್ಯ ರಾಜ್ಯದ ಆದಿವಾಸಿ ಸಮುದಾಯಗಳ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಕ್ಕಾಗಿ ಕೌನ್ಸಿಲ್‌ಗಳಿಗೆ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಅಧಿಕಾರವನ್ನು ಈ ಪರಿಚ್ಛೇದ ನೀಡುತ್ತದೆ.
ಯಾವುದೇ ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮತ್ತು ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರ ಪ್ರಮಾಣ ಶೇ 50ಕ್ಕಿಂತಲೂ ಹೆಚ್ಚು ಇದ್ದರೆ, ಆ ಪ್ರದೇಶವನ್ನು 6ನೇ ಪರಿಚ್ಛೇದಕ್ಕೆ ಸೇರಿಸಲು ಸಂವಿಧಾನದಲ್ಲಿ ಅವಕಾಶವಿದೆ.
ಕೇಂದ್ರದ ಅಂಕಿ ಅಂಶಗಳ ಪ್ರಕಾರ ಲಡಾಖ್‌ನಲ್ಲಿ ಬುಡಕಟ್ಟು ಸಮುದಾಯಗಳ ಜನಸಂಖ್ಯೆ ಶೇ 97ರಷ್ಟಿದೆ.
ಆಯೋಗ ಶಿಫಾರಸು: ಲಡಾಖ್‌ನಲ್ಲಿ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆ ಪ್ರದೇಶವನ್ನು ಸಂವಿಧಾನದ ಐದನೇ/ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬಹುದು ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ 2019ರ ಸೆಪ್ಟೆಂಬರ್‌ನಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಪ್ರಮುಖ ಬೇಡಿಕೆಗಳು
lರಾಜ್ಯದ ಸ್ಥಾನಮಾನ ನೀಡಬೇಕು
lಲಡಾಖ್‌ನ ಸೂಕ್ಷ್ಮ ಪರಿಸರ, ಸಂಪನ್ಮೂಲಗಳು, ಜನರ ಭೂ ಒಡೆತನದ ಹಕ್ಕು ಮತ್ತು ಸಾಂಸ್ಕೃತಿಕ ಅನನ್ಯತೆಗೆ ಸಾಂವಿಧಾನಿಕ ರಕ್ಷಣೆ ಒದಗಿಸಬೇಕು (ಆರನೇ ಪರಿಚ್ಛೇದಕ್ಕೆ ಸೇರಿಸಬೇಕು)
lಲೇಹ್ ಮತ್ತು ಕಾರ್ಗಿಲ್‌ಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಕು (ಸದ್ಯ ಲಡಾಖ್ ಒಂದೇ ಕ್ಷೇತ್ರ ಇದೆ)
lಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು
ಕೇಂದ್ರ ಸರ್ಕಾರದ ವಾದವೇನು?
ಸಂಸತ್ತಿನಲ್ಲಿ, ಸುಪ್ರೀಂಕೋರ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಲು ಬದ್ಧ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿದೆ. ಆದರೆ, ಲಡಾಖ್ ಬಗ್ಗೆ ಅದು ಈ ರೀತಿ ಹೇಳಿಲ್ಲ.
ಲಡಾಖ್ ಆಡಳಿತಕ್ಕಾಗಿ ಲಡಾಖ್ ಸ್ವಾಯತ್ತ ಗಿರಿ ಅಭಿವೃದ್ಧಿ ಮಂಡಳಿಗಳನ್ನು (ಲೇಹ್ ಮತ್ತು ಕಾರ್ಗಿಲ್‌ಗೆ) ರಚಿಸಲಾಗಿದೆ. ಇವು ಸ್ವಾಯತ್ತ ಸಂಸ್ಥೆಯಾಗಿದ್ದು, ಆಡಳಿತ, ಆರ್ಥಿಕ ಅಭಿವೃದ್ಧಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ನಿರ್ವಹಿಸಲು ಇವುಗಳಿಗೆ ಅಧಿಕಾರ ಇದೆ ಎಂಬುದು ಕೇಂದ್ರ ಸರ್ಕಾರದ ವಾದ.
ಆದರೆ, ಈ ಮಂಡಳಿಯ ಅಧಿಕಾರ ಸೀಮಿತವಾಗಿದೆ ಎಂಬುದು ಹೋರಾಟಗಾರರ ಹೇಳಿಕೆ
ಆಯೋಗ ಶಿಫಾರಸು
ಲಡಾಖ್‌ನಲ್ಲಿ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆ ಪ್ರದೇಶವನ್ನು ಸಂವಿಧಾನದ ಐದನೇ/ಆರನೇ ಶೆಡ್ಯೂಲಿಗೆ ಸೇರ್ಪಡೆಗೊಳಿಸಬಹುದು ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ 2019ರ ಸೆಪ್ಟೆಂಬರ್‌ನಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಆಯೋಗದ 119ನೇ ಸಭೆಯಲ್ಲಿ ಈ ವಿಚಾರವನ್ನು ವಿಸ್ತೃತವಾಗಿ ಚರ್ಚೆ ನಡೆಸಿ, ನಂತರ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು.
ನಿರಾಸಕ್ತಿ ಏಕೆ?
ಲಡಾಖ್‌ನಲ್ಲಿ ಭಾರತ–ಚೀನಾ ಗಡಿ ಪ್ರದೇಶವಿದ್ದು, ಎರಡೂ ದೇಶಗಳ ನಡುವಿನ ಗಡಿ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಆಗಾಗ ಘರ್ಷಣೆಯೂ ನಡೆಯುತ್ತಿರುತ್ತದೆ. ಅತ್ಯಂತ ಸೂಕ್ಷ್ಮವಾಗಿರುವ ಈ ಪ್ರದೇಶದ ಆಡಳಿತ ನೇರವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬಂದರೆ ಗಡಿ ಭದ್ರತೆಯ ದೃಷ್ಟಿಯಿಂದ ಸಾಕಷ್ಟು ಅನುಕೂಲವಿದೆ ಎಂಬ ಕಾರಣಕ್ಕೆ ರಾಜ್ಯದ ಸ್ಥಾನಮಾನ ಅಥವಾ ಸಾಂವಿಧಾನಿಕವಾಗಿ ಇನ್ನಷ್ಟು ಸ್ವಾಯತ್ತೆ ನೀಡಲು ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ.
‘ಪ್ಯಾಲೆಸ್ಟೀನ್: ಭಾರತನಾಯಕತ್ವಪ್ರದರ್ಶಿಸಬೇಕು’
ಸಂದರ್ಭ: ಪ್ಯಾಲೆಸ್ಟೀನ್ ವಿಚಾರದಲ್ಲಿ ಭಾರತವು ನಾಯಕತ್ವವನ್ನು ಪ್ರದರ್ಶಿಸಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.
‘ಪ್ಯಾಲೆಸ್ಟೀನ್ ಅನ್ನುದೇಶವೆಂದುಗುರುತಿಸುವಲ್ಲಿಬ್ರಿಟನ್, ಕೆನಡಾ, ಪೋರ್ಚುಗಲ್, ಆಸ್ಟ್ರೇಲಿಯಾಜತೆಗೆಇದೀಗಫ್ರಾನ್ಸ್ ಸಹಸೇರಿಕೊಂಡಿದೆ. ದೀರ್ಘ ಕಾಲದಿಂದ ಬಳಲಿರುವ ಪ್ಯಾಲೆಸ್ಟೀನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಈಡೇರಿಸಲು ಇದು ಮಹತ್ವದ ಹೆಜ್ಜೆಯಾಗಿದೆ’ ಎಂದು ವಿವರಿಸಿರುವ ಅವರು, ವಿಶ್ವಸಂಸ್ಥೆಯ 193 ದೇಶಗಳ ಪೈಕಿ 150ಕ್ಕೂ ಹೆಚ್ಚು ದೇಶಗಳು ಪ್ಯಾಲೆಸ್ಟೀನ್ ಅನ್ನು ಬೆಂಬಲಿಸಿವೆ ಎಂದೂ ಉಲ್ಲೇಖಿಸಿದ್ದಾರೆ.
ಭಾರತವು 1988ರನವೆಂಬರ್ 18ರಂದುಪ್ಯಾಲೆಸ್ಟೀನ್ ಅನ್ನುದೇಶವಾಗಿಗುರುತಿಸುವಮೂಲಕನಾಯಕತ್ವಪ್ರದರ್ಶಿಸಿತ್ತು.
ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿಯನ್ನು ಸ್ವಾತಂತ್ರ್ಯ ಪೂರ್ವದಲ್ಲಿಯೇ ಭಾರತ ಪ್ರಶ್ನಿಸಿತ್ತು. ಅಲ್ಲದೆ 1954–62ರ ಅಲ್ಜೀರಿಯಾ ಸ್ವಾತಂತ್ರ್ಯ ಹೋರಾಟದ ವೇಳೆ ಭಾರತ ಅಲ್ಜೀರಿಯಾ ಪರ ಬಲವಾಗಿ ಧ್ವನಿಯೆತ್ತಿತ್ತು.
ಪೂರ್ವ ಪಾಕಿಸ್ತಾನದಲ್ಲಿನ ನರಮೇಧವನ್ನು ತಡೆಯಲು ಭಾರತ ಮಧ್ಯ ಪ್ರವೇಶಿಸಿತ್ತು. ಆ ಬಳಿಕ 1971ರಲ್ಲಿ ಬಾಂಗ್ಲಾದೇಶ ಜನನವಾಯಿತು ಎಂಬ ಮಾಹಿತಿಯನ್ನು ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.
ನ್ಯಾಯ, ಗುರುತು, ಘನತೆ ಮತ್ತು ಮಾನವ ಹಕ್ಕುಗಳಿಗಾಗಿ ನಡೆಯುತ್ತಿರುವ ಪ್ಯಾಲೆಸ್ಟೀನ್ ಹೋರಾಟದ ಬಗ್ಗೆ ಭಾರತ ನಾಯಕತ್ವವನ್ನು ಪ್ರದರ್ಶಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.
ತಿರುಮಲ: ಎ.ಐಕಮಾಂಡ್– ಕಂಟ್ರೋಲ್ ಕೇಂದ್ರಸ್ಥಾಪನೆ
ಸಂದರ್ಭ: ವಿಶ್ವದ ಅತೀ ಶ್ರೀಮಂತ ಹಿಂದೂ ದೇವಾಲಯವಾದ ತಿರುಮಲದ ತಿಮ್ಮಪ್ಪನ ಸನ್ನಿಧಾನದಲ್ಲಿ ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ಆಧಾರಿತ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ)ಗೆ ಚಾಲನೆ ನೀಡಲಾಗಿದೆ.
ಪ್ರತಿ ಗಂಟೆಗೆ 4,500 ಮಂದಿ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದು, ಹೊಸ ಸೌಲಭ್ಯವು ಭಕ್ತಿ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಸಮ್ಮಿಳಿತವಾಗಿದೆ.
ಅನಿವಾಸಿ ಭಾರತೀಯರು ನೀಡಿದ ದಾನದಿಂದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. 6 ಸಾವಿರ ಎ.ಐ ನಿಗಾ ಕ್ಯಾಮೆರಾಗಳು ಕಮಾಂಡ್ ಕೇಂದ್ರಗಳಿಗೆ ನಿರಂತರ ಲೈವ್ ವಿಡಿಯೊ ರವಾನಿಸಲಿವೆ. ಇದರಿಂದ, ದಟ್ಟಣೆ ವೇಳೆ ಸರತಿಯ ಸಾಲು ನಿರ್ವಹಣೆಯ ಜೊತೆಗೆ ಕ್ಷಿಪ್ರವಾಗಿ ಸ್ಪಂದಿಸಲು ನೆರವಾಗಲಿದೆ.
ಗ್ರಾಮಸಹಾಯಕರಿಗೆಇಡುಗಂಟು
ಸಂದರ್ಭ: ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಕೆಲಸದಿಂದ ನಿವೃತ್ತಿ ಹೊಂದಿದ ನಂತರ ಅಥವಾ ಕೆಲಸದಲ್ಲಿ ಇರುವಾಗಲೇ ಮೃತರಾದರೆ ₹10 ಲಕ್ಷಗಳ ಇಡುಗಂಟು ನೀಡಲು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಅಲ್ಲದೇ, ಈ ಕೆಲಸವನ್ನು ಗ್ರೂಪ್ ‘ಡಿ’ ಹುದ್ದೆಯಲ್ಲಿ ಸಕ್ರಮಗೊಳಿಸುವುದು ಅಥವಾ ಗೌರವ ಧನವನ್ನು ₹15,000 ದಿಂದ ₹27,000ಕ್ಕೆ ಹೆಚ್ಚಿಸುವುದು ಇವೆರಡಲ್ಲಿ ಒಂದು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಬಾಡಿಗೆ ಮಸೂದೆಗೆ ಒಪ್ಪಿಗೆ: ಕೇಂದ್ರ ಸರ್ಕಾರವು ‘ಜನ ವಿಶ್ವಾಸ’ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದನ್ನು ರಾಜ್ಯದಲ್ಲಿ ಜಾರಿಗೆ ತರಲು ಕರ್ನಾಟಕ ಬಾಡಿಗೆ ಕಾಯ್ದೆ 1999ರ ವಿವಿಧ ಕಲಂಗಳ ಅಡಿಯಲ್ಲಿ ದಂಡ, ಅಪರಾಧ ನಿಬಂಧನೆ ಗಳಿಗೆ ತಿದ್ದುಪಡಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.
ಇದು ಕೈಗಾರಿಕಾ ಕಟ್ಟಡಗಳು, ಶೆಡ್‌ಗಳ ಬಾಡಿಗೆ ಸಂಬಂಧಿಸಿ ದ್ದಾಗಿದೆ. ಈ ತಿದ್ದುಪಡಿ ಮಸೂದೆಯನ್ನು ವಿಧಾನ ಮಂಡಲದ ಅಧಿವೇಶನ ದಲ್ಲಿ ಮಂಡಿಸ ಲಾಗುವುದು. ಈ ತಿದ್ದುಪಡಿ ಮೂಲಕ ದಂಡ ಪ್ರಮಾಣವನ್ನು ತರ್ಕಬದ್ಧ ಗೊಳಿಸಲಾಗುವುದು ಎಂದು ಪಾಟೀಲ ಹೇಳಿದರು.
ಮುಖ್ಯವಾಗಿ ವಿವಿಧ ಅಪರಾಧದ ಪ್ರಕರಣಗಳನ್ನು ಅಪರಾಧವಲ್ಲ ಎಂದು ನಿರ್ಣಯಿಸುವುದು, ವಿವಿಧ ರೀತಿಯ ದಂಡಗಳನ್ನು ಪರಿಷ್ಕರಿಸುವುದು, ನ್ಯಾಯಾಂಗ ಅಧಿಕಾರಿ ಯನ್ನು ನೇಮಿಸುವುದು, ಮೇಲ್ಮನವಿ ಘಟಕದ ಸ್ಥಾಪನೆ ಮತ್ತು ದಂಡ ಪ್ರಮಾಣವನ್ನು ಕಾಲ ಕಾಲಕ್ಕೆ ಹೆಚ್ಚಿಸುವ ಅಂಶವನ್ನು ತಿದ್ದುಪಡಿ ಒಳಗೊಂಡಿದೆ ಎಂದರು.
ವಿಪತ್ತುಉಪಶಮನಕ್ಕೆ ₹1,005 ಕೋಟಿ
ಸಂದರ್ಭ: ರಾಜ್ಯದ ವಿಪತ್ತು ಉಪಶಮನ ನಿಧಿಯಡಿ ₹1,005 ಕೋಟಿ ವೆಚ್ಚದಲ್ಲಿ ವಿವಿಧ ಜಿಲ್ಲೆಗಳಲ್ಲಿ ಉಪಶಮನ ಕಾಮಗಾರಿಗಳನ್ನು ಕೈಗೊಳ್ಳಲು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿನ ಪುನರಾವರ್ತಿತ ಭೂಕುಸಿತವನ್ನು ತಡೆಗಟ್ಟಲು ₹466.93 ಕೋಟಿ ವೆಚ್ಚದಲ್ಲಿ 720 ಕಾಮಗಾರಿ ಕೈಗೊಳ್ಳಲು ಒಪ್ಪಿಗೆ ನೀಡಲಾಗಿದೆ ಎಂದರು.
ರೈತರುತಮ್ಮಜಮೀನಿನಲ್ಲಿಬಿದ್ದಮಳೆಯನೀರನ್ನುಹೊಂಡಗಳಲ್ಲಿಸಂಗ್ರಹಿಸಿಆಪತ್ಕಾಲದಲ್ಲಿಬೆಳೆಗಳಿಗೆಬಳಸಲು ‘ಕೃಷಿಭಾಗ್ಯ’ ಯೋಜನೆಯಡಿಹಣಕಾಸುನೆರವುಒದಗಿಸಲುತೀರ್ಮಾನಿಸಲಾಗಿದೆ. ಇದಕ್ಕಾಗಿ ₹200 ಕೋಟಿ ಅನುದಾನವನ್ನು ಕೃಷಿ ಇಲಾಖೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಸಣ್ಣನೀರಾವರಿಇಲಾಖೆವಿಶ್ವಬ್ಯಾಂಕ್ನಿಂದ ₹550 ಕೋಟಿಆರ್ಥಿಕನೆರವುಪಡೆದುಕೊಂಡಿದೆ. ಇದರಲ್ಲಿ ₹300 ಕೋಟಿಯನ್ನುಬೆಂಗಳೂರುನಗರದದ್ವಿತೀಯಹಂತದಲ್ಲಿಸಂಸ್ಕರಿಸಿದನೀರನ್ನುಬೆಂಗಳೂರುನಗರ, ಬೆಂಗಳೂರುಗ್ರಾಮಾಂತರಪೂರೈಕೆಮಾಡಲುಹಾಗೂಚಿಕ್ಕಬಳ್ಳಾಪುರಜಿಲ್ಲೆಗಳಕೆರೆಗಳಿಗೆಲಿಫ್ಟ್–4 ವೃಷಭಾವತಿವ್ಯಾಲಿಯೋಜನೆ– ಹಂತ 2 ರಮೂಲಕನೀರನ್ನುತುಂಬಿಸುವಯೋಜನೆಗೆಬಳಸಲುಒಪ್ಪಿಗೆನೀಡಲಾಗಿದೆಎಂದು ಅವರು ತಿಳಿಸಿದರು.
ಪ್ರಮುಖ ತೀರ್ಮಾನಗಳು:
15 ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ವಿಸ್ತರಣೆ ಮತ್ತು ಆಧುನೀಕರಣಕ್ಕೆ ₹329 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ
ನವದೆಹಲಿ ಚಾಣಕ್ಯಪುರಿ ಸರ್ದಾರ್ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ–2(ಶರಾವತಿ) ಕಟ್ಟಡದ ನವೀಕರಣಕ್ಕೆ ₹16.30 ಕೋಟಿ
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ 2019 ರ ಮಾರ್ಚ್ 31 ಕ್ಕೆ ಮೊದಲು ನೋಂದಣಿಯಾದ ವಾಹನಗಳ ದಾಖಲೆಗಳನ್ನು ಡಿಜಿಟಲೀಕರಣ ಗೊಳಿಸುವ ಯೋಜನೆಗೆ ₹40 ಕೋಟಿ
ಕೆಎಸ್‌ಆರ್‌ಪಿ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐಆರ್‌ಬಿ ಪಡೆಗಳಿಗೆ ಅವಶ್ಯವಿರುವ ವಸತಿ ಮತ್ತು ವಸತಿಯೇತರ ಸೌಕರ್ಯಗಳನ್ನು ಕಲ್ಪಿಸಲು ₹60 ಕೋಟಿ
ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2 ನೇ ಆವೃತ್ತಿಯನ್ನು ₹40.29 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಮ್ಮತಿ
ಕರ್ನಾಟಕಕೌಶಲಅಭಿವೃದ್ಧಿನೀತಿಗೆಅಸ್ತು
ಸಂದರ್ಭ: ಕರ್ನಾಟಕದ ಯುವ ಜನತೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ನಿಟ್ಟಿನಲ್ಲಿ ಕೌಶಲ ಸಾಮರ್ಥ್ಯವನ್ನು ಹೆಚ್ಚಿಸಲು ‘ಕರ್ನಾಟಕ ಕೌಶಲ ಅಭಿವೃದ್ಧಿ ನೀತಿ 2025–2032’ ಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕೌಶಲ ನೀತಿ ಪ್ರಮುಖ ಅಂಶಗಳು:
ಕಲಿಕೆ ಜೊತೆಗೆ ಕೌಶಲ, ‘ನನ್ನವೃತ್ತಿನನ್ನಆಯ್ಕೆ’ಯೋಜನೆಗೆಆದ್ಯತೆ. ಅಪ್ರೆಂಟಿಸ್‌ಶಿಪ್, ಐಟಿಐ ತರಬೇತಿ ಮೂಲಕ ವಿಶೇಷ ಸಹಯೋಗ. ತಾಂತ್ರಿಕ ಮತ್ತು ಕೈಗಾರಿಕಾ ಬದಲಾವಣೆಗಳಿಗೆ ತಕ್ಕಂತೆ ನಿರಂತರ ಕಲಿಕೆಗೆ ಒತ್ತು. ಮಹಿಳೆಯರು, ಅಂಗವಿಕಲರು, ನಗರ ಪ್ರದೇಶದ ಬಡವರು, ದಮನಿತ ಸಮುದಾಯಗಳಿಗೆ ತರಬೇತಿ. ಐಟಿಐಗಳ ಆಧುನೀಕರಣ, ಜಿಟಿಟಿಸಿ ವಿಸ್ತರಣೆ ಮತ್ತು ಗ್ರಾಮೀಣ ಮತ್ತು ನಗರ ಕೌಶಲ ಕೇಂದ್ರಗಳ ಸ್ಥಾಪನೆ ಮತ್ತು ಮೂಲಸೌಕರ್ಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು.
‘ಬೆಂಗಳೂರುಸಿಟಿದಿಶಾಂಕ್’ ಬಿಡುಗಡೆ
ಸಂದರ್ಭ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ‘ಬೆಂಗಳೂರು ಸಿಟಿ ದಿಶಾಂಕ್’ ಬಿಡುಗಡೆ ಮಾಡಲಾಗಿದೆ.
ಇದು ಜಿಐಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್) ಅಧಿಕೃತ ಗಡಿಗಳನ್ನು ವೀಕ್ಷಿಸಬಹುದು. ಮುಂದಿನ ದಿನಗಳಲ್ಲಿ ಮತ್ತಷ್ಟು ವಿವರಗಳಿರುವ ಜಿಐಎಸ್ ಮಾಹಿತಿ ಸೇರಿಸಲಾಗುವುದು.
ಜೂನಿಯರ್ಶೂಟಿಂಗ್: ಅನುಷ್ಕಾಗೆಚಿನ್ನದಪದಕ
ಸಂದರ್ಭ: ಭಾರತ ತಂಡವು, ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವಕಪ್‌ನಲ್ಲಿ ಭರ್ಜರಿ ಆರಂಭ ಮಾಡಿತು.
ಮೊದಲ ದಿನವಾದ ಗುರುವಾರ 50 ಮೀ. ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಮಹಿಳಾ ತಂಡ ಮೂರೂ ಪದಕ ಗೆದ್ದು ಕ್ಲೀನ್ ಸ್ವೀಪ್ ಮಾಡಿದರೆ, ಪುರುಷರ ತಂಡ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದುಕೊಂಡಿತು.
ಕರ್ನಾಟಕದ ಅನುಷ್ಕಾ ತೋಕೂರು ಅವರು ಡಾ.ಕರ್ಣಿ ಸಿಂಗ್ ರೇಂಜ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ 621.6 ಸ್ಕೋರ್‌ನೊಡನೆ ಚಿನ್ನ ಗೆದ್ದರು.
18 ವರ್ಷ ವಯಸ್ಸಿನ ಅನ್ಶಿಕಾ (619.2) ಬೆಳ್ಳಿ ಗೆದ್ದರೆ, 20 ವರ್ಷ ವಯಸ್ಸಿನ ಆಧ್ಯಾ ಅಗರವಾಲ್ (615.9) ಕಂಚಿನ ಪದಕ ಗೆದ್ದರು.
ಕಜಕಸ್ತಾನದಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಅನುಷ್ಕಾ ಅವರು 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಗುರಿಯಿಡುವಲ್ಲಿ ಯಶಸ್ವಿ ಆಗಿದ್ದರು.
ದೀಪೇಂದ್ರ ಸಿಂಗ್ ಶೆಖಾವತ್ ಮತ್ತು ರೋಹಿತ್ ಕನ್ಯಾನ ಅವರು ಪುರುಷರ ವಿಭಾಗದ 50 ಮೀ. ರೈಪಲ್ ಪ್ರೋನ್ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚು ಗೆದ್ದರು. ತಟಸ್ಥ ಅಥ್ಲೀಟ್ಸ್ ತಂಡದ ಕಮಿಲ್ ನುರಿಯಾಕ್‌ಮೆಟೋವ್ (618.9) ಚಿನ್ನ ಗೆದ್ದರು. ದೀಪೇಂದ್ರ 617.9 ಮತ್ತು ರೋಹಿತ್ 616.3 ಸ್ಕೋರ್
ಸಂದರ್ಭ: ಭೈರಪ್ಪನವರ ಜೊತೆಗೆ ಕನ್ನಡ ಸಾರಸ್ವತಲೋಕದ ಒಂದು ಮಹಾಧ್ಯಾಯ ಅಂತ್ಯ ಗೊಂಡಿದೆ. ಭೈರಪ್ಪ ಅವರು ತಮ್ಮ ಸುದೀರ್ಘ ಬದುಕಿನಲ್ಲಿ ಕನ್ನಡ ಸಾಹಿತ್ಯಲೋಕಕ್ಕೆ ಮತ್ತು ಸಹೃದಯರಿಗೆ ರಸಾನಂದದ ಜಲಪಾತವನ್ನೇ ಒದಗಿಸಿದ್ದಾರೆ.
ಕೇವಲ ಕಾದಂಬರಿಗಳನ್ನು ರಚಿಸುತ್ತೇನೆ ಎಂದು ಭೀಷ್ಮನಿಷ್ಠೆಯಿಂದ ಸಂಕಲ್ಪ ಮಾಡಿ ಬರೆದವರು ಭೈರಪ್ಪನವರು. ಸಾಹಿತ್ಯಕೃಷಿಯ ಪ್ರಾರಂಭದ ಅವಧಿಯಲ್ಲಿ ಸಣ್ಣಕತೆಗಳನ್ನು ಬರೆದರಾದರೂ ನಂತರ ತಮ್ಮ ಶಕ್ತಿ ಮತ್ತು ವಿಸ್ತಾರ ದೃಷ್ಟಿಗೆ ಅನುಕೂಲವಾಗುವಂತಹ ಕಾದಂಬರಿಯ ಪ್ರಕಾರವನ್ನೇ ಅವರ ಅಭಿವ್ಯಕ್ತಿಗೆ ಆರಿಸಿಕೊಂಡರು.
ತಾವು ಅಪಾರ ಪ್ರೀತಿ ಇಟ್ಟುಕೊಂಡಿದ್ದ ಹಿಂದೂಸ್ಥಾನಿ ಶೈಲಿಯ ಸಂಗೀತದಂತೆಯೇ ಮಾನವ ಸ್ವಭಾವದ ಹಲವು ಮಗ್ಗಲುಗಳನ್ನು ವಿಸ್ತಾರವಾಗಿ ಅನ್ವೇಷಿಸುವಂತಹ ರೀತಿಯಲ್ಲಿ ಕಾದಂಬರಿಗಳನ್ನು ರಚಿಸಿದರು. ಇವು ಭಾರತೀಯತೆಯ ಶ್ರುತಿಗೂ, ಜೀವನದ ಸತ್ಯ, ಶಿವ, ಸೌಂದರ್ಯಗಳ ಲಯಸಂಚಾರಕ್ಕೂ ಬದ್ಧವಾಗಿವೆ.
ಕತಾರ್ನಲ್ಲಿಯುಪಿಐಸೇವೆ
ಸಂದರ್ಭ: ಕ್ಯೂಆರ್ ಕೋಡ್ ಆಧಾರಿತ ಯುಪಿಐ ಪಾವತಿ ವ್ಯವಸ್ಥೆ ಯನ್ನು ಕತಾರ್‌ನ ಆದ್ಯಂತ ಬಳಕೆಗೆ ಲಭ್ಯವಾಗಿಸಲಾಗಿದೆ ಎಂದು ಎನ್‌ಪಿಸಿಐ ಹೇಳಿದೆ.
ಭಾರತದಿಂದ ಕತಾರ್‌ಗೆ ತೆರಳುವವರು ಅಲ್ಲಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಇನ್ನು ಮುಂದೆ ಯುಪಿಐ ಬಳಸಿ ಹಣ ಪಾವತಿಸಬಹುದು ಎಂದು ಎನ್‌ಪಿಸಿಐ ಪ್ರಕಟಣೆ ತಿಳಿಸಿದೆ.
ಕತಾರ್‌ಗೆ ಭೇಟಿ ನೀಡುವ ವಿದೇಶಿಗರ ಪಟ್ಟಿಯಲ್ಲಿ ಭಾರತೀಯರು ಎರಡನೆಯ ಸ್ಥಾನದಲ್ಲಿದ್ದಾರೆ. ಯುಪಿಐ ಪಾವತಿ ಸೌಲಭ್ಯವು ಕತಾರ್‌ನಲ್ಲಿ ಲಭ್ಯವಾಗಿರುವ ಕಾರಣದಿಂದಾಗಿ ಅಲ್ಲಿ ವಹಿವಾಟು ನಡೆಸುವುದು ಸುಲಭವಾಗುತ್ತದೆ, ಭಾರತೀಯರು ಅಲ್ಲಿ ನಗದು ಇರಿಸಿಕೊಳ್ಳಬೇಕಾದ ಅಗತ್ಯ ಇನ್ನಿಲ್ಲವಾಗುತ್ತದೆ, ಕರೆನ್ಸಿ ವಿನಿಮಯದ ರಗಳೆ ತಪ್ಪುತ್ತದೆ ಎಂದು ಪ್ರಕಟಣೆ ಹೇಳಿದೆ.
ಈ ವ್ಯವಸ್ಥೆಯಿಂದಾಗಿ ಕತಾರ್‌ನಲ್ಲಿನ ಚಿಲ್ಲರೆ ವಹಿವಾಟುಗಳು ಹಾಗೂ ಪ್ರವಾಸೋದ್ಯಮಕ್ಕೆ ಕೂಡ ಅನುಕೂಲ ಆಗಲಿದೆ ಎಂದು ಅದು ಹೇಳಿದೆ.
₹69 ಸಾವಿರಕೋಟಿಪ್ಯಾಕೇಜ್
ಸಂದರ್ಭ: ಭಾರತದಲ್ಲಿ ಹಡಗು ನಿರ್ಮಾಣ ಚಟುವಟಿಕೆಗಳಿಗೆ ಮತ್ತೆ ಜೀವ ನೀಡುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟವು ₹69,725 ಕೋಟಿ ಮೊತ್ತದ ಪ್ಯಾಕೇಜ್‌ಗೆ ಒಪ್ಪಿಗೆ ನೀಡಿದೆ.
ಸರ್ಕಾರದ ಅಧಿಕೃತ ಹೇಳಿಕೆ ಪ್ರಕಾರ ಈ ಪ್ಯಾಕೇಜ್ ಅಡಿಯಲ್ಲಿ ನಾಲ್ಕು ಅಂಶಗಳು ಇರಲಿವೆ. ದೇಶದಲ್ಲಿ ಹಡಗು ನಿರ್ಮಾಣ ಸಾಮರ್ಥ್ಯವನ್ನು ಹೆಚ್ಚಿಸುವುದು, ದೀರ್ಘಾವಧಿಯಲ್ಲಿ ಈ ಚಟುವಟಿಕೆಗಳಿಗೆ ಹಣಕಾಸಿನ ನೆರವು ಹೆಚ್ಚಿಸುವುದು, ಹೊಸ ಹಾಗೂ ಈಗಾಗಲೇ ಇರುವ ಹಡಗು ನಿರ್ಮಾಣ ಘಟಕಗಳಿಗೆ ಉತ್ತೇಜನ ನೀಡುವುದು, ತಾಂತ್ರಿಕ ಸಾಮರ್ಥ್ಯ ಮತ್ತು ಕೌಶಲವನ್ನು ಹೆಚ್ಚಿಸುವುದು ಆ ಅಂಶಗಳು.
ಹಡಗು ನಿರ್ಮಾಣ ವಲಯದಲ್ಲಿ ದೇಶವು ‘ಆತ್ಮನಿರ್ಭರ’ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಹೇಳಿದ್ದರು. ಭಾರತವು ವಿದೇಶಿ ಹಡಗು ನಿರ್ಮಾಣ ಕಂಪನಿಗಳಿಂದ ಸೇವೆ ಪಡೆಯುವುದಕ್ಕೆ ವಾರ್ಷಿಕ ಅಂದಾಜು ₹6 ಲಕ್ಷ ಕೋಟಿ ಪಾವತಿಸುತ್ತಿದೆ ಎಂದು ತಿಳಿಸಿದ್ದರು.
‘50 ವರ್ಷಗಳ ಹಿಂದೆ ನಾವು ನಡೆಸುತ್ತಿದ್ದ ವ್ಯಾಪಾರ ಚಟುವಟಿಕೆಗಳಲ್ಲಿ ಬಳಕೆಯಾಗುತ್ತಿದ್ದ ಹಡಗುಗಳ ಪೈಕಿ ಶೇ 40ರಷ್ಟು ಭಾರತದಲ್ಲೇ ತಯಾರಾದ ವಾಗಿದ್ದವು. ಆದರೆ ಈಗ ಅವುಗಳ ಪಾಲು ಶೇ 5ಕ್ಕೆ ಕುಸಿದಿದೆ’ ಎಂದು ಪ್ರಧಾನಿ ಹೇಳಿದ್ದರು.
ಜಾಗತಿಕಮಟ್ಟದಲ್ಲಿಹಡಗುನಿರ್ಮಾಣಮಾರುಕಟ್ಟೆಯಲ್ಲಿಈಗಭಾರತದಪಾಲುಶೇ 0.06ರಷ್ಟುಮಾತ್ರವೇಇದೆ. ಈಉದ್ಯಮದಲ್ಲಿಭಾರತವು 20ನೇಸ್ಥಾನಪಡೆದಿದೆ. ಆದರೆ 2030ರೊಳಗೆಮೊದಲ 10 ಸ್ಥಾನಗಳಪೈಕಿಒಂದರಲ್ಲಿತಾನಿರಬೇಕು, 2047ರವೇಳೆಗೆಟಾಪ್–5 ದೇಶಗಳಪಟ್ಟಿಯಲ್ಲಿತಾನಿರಬೇಕುಎಂದುಭಾರತಬಯಸಿದೆ.
ಈಗ ಘೋಷಣೆ ಮಾಡಿರುವ ಪ್ಯಾಕೇಜ್‌ನಿಂದಾಗಿ ದೇಶದಲ್ಲಿ ಸರಿ ಸುಮಾರು 30 ಲಕ್ಷ ಉದ್ಯೋಗ ಸೃಷ್ಟಿ ಯಾಗುವ ನಿರೀಕ್ಷೆ ಇದೆ, ದೇಶದಲ್ಲಿ ₹4.5 ಲಕ್ಷ ಕೋಟಿ ಹೂಡಿಕೆ ಆಗಲಿದೆ ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆರ್ಥಿಕ ಪರಿಣಾಮ ಮಾತ್ರವೇ ಅಲ್ಲದೆ, ಈ ಉಪಕ್ರಮವು ದೇಶದ ಇಂಧನ ಮತ್ತು ಆಹಾರ ಭದ್ರತೆಯನ್ನು ಹೆಚ್ಚಿಸುತ್ತದೆ, ಮಹತ್ವದ ಸಮುದ್ರ ಮಾರ್ಗಗಳಲ್ಲಿ ಸ್ಥಿರತೆ ತರುತ್ತದೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.
ಎಫ್ಎಂಸಿಜಿ: ತೂಕಹೆಚ್ಚಳಕ್ಕೆಒಲವು
ಸಂದರ್ಭ: ಪರಿಷ್ಕೃತ ಜಿಎಸ್‌ಟಿ ದರವು ಜಾರಿಗೆ ಬಂದ ನಂತರದಲ್ಲಿ ಎಫ್‌ಎಂಸಿಜಿ ವಲಯದ ಕಂಪನಿಗಳನ್ನು ಸಮಸ್ಯೆಯೊಂದು ಕಾಡುತ್ತಿದೆ.
₹2, ₹5, ₹10 ಬೆಲೆಗೆ ಮಾರಾಟ ಆಗುತ್ತಿದ್ದ ವಿವಿಧ ಉತ್ಪನ್ನಗಳ ಬೆಲೆಯನ್ನು ಜಿಎಸ್‌ಟಿ ಇಳಿಕೆಗೆ ಅನುಗುಣವಾಗಿ ಕಂಪನಿಗಳು ತಗ್ಗಿಸಿವೆ. ಆದರೆ, ಜಿಎಸ್‌ಟಿ ಪರಿಷ್ಕರಣೆಯ ನಂತರದ ಬೆಲೆಯು ವಸ್ತುಗಳ ಖರೀದಿಗೆ, ಮಾರಾಟಕ್ಕೆ ಅನುಕೂಲಕರವಾದ ಹಂತದಲ್ಲಿ ಉಳಿದಿಲ್ಲ.
ಉದಾಹರಣೆಗೆ, ₹5ಕ್ಕೆ ಮಾರಾಟ ಆಗುತ್ತಿದ್ದ ಜನಪ್ರಿಯ ಪಾರ್ಲೆ–ಜಿ ಬಿಸ್ಕತ್ ಪ್ಯಾಕಿನ ಬೆಲೆಯು ಈಗ ₹4.50 ಆಗಿದೆ. ಈ ಹಿಂದೆ ₹2ಕ್ಕೆ ಮಾರಾಟ ಆಗುತ್ತಿದ್ದ ಶಾಂಪೂ ಪೌಚ್‌ನ ಬೆಲೆ ಈಗ ₹1.75 ಆಗಿದೆ. ಇಂತಹ ಪೌಚ್‌ಗಳಲ್ಲಿ, ಪೊಟ್ಟಣಗಳಲ್ಲಿ ಇರುವ ಉತ್ಪನ್ನಗಳ ತೂಕವನ್ನು ಹೆಚ್ಚು ಮಾಡಲು ತಕ್ಷಣಕ್ಕೆ ಸಾಧ್ಯವಾಗದೆ ಇರುವ ಕಾರಣಕ್ಕೆ, ಬೆಲೆಯನ್ನು ಈ ಬಗೆಯಲ್ಲಿ ಕಡಿಮೆ ಮಾಡಲಾಗಿದೆ ಎಂದು ಕಂಪನಿಯ ಪ್ರತಿನಿಧಿಗಳು ಹೇಳಿದ್ದಾರೆ.
ಸರ್ಕಾರದ ನಿರ್ದೇಶನವನ್ನು ಪಾಲಿಸುವ ಉದ್ದೇಶದಿಂದ ಜನಪ್ರಿಯ ಬೆಲೆ ಶ್ರೇಣಿಯ ಉತ್ಪನ್ನ ಗಳನ್ನು ಈ ಬಗೆಯಲ್ಲಿ ಅಸಾಂಪ್ರದಾಯಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಉದ್ಯಮದ ಪ್ರತಿನಿಧಿಗಳು ಹೇಳಿದ್ದಾರೆ. ಆದರೆ ಇದು ತಾತ್ಕಾಲಿಕ ಕ್ರಮ ಮಾತ್ರ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
‘ಇದು ನೂರಕ್ಕೆ ನೂರರಷ್ಟು ತಾತ್ಕಾಲಿಕ ಕ್ರಮ… ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಳಸುವ ಪೊಟ್ಟಣಗಳು ಮುದ್ರಣ ಆಗಿವೆ. ಈಗ ತೂಕದಲ್ಲಿ ಬದಲಾವಣೆ ತಂದು ಎಂಆರ್‌ಪಿಯನ್ನು ಮೊದಲಿನ ಹಂತದಲ್ಲಿ ಇರಿಸುವುದು ಕಷ್ಟ. ಹೀಗಾಗಿ, ನಾವು ಜಿಎಸ್‌ಟಿ ಪರಿಷ್ಕರಣೆಯ ಪ್ರಯೋಜನವನ್ನು ಈ ಬಗೆಯ ಅಸಾಂಪ್ರದಾಯಿಕ ಕ್ರಮದ ಮೂಲಕ ಗ್ರಾಹಕರಿಗೆ ವರ್ಗಾವಣೆ ಮಾಡುತ್ತಿದ್ದೇವೆ’ ಎಂದು ಪಾರ್ಲೆ ಪ್ರೊಡಕ್ಟ್ಸ್‌ನ ಉಪಾಧ್ಯಕ್ಷ ಮಯಾಂಕ್ ಶಾ ತಿಳಿಸಿದ್ದಾರೆ.
ಈ ಬೆಲೆಗೆ ಬಿಸ್ಕತ್ತಿನ ಪೊಟ್ಟಣ ಖರೀದಿಸುವಲ್ಲಿ ಗ್ರಾಹಕರು ಸಮಸ್ಯೆ ಅನುಭವಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಅವರು, ‘ಗ್ರಾಹಕರು ಒಂದಕ್ಕಿಂತ ಹೆಚ್ಚು ಪೊಟ್ಟಣ ಖರೀದಿಸಬಹುದು ಅಥವಾ ಯುಪಿಐ ಮೂಲಕ ಪಾವತಿ ಮಾಡಬಹುದು’ ಎಂದು ಉತ್ತರಿಸಿದರು.
‘ಇವು ಕಂಪನಿಗಳು ಅನುಸರಿಸುತ್ತಿರುವ ಅಲ್ಪಾವಧಿಯ ಕ್ರಮಗಳು. ಕಂಪನಿಗಳು ಉತ್ಪನ್ನಗಳ ತೂಕವನ್ನು ಹೆಚ್ಚು ಮಾಡಿ ಜನಪ್ರಿಯ ಬೆಲೆ ಶ್ರೇಣಿಯಾದ ₹2, ₹5 ಹಾಗೂ ₹10ನ್ನು ಮತ್ತೆ ಜಾರಿಗೆ ತರುತ್ತವೆ. ಏಕೆಂದರೆ ನಾಲ್ಕೂವರೆ ರೂಪಾಯಿ ಪಾವತಿ ಮಾಡುವುದು ವಾಸ್ತವದಲ್ಲಿ ಸುಲಭವಲ್ಲ’ ಎಂದು ನುವಾಮಾ ಇನ್‌ಸ್ಟಿಟ್ಯೂಷನ್ ಈಕ್ವಿಟಿಸ್ ಸಂಸ್ಥೆಯ ಅಬ್ನೀಶ್ ರಾಯ್ ಹೇಳಿದ್ದಾರೆ.
‘ಭಾರತದಭೂಪ್ರದೇಶಖಾಲಿಮಾಡಿ: ಪಾಕ್ಗೆಭಾರತತರಾಟೆ’
ಸಂದರ್ಭ: ‘ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ತನ್ನ ಸ್ವಂತ ಜನರ ಮೇಲೆ ಬಾಂಬ್ ದಾಳಿ ನಡೆಸುವ ಬದಲು ಅಲ್ಲಿನ ಆರ್ಥಿಕ ಸುಧಾರಣೆಗೆ ಗಮನಹರಿಸಲಿ’ ಎಂದು ಭಾರತ ತೀಕ್ಷ್ಣವಾಗಿ ಹೇಳಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (ಯುಎನ್‌ಎಚ್‌ಆರ್‌ಸಿ) 60ನೇ ಅಧಿವೇಶವನದಲ್ಲಿ ಮಾತನಾಡಿದ ಜಿನಿವಾದಲ್ಲಿರುವ ವಿಶ್ವಸಂಸ್ಥೆಯ ಭಾರತದ ಕಾಯಂ ಕಾನ್ಸುಲರ್ ಕ್ಷಿತಿಜ್ ತ್ಯಾಗಿ, ವಿಶ್ವಸಂಸ್ಥೆಯ ವೇದಿಕೆಯಲ್ಲಿ ಭಾರತದ ವಿರುದ್ಧ ಆಧಾರ ರಹಿತ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಪಾಕ್ ನಿಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
‘ವಿರೋಧಾಭಾಸವನ್ನೇ ಸಾರುವ ಪಾಕ್ ನಿಯೋಗವು ವಿಶ್ವಸಂಸ್ಥೆಯ ವೇದಿಕೆಯನ್ನು ಭಾರತದ ವಿರುದ್ಧ ಆಧಾರ ರಹಿತ ಆರೋಪ ಮಾಡಲು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ತ್ಯಾಗಿ ಆಕ್ಷೇಪ ವ್ಯಕ್ತಪಡಿಸಿದರು. ವಾರದ ಹಿಂದೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 24 ಜನರನ್ನು ಬಲಿ ಪಡೆದ ಸ್ಫೋಟವನ್ನು ನಿರ್ದಿಷ್ಟವಾಗಿ ಹೆಸರಿಸದೆ, ‘ಪಾಕ್ ಮೊದಲು ತನ್ನ ದೇಶದ ಆರ್ಥಿಕ ಸ್ಥಿತಿ ಮತ್ತು ಅಲ್ಲಿನ ಮಾನವ ಹಕ್ಕುಗಳ ಸುಧಾರಣೆಗೆ ಗಮನ ಹರಿಸಲಿ’ ಎಂದು ತಿರುಗೇಟು ನೀಡಿದರು.
ಪಾಕ್ ಆಕ್ರಮಿತ ಕಾಶ್ಮೀರವನ್ನು ಉಲ್ಲೇಖಿಸಿ, ‘ನೀವು ನಮ್ಮ ಭೂಪ್ರದೇಶವನ್ನು ಅಪೇಕ್ಷಿಸುವ ಬದಲು, ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತದ ಭೂ ಪ್ರದೇಶವನ್ನು ಖಾಲಿ ಮಾಡುವುದೇ ಒಳ್ಳೆಯದು’ ಎಂದು ಅವರು ಎಚ್ಚರಿಸಿದರು.
ಪಾಕಿಸ್ತಾನವು ಭಯೋತ್ಪಾದನೆಯನ್ನು ರಫ್ತು ಮಾಡುವುದರಿಂದ ದೂರ ಇದ್ದು, ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತುವ ಕೆಲಸವನ್ನು ಮೊದಲು ಮಾಡಲಿ ಎಂದು ಅವರು ಹೇಳಿದ್ದಾರೆ.
ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕುವ ಸೌಲಭ್ಯದ ದುರುಪಯೋಗ ತಪ್ಪಿಸಲು ಚುನಾವಣಾ ಆಯೋಗವು ಮೊಬೈಲ್ ಒಟಿಪಿ ಆಧಾರಿತ ‘ಇ–ಪರಿಶೀಲನಾ ವಿಧಾನ’ವನ್ನು ಜಾರಿಗೊಳಿಸಿದೆ.
ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವುದಕ್ಕೆ ಆಕ್ಷೇಪಣೆ ಸಲ್ಲಿಸುವ ವ್ಯಕ್ತಿಗಳ ಮೊಬೈಲ್ ಸಂಖ್ಯೆಗೆ ಇನ್ನು ಮುಂದೆ ‘ಒಟಿಪಿ’ ಬರಲಿದೆ. ಈ ಒಟಿಪಿ ನಮೂದಿಸಿದ ಬಳಿಕವೇ ಮುಂದಿನ ಪ್ರಕ್ರಿಯೆ ನಡೆಯಲಿದೆ.
ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ, ಬೇರೆ ವ್ಯಕ್ತಿಯ ಹೆಸರು ಮತ್ತು ಮೊಬೈಲ್ ಸಂಖ್ಯೆ ದುರ್ಬಳಕೆ ಆಗುವ ಸಾಧ್ಯತೆ ಇತ್ತು. ಇದನ್ನು ತಪ್ಪಿಸಲು ‘ಇ–ಪರಿಶೀಲನಾ ವಿಧಾನ ಜಾರಿಗೆ ತರಲಾಗಿದೆ. ಮತದಾರರ ಪಟ್ಟಿಯಲ್ಲಿ ಏನೇ ಪರಿಷ್ಕರಣೆ ಆಗುವುದಿದ್ದರೂ ಅದಕ್ಕೂ ಮುನ್ನ ಮತದಾರನ ಮೊಬೈಲ್‌ಗೆ ಒಟಿಪಿ ಬರುತ್ತದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.
‘ಮತದಾರರು ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ಅಳಿಸಿ ಹಾಕುವಂತೆ ಕೋರಿ ಆನ್‌ಲೈನ್ ಮೂಲಕ ನಮೂನೆ –7 ಸಲ್ಲಿಸಬಹುದು. ಆದರೆ, ನಮೂನೆ–7 ಸಲ್ಲಿಕೆಯಾದ ಕೂಡಲೇ ಸ್ವಯಂಚಾಲಿತವಾಗಿ ತಮ್ಮ ಹೆಸರು ಅಳಿಸಿ ಹೋಗುತ್ತದೆ ಎಂದರ್ಥವಲ್ಲ’ ಎಂದು ಆಯೋಗ ಸ್ಪಷ್ಟಪಡಿಸಿದೆ.
ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಹೆಸರು ಗಳನ್ನು ಪಟ್ಟಿಯಿಂದ ಕೈಬಿಡಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಚುನಾವಣಾ ಆಯೋಗ ‘ಇ–ಪರಿಶೀಲನಾ ವಿಧಾನ’ ಜಾರಿಗೊಳಿಸಿದೆ.
‘ಜ್ಞಾನೇಶ್‌ಜೀ ನಾವು ಮತಕಳ್ಳತನ ಕಂಡುಹಿಡಿದೆವು. ಆನಂತರ ನಿಮಗೆ ಬೀಗ ಹಾಕಲು ನೆನಪಾಯಿತು. ಈಗ ನಾವು ಇದರ ಹಿಂದಿನ ಕಳ್ಳರನ್ನೂ ಹಿಡಿಯುತ್ತೇವೆ’ ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.
5,994 ಅರ್ಜಿ ತಿರಸ್ಕೃತ
‘ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಹೆಸರು ಅಳಿಸಿ ಹಾಕಲು 6,018 ಜನರು ಆನ್‌ಲೈನ್ ಮೂಲಕ ನಮೂನೆ –7 ಸಲ್ಲಿಸಿದ್ದರು. ಪರಿಶೀಲಿಸಿದಾಗ ಇದರಲ್ಲಿ 24 ಅರ್ಜಿಗಳು ಮಾತ್ರ ನೈಜವಾಗಿದ್ದವು. ಉಳಿದ 5,994 ಅರ್ಜಿಗಳು ತಪ್ಪಾಗಿದ್ದು, ಅವುಗಳನ್ನು ತಿರಸ್ಕರಿಸಲಾಯಿತು’ ಎಂದು ಚುನಾವಣಾ ಆಯೋಗ ಹೇಳಿದೆ.
‘ಇ–ಪರಿಶೀಲನಾ ವಿಧಾನ‘ವನ್ನು ನಾವು ವಾರದ ಹಿಂದೆಯೇ ಜಾರಿಗೊಳಿಸಿದ್ದೇವೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಯತ್ನಿಸಲಾಗಿತ್ತು ಎಂಬ ಆರೋಪಕ್ಕೆ ಚುನಾವಣಾ ಆಯೊಗದ ಪ್ರತಿಕ್ರಿಯೆ ಇದಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಾವು ಮತಕಳ್ಳತನದ ವಿಷಯ ಪ್ರಸ್ತಾಪಿಸಿದ ನಂತರವಷ್ಟೇ ಚುನಾವಣಾ ಆಯೋಗ ಇದಕ್ಕೆ ಬೀಗ ಹಾಕಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಎಸ್‌ಐಟಿಗೆ ಯಾವಾಗ ಆಳಂದ ಕ್ಷೇತ್ರದ ದಾಖಲೆಗಳನ್ನು ಹಸ್ತಾಂತರಿಸುತ್ತಾರೆ?
ಮತ್ತೆವಿದೇಶದಿಂದಭಾರತಕ್ಕೆಚೀತಾಗಳು?
ಸಂದರ್ಭ: ಮತ್ತೊಮ್ಮೆ ಚೀತಾಗಳನ್ನು ದೇಶಕ್ಕೆ ತರುವ ವಿಚಾರವಾಗಿ ಆಫ್ರಿಕಾದ ಕೆಲವು ದೇಶಗಳೊಂದಿಗೆ ಭಾರತ ಮಾತುಕತೆ ನಡೆಸುತ್ತಿದೆ. ಬೋಟ್ಸ್‌ವಾನಾದಿಂದ ಡಿಸೆಂಬರ್‌ನಲ್ಲಿ 8–10 ಚೀತಾಗಳನ್ನು ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಳಿದುಹೋಗಿದ್ದ ಚೀತಾಗಳನ್ನು ಭಾರತದಲ್ಲಿ ಮರುಪರಿಚಯಿಸುವ ಮಹತ್ವದ ಯೋಜನೆಯು ‘ಅತ್ಯುತ್ತಮ ಯಶಸ್ಸು’ ಕಂಡಿದೆ. ಆರಂಭಿಕ ಸವಾಲುಗಳನ್ನು ಮೀರಿ ಯೋಜನೆಯು ಯಶಸ್ವಿಯಾಗಿದೆ ಎಂದು ‘ಪ್ರಾಜೆಕ್ಟ್ ಚೀತಾ’ಕ್ಕೆ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.
ಸದ್ಯ ಭಾರತದಲ್ಲಿಯೇ ಜನಿಸಿರುವ 16 ಚೀತಾಗಳು ಸೇರಿ ಒಟ್ಟು 27 ಚೀತಾಗಳಿವೆ ಎಂದು ಮೂಲಗಳು ತಿಳಿಸಿವೆ.
ಸಂದರ್ಭ: ಭಾರತದ ಕೀರ್ತಿಯನ್ನು ಬಾನೆತ್ತರದಲ್ಲಿ ಹಾರಿಸಿದ, ದೇಶದ ವಾಯುಪಡೆಯ ಸಾಮರ್ಥ್ಯವನ್ನು ಜಗತ್ತಿಗೆ ಸಾರಿದ ರಷ್ಯಾ ನಿರ್ಮಿತ ಮಿಗ್–21 ಯುದ್ಧ ವಿಮಾನವು ಇದೇ 26ರಿಂದ ನಿವೃತ್ತಿ ಪಡೆಯಲಿದೆ.
ಚಂಡೀಗಢದ ವಾಯುನೆಲೆಯಲ್ಲಿ 23 ಸ್ಕ್ವಾಡ್ರನ್‌ಗೆ ಸೇರಿದ ‘ಪ್ಯಾಂಥರ್ಸ್’ ಹೆಸರಿನ ಮಿಗ್–21 ಯುದ್ಧ ವಿಮಾನಕ್ಕೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್, ಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್, ನೌಕಾಪಡೆಯ ಮುಖಸ್ಥ ಅಡ್ಮಿರಲ್ ದಿನೇಶ್ ಕೆ.ತ್ರಿಪಾಠಿ ಮತ್ತಿತರರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಆರುದಶಕವಾಯುಪಡೆಯಬೆನ್ನೆಲುಬಾಗಿದ್ದಮಿಗ್–21 ಯುದ್ಧವಿಮಾನಗಳುಪಾಕಿಸ್ತಾನದೊಂದಿಗಿನ 1965 ಮತ್ತು 1971ರಯುದ್ಧದಲ್ಲಿಹಾಗೂ 1999ರಕಾರ್ಗಿಲ್ ಯುದ್ಧದಲ್ಲಿನಿರ್ಣಾಯಕಪಾತ್ರವಹಿಸಿದ್ದವು. 2019ರಬಾಲಾಕೋಟ್ ವಾಯುದಾಳಿಯಲ್ಲಿಯೂಮಹತ್ವದಮಾತ್ರವಹಿಸಿದ್ದವು.
ಸಂದರ್ಭ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (ಕೆಎಎಸ್‌ಎಸ್) ಅ.1ರಿಂದ ಅಧಿಕೃತವಾಗಿ ಜಾರಿಯಾಗಲಿದೆ.
ಹಲವು ವರ್ಷಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತಾದರೂ ಕೆಲ ತಾಂತ್ರಿಕ ಕಾರಣಗಳಿಂದ ಅನುಷ್ಠಾನ ವಿಳಂಬವಾಗಿತ್ತು.
ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಪ್ರಯೋಜನ ಸಿಗಲಿದೆ.
ಸುವರ್ಣಕರ್ನಾಟಕಆರೋಗ್ಯಸುರಕ್ಷಾಟ್ರಸ್ಟ್ (ಎಸ್ಎಎಸ್ಟಿ) ಯೋಜನೆಯಅನುಷ್ಠಾನದಸಂಸ್ಥೆಯಾಗಿ ಹೊಣೆ ನಿರ್ವಹಿಸಲಿದ್ದು, ಎಲ್ಲ ವರ್ಗದ ನೌಕರರು ಪ್ರತಿತಿಂಗಳು ತಮ್ಮ ಪಾಲಿನ ಕಂತು ಪಾವತಿಸಬೇಕಿದೆ. ಯೋಜನೆ ವ್ಯಾಪ್ತಿಗೆ ಒಳಪಡಿಸಲು ಇಚ್ಛಿಸದವರು ಅ.18ರ ಒಳಗೆ ತಮ್ಮ ಮೇಲಧಿಕಾರಿಗಳ ಮೂಲಕ ಲಿಖಿತ ಆಕ್ಷೇಪ ಸಲ್ಲಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.
71ನೇರಾಷ್ಟ್ರೀಯಚಲನಚಿತ್ರಪ್ರಶಸ್ತಿಗಳು
ಇಪಿಎಫ್ ವಿಮೆ: ನಿಯಮಸರಳ
ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಆಕಸ್ಮಿಕವಾಗಿ ಮೃತಪಟ್ಟರೆ ಆ ಕುಟುಂಬ ಎದುರಿಸಬೇಕಾಗುವ ಸವಾಲುಗಳು ಒಂದೆರಡಲ್ಲ. ಇಡೀ ಕುಟುಂಬ ಆರ್ಥಿಕ ಮುಗ್ಗಟ್ಟಿಗೆ ಸಿಲುಕುತ್ತದೆ. ಅವಲಂಬಿತರು ಬದುಕಿನ ಬಂಡಿ ಎಳೆಯಲು ಕಷ್ಟಪಡುತ್ತಾರೆ. ಜೀವನದ ಅಂಥ ಅನಿರೀಕ್ಷಿತ ಅವಘಡಗಳಿಂದ ರಕ್ಷಣೆ ನೀಡುವುದು ವಿಮಾ ಸೌಲಭ್ಯ. ದೇಶದಲ್ಲಿ ಖಾಸಗಿ ವಲಯದಲ್ಲಿ ದುಡಿಯುವವರ ಸಂಖ್ಯೆ ಹೆಚ್ಚಿದೆ. ಆದರೆ, ಇಂದಿನ ಧಾವಂತದ ಬದುಕಿನಲ್ಲಿ ವಿಮೆಗೆ ಆದ್ಯತೆ ನೀಡುವವರು ಕಡಿಮೆ. ಬಹುತೇಕರ ಆದ್ಯತೆಯ ಪಟ್ಟಿಯಲ್ಲಿ ವಿಮೆಯದ್ದು ಕೊನೆಯ ಸ್ಥಾನ.
ಸರ್ಕಾರಿ ನೌಕರರಿಗೆ ಹೋಲಿಸಿದರೆ ಖಾಸಗಿ ವಲಯದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಅತ್ಯಲ್ಪ. ಹಾಗಾಗಿಯೇ, ಖಾಸಗಿ ವಲಯದ ಸಂಬಳ ಪಡೆಯುವ ಉದ್ಯೋಗಿಗಳಿಗೆ ಜೀವ ವಿಮೆಯ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರವು 1976ರಲ್ಲಿ ಉದ್ಯೋಗಿಯ ಠೇವಣಿ ಆಧಾರಿತ ವಿಮಾ ಯೋಜನೆಯನ್ನು (ಇಡಿಎಲ್‌ಐ- ಎಂಪ್ಲಾಯೀಸ್ ಡೆಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ ಸ್ಕೀಮ್) ಪರಿಚಯಿಸಿತು. ನೌಕರರ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ಇಪಿಎಫ್ ಖಾತೆದಾರರಿಗೆ ಒದಗಿಸುವ ವಿಮಾ ರಕ್ಷಣೆ ಇದಾಗಿದೆ. ಸೇವಾವಧಿಯಲ್ಲಿ ವಿಮೆಗೆ ಒಳಪಟ್ಟ ವ್ಯಕ್ತಿಯು (ಉದ್ಯೋಗಿ) ಮೃತಪಟ್ಟ ಸಂದರ್ಭದಲ್ಲಿ, ಅವರ ಕುಟುಂಬಕ್ಕೆ ವಿಮಾ ಮೊತ್ತ ಸಿಗಲಿದೆ.
ಸರಳಗೊಂಡ ನಿಯಮಗಳು: ಸದ್ಯ ಈ ವಿಮೆ ಪಡೆಯಲು ನಿಗದಿಪಡಿಸಿದ್ದ ಷರತ್ತುಗಳನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಡಿಲಗೊಳಿಸಿದೆ. ಇದು ಉದ್ಯೋಗಿಗಳ ಪಾಲಿಗೆ ವರದಾನವಾಗಿದೆ.
1. ಈ ಮೊದಲು ಉದ್ಯೋಗಿ ಮೃತಪಟ್ಟ ನಂತರ ಅವರ ಭವಿಷ್ಯ ನಿಧಿ (ಪಿ.ಎಫ್) ಖಾತೆಯಲ್ಲಿರುವ ಮೊತ್ತ ಆಧರಿಸಿ ಸಂತ್ರಸ್ತ ಕುಟುಂಬಕ್ಕೆ ಸಿಗಬೇಕಾದ ವಿಮಾ ಪರಿಹಾರವನ್ನು ಲೆಕ್ಕ ಹಾಕಲಾಗುತ್ತಿತ್ತು. ಪ್ರಸ್ತುತ ಆ ನಿಯಮವನ್ನು ತೆಗೆದುಹಾಕಲಾಗಿದೆ.
ಇನ್ನು ಮುಂದೆ ಇಪಿಎಫ್‌ಒ ಚಂದಾದಾರರಾದ ಯಾವುದೇ ಉದ್ಯೋಗಿ ಕೆಲಸದಲ್ಲಿ ಇರುವಾಗ ಮೃತಪಟ್ಟರೆ ಅವರ ಪಿ.ಎಫ್. ಖಾತೆಯಲ್ಲಿ ₹50 ಸಾವಿರಕ್ಕಿಂತ ಕಡಿಮೆ ಮೊತ್ತವಿದ್ದರೂ ಅವರ ಕುಟುಂಬಕ್ಕೆ ಕನಿಷ್ಠ ₹50 ಸಾವಿರ ಪರಿಹಾರ ಸಿಗಲಿದೆ. ದೇಶದಲ್ಲಿ ಪ್ರತಿವರ್ಷ 5 ಸಾವಿರಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳಿಗೆ ಈ ಹೊಸ ನಿಯಮ ಊರುಗೋಲಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
2. ಉದ್ಯೋಗಿಗಳು ವೈಯಕ್ತಿಕ ಹಾಗೂ ಇತರ ಕಾರಣಗಳಿಗೆ ಕಂಪನಿ ಬದಲಿಸುವುದು ಸಾಮಾನ್ಯ. ಈ ಹಿಂದೆ, ಉದ್ಯೋಗಿಯ 12 ತಿಂಗಳ ನಿರಂತರ ಕೆಲಸವನ್ನು ಲೆಕ್ಕ ಹಾಕಿ ವಿಮಾ ಪರಿಹಾರ ನೀಡಲಾಗುತ್ತಿತ್ತು. ಇದರಿಂದ ಒಂದು ಕಂಪನಿಯಿಂದ ಕೆಲಸ ಬಿಟ್ಟು, ಮತ್ತೊಂದು ಕಂಪನಿಗೆ ಸೇರಿಕೊಳ್ಳುವ ಉದ್ಯೋಗಿಗಳು ಮರಣ ಹೊಂದಿದರೆ ಅವರ ಕುಟುಂಬಗಳು ಇಡಿಎಲ್‌ಐ ಪ್ರಯೋಜನ ಪಡೆಯಲು ತೊಡಕಾಗುತ್ತಿತ್ತು. ಈಗ, ಈ ನಿಯಮವನ್ನೂ ಪರಿಷ್ಕರಿಸಲಾಗಿದೆ. ಉದ್ಯೋಗಿಯು ಒಂದು ಕಂಪನಿ ತೊರೆದು ಮತ್ತೊಂದು ಕಂಪನಿಗೆ ಸೇರಿಕೊಳ್ಳಲು 60 ದಿನಗಳಾದರೂ ಅದನ್ನು ಈಗ ಪರಿಗಣಿಸುವುದಿಲ್ಲ. ಹಳೆಯ ಮತ್ತು ಹೊಸ ಕೆಲಸದ ಅವಧಿಯನ್ನು ಒಟ್ಟಿಗೆ ಸೇರಿಸಿ, ‘ನಿರಂತರ ಕೆಲಸ’ ಎಂದು ಪರಿಗಣಿಸಲಾಗುತ್ತದೆ.
3. ಪಿ.ಎಫ್ ಖಾತೆಗೆ ಕೊನೆಯ ಕೊಡುಗೆ ನೀಡಿದ ಆರು ತಿಂಗಳ ಒಳಗಾಗಿ ಉದ್ಯೋಗಿ ಮೃತಪಟ್ಟು, ಅವರ ಹೆಸರು ಕಂಪನಿ/ಸಂಸ್ಥೆಯ ವೇತನದಾರರ ಪಟ್ಟಿಯಲ್ಲಿದ್ದರೆ ಇಡಿಎಲ್‌ಐ ಪ್ರಯೋಜನಕ್ಕೆ ಅರ್ಹ ಎಂದು ಹೊಸ ನಿಯಮದಲ್ಲಿ ಸ್ಪಷ್ಟಪಡಿಸಲಾಗಿದೆ.
ನಿಯಮಗಳ ಸರಳೀಕರಣದಿಂದಾಗಿ ಆಗಾಗ್ಗೆ ಉದ್ಯೋಗ ಬದಲಾಯಿಸುವ, ಮಾಸಿಕ ಕಡಿಮೆ ಸಂಬಳ ಪಡೆಯುವ ಉದ್ಯೋಗಿಗಳು ಎದುರಿಸುತ್ತಿದ್ದ ದೀರ್ಘಕಾಲೀನ ಸಮಸ್ಯೆಗೆ ಪರಿಹಾರ ಸಿಕ್ಕಿದಂತಾಗಿದೆ.
ಆಧಾರ:ಕಾರ್ಮಿಕ ಸಚಿವಾಲಯದ ಅಧಿಸೂಚನೆ, ಇಪಿಎಫ್‌ಒ ವಾರ್ಷಿಕ ವರದಿ
ವಿಮಾ ಲೆಕ್ಕಾಚಾರ ಹೇಗೆ?
ಇಡಿಎಲ್‌ಐ ಅಡಿ ಪ್ರಯೋಜನ ಪಡೆಯಲು 12 ತಿಂಗಳುಗಳಲ್ಲಿ ಚಂದಾದಾರರ ಪಿ.ಎಫ್ ಖಾತೆಯಲ್ಲಿನ ಸರಾಸರಿ ಮೊತ್ತವನ್ನು ಪರಿಗಣಿಸಲಾಗುತ್ತದೆ. ಒಟ್ಟಾರೆ ವಿಮಾ ರಕ್ಷಣೆಯ ಲೆಕ್ಕಾಚಾರವು ಎರಡು ಹಂತದ ಪ್ರಕ್ರಿಯೆ. ಮೃತ ಉದ್ಯೋಗಿಯ 12 ತಿಂಗಳ ಸರಾಸರಿ ಮಾಸಿಕ ವೇತನವನ್ನು (ಮೂಲ ವೇತನ + ತುಟ್ಟಿಭತ್ಯೆ ) ಗರಿಷ್ಠ ₹15 ಸಾವಿರಕ್ಕೆ ಮಿತಿಗೊಳಿಸಿ, ಅದನ್ನು 35 ಪಟ್ಟು ಗುಣಿಸುವುದು ಒಂದು ಹಂತ; 12 ತಿಂಗಳಿನಲ್ಲಿ ಮೃತ ಉದ್ಯೋಗಿಯ ಭವಿಷ್ಯ ನಿಧಿ ಖಾತೆಯಲ್ಲಿರುವ ಸರಾಸರಿ ಮೊತ್ತದ ಶೇ 50ರಷ್ಟನ್ನು ಪರಿಗಣಿಸುವುದು ಎರಡನೇ ಹಂತ.
ಈ ಸೌಲಭ್ಯ ಪಡೆಯಲು ಗರಿಷ್ಠ ವೇತನ ಮಿತಿಯನ್ನು ₹15 ಸಾವಿರಕ್ಕೆ ಮಿತಿಗೊಳಿಸಲಾಗಿದೆ. ಮೂಲ ವೇತನವು ಇದಕ್ಕಿಂತಲೂ ಹೆಚ್ಚಿದ್ದರೂ ವಿಮಾ ಸೌಲಭ್ಯ ಪಡೆಯುವಾಗ ₹15 ಸಾವಿರವನ್ನಷ್ಟೇ ಪರಿಗಣಿಸಲಾಗುತ್ತದೆ.
ಉದಾಹರಣೆಗೆ, ಮಾಸಿಕ ಸಂಬಳ ₹25 ಸಾವಿರ ಇದ್ದು, ಪಿ.ಎಫ್. ಖಾತೆಯಲ್ಲಿ ₹6 ಲಕ್ಷ ಇದೆ ಎಂದಿಟ್ಟುಕೊಳ್ಳಿ. ಆಗ ಈ ವಿಧಾನದಲ್ಲಿ ಲೆಕ್ಕ ಹಾಕಿದಾಗ (₹25,000×35= ₹8.75 ಲಕ್ಷ ಮತ್ತು ₹6 ಲಕ್ಷದ ಶೇ 50 ಅಂದರೆ ₹3 ಲಕ್ಷ ) ವಿಮಾ ಮೊತ್ತವು ₹11.75 ಲಕ್ಷ ಆಗುತ್ತದೆ. ಆದರೆ, 2021ರಲ್ಲಿ ಇಡಿಎಲ್‌ಐ ಅಡಿ ಗರಿಷ್ಠ ವಿಮಾ ಮೊತ್ತವನ್ನು ₹7 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹಾಗಾಗಿ, ನಾಮಿನಿಗೆ ಇಷ್ಟು ಮೊತ್ತವಷ್ಟೇ ಸಿಗುತ್ತದೆ. ಪರಿಷ್ಕೃತ ನಿಯಮಗಳ ಪ್ರಕಾರ ಈ ಯೋಜನೆಯಡಿ ಕನಿಷ್ಠ ₹50 ಸಾವಿರ ಮತ್ತು ಗರಿಷ್ಠ ₹7 ಲಕ್ಷ ವಿಮೆ ಸೌಲಭ್ಯ ಕುಟುಂಬದವರಿಗೆ ಸಿಗಲಿದೆ.
ಪ್ರಯೋಜನ ಪಡೆಯುವುದು ಹೇಗೆ?
ವಿಮಾದಾರರು (ಉದ್ಯೋಗಿ) ಸೂಚಿಸಿದ ನಾಮಿನಿಗೆ ಯೋಜನೆಯಡಿ ಪರಿಹಾರ ಸಿಗಲಿದೆ. ಒಂದು ವೇಳೆ ನಾಮಿನಿ ಹೆಸರನ್ನು ನೋಂದಾಯಿಸದಿದ್ದರೆ, ಅವರ ಕುಟುಂಬದ ಸದಸ್ಯರು ಅಥವಾ ಕಾನೂನುಬದ್ಧ ಉತ್ತರಾಧಿಕಾರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಹಕ್ಕುದಾರರು ಭರ್ತಿ ಮಾಡಿದ ಇಡಿಎಲ್‌ಐ ಅರ್ಜಿಗೆ ಉದ್ಯೋಗದಾತ ಕಂಪನಿ/ ಸಂಸ್ಥೆ ಸಹಿ ಮಾಡಿ ದೃಢೀಕರಿಸಬೇಕು.
ಒಂದು ವೇಳೆ, ಉದ್ಯೋಗದಾತರು ಇಲ್ಲದಿದ್ದರೆ ಅಥವಾ ಉದ್ಯೋಗದಾತರ ಸಹಿ ಪಡೆಯಲು ಸಾಧ್ಯವಾಗದಿದ್ದರೂ ಪರ್ಯಾಯ ಕ್ರಮದ ಮೂಲಕ ವಿಮಾ ಸೌಲಭ್ಯದ ಹಾದಿಯನ್ನು ಸುಗಮಗೊಳಿಸಲಾಗಿದೆ.
ಬ್ಯಾಂಕ್ ವ್ಯವಸ್ಥಾಪಕರು (ಮೃತ ಉದ್ಯೋಗಿಯ ಖಾತೆ ಇರುವ ಬ್ಯಾಂಕ್), ಸ್ಥಳೀಯ ಸಂಸದ ಅಥವಾ ಶಾಸಕರು, ಗೆಜೆಟೆಡ್ ಅಧಿಕಾರಿ, ನ್ಯಾಯಾಧೀಶರು, ಸ್ಥಳೀಯ ನಗರ ಸಂಸ್ಥೆಯ ಸದಸ್ಯರು/ ಅಧ್ಯಕ್ಷರು, ಪೋಸ್ಟ್ ಮಾಸ್ಟರ್ ಅಥವಾ ಸಬ್-ಪೋಸ್ಟ್ ಮಾಸ್ಟರ್, ಇಪಿಎಫ್ ಅಥವಾ ಇಪಿಎಫ್‌ಒ ಕೇಂದ್ರೀಯ ಧರ್ಮದರ್ಶಿ ಮಂಡಳಿಯ (ಸಿಬಿಟಿ) ಪ್ರಾದೇಶಿಕ ಸಮಿತಿ ಸದಸ್ಯರಿಂದ ಕ್ಲೇಮು ಅರ್ಜಿ ದೃಢೀಕರಿಸಿ ಸೂಕ್ತ ದಾಖಲೆಗಳ ಸಮೇತ ಪ್ರಾದೇಶಿಕ ಇಪಿಎಫ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಅರ್ಜಿ ಸ್ವೀಕರಿಸಿದ ನಂತರ ಆಯುಕ್ತರು 30 ದಿನಗಳೊಗೆ ಇತ್ಯರ್ಥಪಡಿಸಬೇಕೆಂಬ ನಿಯಮವಿದೆ.
ಗಿಗ್ ಕಾರ್ಮಿಕರಿಗೆ ಸೌಲಭ್ಯ
ಗಿಗ್ ಕಾರ್ಮಿಕರು ಸಾಂಪ್ರದಾಯಿಕವಾದ ಉದ್ಯೋಗದಾತ ಮತ್ತು ಉದ್ಯೋಗಿ ನಡುವಿನ ಕೆಲಸದ ವ್ಯವಸ್ಥೆಯಿಂದ ದೂರ ಇರುತ್ತಾರೆ. ಈ ವಲಯದಲ್ಲಿ ದುಡಿಯುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಾರ್ಯನಿರತವಾಗಿದೆ. ಇದರಿಂದ ದೇಶದ ಆರ್ಥಿಕತೆಗೆ ಮತ್ತಷ್ಟು ಬೆಂಬಲ ನೀಡಿದಂತಾಗುತ್ತದೆ ಎಂಬುದು ಸಚಿವಾಲಯದ ಲೆಕ್ಕಾಚಾರ. ಗಿಗ್ ಕಾರ್ಮಿಕರಿಗೆ ಇಡಿಎಲ್‌ಐ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಚೌಕಟ್ಟು ರೂಪಿಸುವುದಾಗಿ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.
ಈ ವಿಷಯದಲ್ಲಿ ಕರ್ನಾಟಕ ಸರ್ಕಾರವು ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ‘ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಕಾಯ್ದೆ– 2025’ ರೂಪಿಸಿದೆ. ಈ ಕಾರ್ಮಿಕರು ಸರಕು ಸೇವೆ ವಿತರಣೆ ವೇಳೆ ಅವಘಡಕ್ಕೀಡಾಗಿ ಅಂಗವಿಕಲರಾದರೆ ಅಥವಾ ಮೃತಪಟ್ಟರೆ ಅವರ ಅವಲಂಬಿತರು ತೊಂದರೆಗೆ ಸಿಲುಕುತ್ತಾರೆ. ಇದಕ್ಕಾಗಿ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಕಾಯ್ದೆಯ ಉದ್ದೇಶ.
ಆನ್‌ಲೈನ್ ಪ್ಲಾಟ್‌ಫಾರ್ಮ್ ಆಧಾರಿತ ಸೇವೆಯ ಪ್ರತಿ ವಹಿವಾಟಿನ ಮೇಲೆ ಶೇ 1ರಿಂದ ಶೇ 2ರಷ್ಟು ಮೀರದಂತೆ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುತ್ತದೆ. ಅವರಿಗೆ ಭವಿಷ್ಯ ನಿಧಿ, ಅಪಘಾತ ಸೌಲಭ್ಯ, ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಕ್ಕೆ ನೆರವು, ಅಂತ್ಯಸಂಸ್ಕಾರಕ್ಕೆ ಧನಸಹಾಯ ನೀಡಲು ಕಾಯ್ದೆ ಅವಕಾಶ ಕಲ್ಪಿಸಿದೆ.
2025–26ನೇ ಆರ್ಥಿಕ ವರ್ಷದಲ್ಲಿ ಗಿಗ್ ವಲಯದಲ್ಲಿ ದುಡಿಯುವ ಕಾರ್ಮಿಕರ ಸಂಖ್ಯೆ ದೇಶದಲ್ಲಿ ಒಂದು ಕೋಟಿ ದಾಟಲಿದ್ದು, 2029–30ರ ವೇಳೆಗೆ 2.35 ಕೋಟಿಗೆ ತಲುಪಲಿದೆ ಎಂದು ನೀತಿ ಆಯೋಗ ಅಂದಾಜಿಸಿದೆ. ಕರ್ನಾಟಕದಲ್ಲಿ 4 ಲಕ್ಷ ಗಿಗ್ ಕಾರ್ಮಿಕರಿದ್ದಾರೆ.
ಸೌಲಭ್ಯಕ್ಕೆ ಯಾರು ಅರ್ಹ?
ನೌಕರರ ಭವಿಷ್ಯ ನಿಧಿ (ಇಪಿಎಫ್) ಮತ್ತು ವಿವಿಧ ನಿಬಂಧನೆಗಳ ಕಾಯ್ದೆ 1952ರ ಅಡಿ ನೋಂದಣಿಯಾದ ಎಲ್ಲಾ ಕಂಪನಿಗಳು/ ಸಂಸ್ಥೆಗಳು ಇಡಿಎಲ್‌ಐ ಯೋಜನೆಗೆ ಒಳಪಡುತ್ತವೆ. ಅಂತಹ ಸಂಸ್ಥೆಗಳು ಉದ್ಯೋಗಿಗಳಿಗೆ ಇಡಿಎಲ್‌ಐ ಸೌಲಭ್ಯ ಒದಗಿಸಬೇಕಿದೆ. ನೌಕರರ ಭವಿಷ್ಯ ನಿಧಿ ಮತ್ತು ನೌಕರರ ಪಿಂಚಣಿ ಯೋಜನೆ (ಇಪಿಎಸ್) ಸಂಯೋಜಿತ ಯೋಜನೆ ಇದಾಗಿದೆ. ಇಪಿಎಫ್ ಖಾತೆ ಹೊಂದಿರುವ ಯಾವುದೇ ಉದ್ಯೋಗಿ ಸ್ವಯಂಚಾಲಿತವಾಗಿ ಇಡಿಎಲ್‌ಐಗೆ ಅರ್ಹರಾಗುತ್ತಾರೆ. ಪ್ರತಿ ಉದ್ಯೋಗಿಯು ಅವರ ಹುದ್ದೆ ಅಥವಾ ಸಂಬಳ ಲೆಕ್ಕಿಸದೆ ವಿಮೆಗೆ ಒಳಪಡುತ್ತಾರೆ.
ಉದ್ಯೋಗಿಯು ಈ ವಿಮಾ ಸೌಲಭ್ಯ ಪಡೆಯಲು ವೈಯಕ್ತಿಕವಾಗಿ ಕಂತು ಪಾವತಿಸಬೇಕಿಲ್ಲ. ಕಂಪನಿಗಳೇ ಉದ್ಯೋಗಿಯ ಮೂಲ ವೇತನದ ಶೇ 0.5ರಷ್ಟು ಅಥವಾ ಪ್ರತಿ ತಿಂಗಳು ₹75 ಅನ್ನು ಇಡಿಎಲ್‌ಐಗೆ ಕೊಡುಗೆಯಾಗಿ ನೀಡುತ್ತವೆ.
ಖನಿಜಗಳಮೇಲೆತೆರಿಗೆ ‘ಸುಪ್ರೀಂ’ಗೆಮೇಲ್ಮನವಿ
ಸಂದರ್ಭ: ಗಣಿಗಾರಿಕೆ ಹಾಗೂ ಖನಿಜಗಳಿರುವ ಜಮೀನುಗಳ ಮೇಲೆ ತೆರಿಗೆ ವಿಧಿಸಲು ರಾಜ್ಯಗಳು ಶಾಸನಬದ್ಧ ಅಧಿಕಾರ ಹೊಂದಿವೆ ಎಂಬ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದೆ.
‘9 ಸದಸ್ಯರು ಇದ್ದ ನ್ಯಾಯಪೀಠವು 8:1ರ ಅನುಪಾತದಲ್ಲಿ ಬಹುಮತ ತೀರ್ಪು ನೀಡಿದೆ. ತೆರಿಗೆ ವಿಧಿಸುವ ವಿಚಾರ ಗಂಭೀರವಾಗಿರುವ ಕಾರಣ, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತಿದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿಗಳಾದ ವಿಕ್ರಮ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರು ಇರುವ ಪೀಠಕ್ಕೆ ತಿಳಿಸಿದ್ದಾರೆ.
ಗಣಿಗಾರಿಕೆ ಹಾಗೂ ಖನಿಜಗಳಿರುವ ಜಮೀನುಗಳ ಮೇಲೆ ತೆರಿಗೆ ವಿಧಿಸುವುದಕ್ಕೆ ಸಂಬಂಧಿಸಿ, ಆಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ.ಚಂದ್ರಚೂಡ್ ನೇತೃತ್ವದ 9 ಸದಸ್ಯರಿದ್ದ ಸಂವಿಧಾನ ಪೀಠವು, ಕಳೆದ ವರ್ಷ ಜುಲೈ 25ರಂದು 8:1ರ ಬಹುಮತದ ತೀರ್ಪು ನೀಡಿತ್ತು.
ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನ ನಿಲುವು ವ್ಯಕ್ತಪಡಿಸಿದ್ದರು. ರಾಯಧನಕೂಡತೆರಿಗೆಯಒಂದುರೂಪವೇಆಗಿದ್ದು, ಇಂತಹತೆರಿಗೆಆಕರಣೆಮಾಡುವುದಕ್ಕೆಕೇಂದ್ರಕ್ಕೆಅಧಿಕಾರಇದೆ ಎಂದು ಭಿನ್ನ ತೀರ್ಪು ನೀಡಿದ್ದರು.
ಡ್ರಗ್ಪ್ರೊಟ್ಎಐಔಷಧಸಂಶೋಧನೆಯಲ್ಲಿಕ್ರಾಂತಿ
ಸಂದರ್ಭ: ಜೀವವನ್ನು ಉಳಿಸುವ ಔಷಧಗಳನ್ನು ಕಂಡುಹಿಡಿಯುವುದು ಒಂದು ದೀರ್ಘ ಮತ್ತು ಸವಾಲಿನ ಹಾದಿ.
ಹೊಸ ಔಷಧವೊಂದನ್ನು ಮಾರುಕಟ್ಟೆಗೆ ತರಲು ಹಲವು ವರ್ಷಗಳ ಸಮಯ ಮತ್ತು ಕೋಟಿಗಟ್ಟಲೆ ಹಣ ಬೇಕಾಗುತ್ತದೆ. ಆದರೂ, ಶೇ 90ರಷ್ಟು ಔಷಧಗಳು ಯಶಸ್ವಿಯಾಗದೆ ಪ್ರಯೋಗ ಹಂತದಲ್ಲೇ ವಿಫಲಗೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣ, ರೋಗದ ಮೇಲೆ ಪರಿಣಾಮ ಬೀರಬಲ್ಲ ಸೂಕ್ತಪ್ರೋಟೀನ್ಗುರಿಯನ್ನು ಆರಂಭದಲ್ಲೇ ನಿರ್ದಿಷ್ಟವಾಗಿ ಗುರುತಿಸಲು ವಿಜ್ಞಾನಿಗಳಿಗೆ ಇರುವ ಸವಾಲು. ಇದಕ್ಕೊಂದು ಪರಿಹಾರವಾಗಿ, ಮುಂಬೈನಐಐಟಿಬಾಂಬೆಸಂಸ್ಥೆಯವಿಜ್ಞಾನಿಗಳು ‘ಡ್ರಗ್ಪ್ರೊಟ್ಎಐ’ (DrugProtAI) ಎಂಬಕೃತಕಬುದ್ಧಿಮತ್ತೆಆಧಾರಿತನವೀನತಂತ್ರಜ್ಞಾನವನ್ನುಅಭಿವೃದ್ಧಿಪಡಿಸಿದ್ದಾರೆ. ಇದು ಔಷಧ ಸಂಶೋಧನೆಯ ಹಾದಿಯನ್ನು ಬದಲಿಸಬಲ್ಲ ಮಹತ್ವದ ಹೆಜ್ಜೆಯಾಗಿದೆ.
ನಮ್ಮದೇಹದಲ್ಲಿಸುಮಾರು 20,000ಕ್ಕೂಹೆಚ್ಚುವಿಭಿನ್ನಪ್ರೋಟೀನ್ಗಳಿವೆ. ಇವು ನಮ್ಮ ದೇಹದ ಜೈವಿಕ ಕ್ರಿಯೆಗಳಿಗೆ ಆಧಾರ. ಪ್ರತಿಯೊಂದು ರೋಗಕ್ಕೂ ಒಂದು ನಿರ್ದಿಷ್ಟ ಕಾರಣವಿರುತ್ತದೆ ಮತ್ತು ಆ ಕಾರಣಕ್ಕೆ ಯಾವುದಾದರು ಪ್ರೋಟೀನ್‌ಗಳ ಪಾತ್ರವಿರುತ್ತದೆ. ಉದಾಹರಣೆಗೆ, ಕ್ಯಾನ್ಸರ್‌ಕೋಶಗಳ ಬೆಳವಣಿಗೆಗೆ ಕೆಲವು ಪ್ರೋಟೀನ್‌ಗಳು ಕಾರಣವಾಗಿರುತ್ತವೆ. ಔಷಧಗಳು ಈ ಪ್ರೋಟೀನ್‌ಗಳಿಗೆ ಅಂಟಿಕೊಂಡು ಅವುಗಳ ಚಟುವಟಿಕೆಯನ್ನು ನಿಯಂತ್ರಿಸಬೇಕು ಅಥವಾ ನಿಲ್ಲಿಸಬೇಕು.
ಪ್ರೋಟೀನೊಂದು ಔಷಧವೊಂದರ ಗುರಿಯಾಗಲು ಸೂಕ್ತವಾಗಿದೆಯೇ ಎಂಬುದನ್ನು ವೈಜ್ಞಾನಿಕವಾಗಿ ‘ಡ್ರಗ್ಗೆಬಿಲಿಟಿ’ (Druggability) ಎಂದು ಕರೆಯುತ್ತಾರೆ. ಇದನ್ನು ಗುರುತಿಸುವುದು ಸುಲಭವಲ್ಲ. ಏಕೆಂದರೆ, ಔಷಧಗಳಿಗೆ ಸೂಕ್ತ ಗುರಿಯಾಗಬಲ್ಲ ಪ್ರೋಟೀನ್‌ಗಳ ಸಂಖ್ಯೆ ಬಹಳ ಕಡಿಮೆ. ಸಾಂಪ್ರದಾಯಿಕ ವಿಧಾನಗಳಲ್ಲಿ ಇದರ ಪತ್ತೆಗೆ ಪ್ರಯೋಗಾಲಯಗಳ ಸಂಶೋಧನೆ ಮತ್ತು ಗಣಕಯಂತ್ರ ಆಧಾರಿತ ವಿಶ್ಲೇಷಣೆ ಎರಡನ್ನೂ ಬಳಸಲಾಗುತ್ತದೆ. ಈ ವಿಧಾನಗಳು ನಿಧಾನ ಮತ್ತು ನಿಖರತೆಯಲ್ಲಿ ಸ್ವಲ್ಪ ಕಡಿಮೆ.
ಹಿಂದಿನ ತಂತ್ರಜ್ಞಾನಗಳಿಗೆ ಹೋಲಿಸಿದರೆ, ಈಹೊಸ ‘ಡ್ರಗ್ಪ್ರೊಟ್ಎಐ’ ತಂತ್ರಜ್ಞಾನ ಹೆಚ್ಚು ಮಾಹಿತಿಯನ್ನು ವಿಶ್ಲೇಷಿಸುತ್ತದೆ. ಪ್ರೋಟೀನ್ಗಳುಅಮೈನೊಆಮ್ಲಗಳಿಂದ (amino acids) ರೂಪುಗೊಂಡಿರುತ್ತವೆ.
ಹಿಂದಿನ ತಂತ್ರಜ್ಞಾನಗಳು ಕೇವಲಅಮೈನೊಆಮ್ಲಗಳರಚನೆಯನ್ನುಮಾತ್ರ ಪರಿಗಣಿಸುತ್ತಿದ್ದವು. ಆದರೆ, ‘ಡ್ರಗ್ಪ್ರೊಟ್ಎಐ’ ಸುಮಾರು 183 ವಿವಿಧಪ್ರೋಟೀನ್ಗಳಗುಣಲಕ್ಷಣಗಳನ್ನುವಿಶ್ಲೇಷಿಸುತ್ತದೆ. ಇದರಲ್ಲಿ, ಪ್ರೋಟೀನ್‌ನ ಭೌತಿಕ ಹಾಗೂ ರಾಸಾಯನಿಕ ಗುಣಗಳು, ಅದರ ಅಮೈನೊ ಆಮ್ಲಗಳ ಅನುಕ್ರಮ (sequence), ಇತರೆ ಪ್ರೋಟೀನ್‌ಗಳೊಂದಿಗೆ ಅದು ಹೇಗೆ ಸಂವಹನ ನಡೆಸುತ್ತದೆ, ಮತ್ತು ಕೋಶದ ಯಾವ ಭಾಗದಲ್ಲಿ ಅದು ಇದೆ ಎಂಬ ವಿವರಗಳೂ ಸೇರಿವೆ. ಇದು ಕೇವಲ ಒಂದು ಪ್ರೋಟೀನನ್ನು ಅದರ ರಚನೆಯ ಆಧಾರದ ಮೇಲೆ ನೋಡುವುದಿಲ್ಲ, ಬದಲಿಗೆ ಅದರ ಸಂಪೂರ್ಣಗುಣಲಕ್ಷಣಗಳನ್ನುಆಧರಿಸಿವಿಶ್ಲೇಷಿಸುತ್ತದೆ. ಇದು ನಿಖರತೆಯನ್ನುಹೆಚ್ಚಿಸಿದೆ. ಈ ಕಾರಣಕ್ಕಾಗಿಯೇ ‘ಡ್ರಗ್‌ಪ್ರೊಟ್‌ಎಐ’ ಇತರ ತಂತ್ರಜ್ಞಾನಗಳಾದ ‘ಸ್ಪೈಡರ್’ (SPIDER) ಮತ್ತು ‘ಡ್ರಗ್‌ಟಾರ್’(DrugTar)ಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಸಂಶೋಧಕರು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ಇರುವ ಒಂದು ದೊಡ್ಡ ಸವಾಲು, ‘ಅಸಮತೋಲಿತ ದತ್ತಾಂಶ’ (imbalanced data) ಅಥವಾ ಮಾಹಿತಿ. ಔಷಧಗಳ ಗುರಿಯಾಗದ ಪ್ರೋಟೀನ್‌ಗಳ ಸಂಖ್ಯೆ, ಗುರಿಯಾಗುವ ಪ್ರೋಟೀನ್‌ಗಳ ಸಂಖ್ಯೆಗಿಂತ ಬಹಳ ಜಾಸ್ತಿ ಇದೆ. ಹೀಗಾಗಿ, ಕೃತಕ ಬುದ್ಧಿಮತ್ತೆಯ ಮಾದರಿಯು ಈ ಮಾಹಿತಿಯ ಮೇಲೆ ತರಬೇತಿಗೊಂಡರೆ, ಅದು ಕೇವಲ ಗುರಿಯಾಗದ ಪ್ರೋಟೀನ್‌ಗಳನ್ನೇ ಹೆಚ್ಚು ನಿಖರವಾಗಿ ಗುರುತಿಸುತ್ತದೆ. ಆದರೆ, ವಿರಳವಾಗಿರುವ, ಆದರೆ ಪ್ರಮುಖವಾಗಿರುವ ಗುರಿಯಾಗಬಲ್ಲ ಪ್ರೋಟೀನ್‌ಗಳನ್ನು ಗುರುತಿಸಲು ವಿಫಲವಾಗುತ್ತದೆ.
ಈ ಸಮಸ್ಯೆಯನ್ನು ಪರಿಹರಿಸಲು, ‘ಡ್ರಗ್‌ಪ್ರೊಟ್‌ಎಐ’ ಅನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಗಳು ‘ಪಾರ್ಟಿಷನಿಂಗ್-ಆಧಾರಿತ ಸಮಗ್ರ ವಿಧಾನ’ (partitioning-based ensemble method) ಎಂಬ ವಿಶೇಷ ತಂತ್ರವನ್ನು ಬಳಸಿದ್ದಾರೆ. ಇದರಡಿಯಲ್ಲಿ, ಗುರಿಯಾಗದ ಪ್ರೋಟೀನ್‌ಗಳ ದೊಡ್ಡ ಸಮೂಹವನ್ನು ಸಣ್ಣ ಸಣ್ಣ ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ನಂತರ, ಹಲವಾರು ಕೃತಕ ಬುದ್ಧಿಮತ್ತೆ ಮಾದರಿಗಳನ್ನು ತರಬೇತಿಗೊಳಿಸಲಾಗುತ್ತದೆ. ಪ್ರತಿಯೊಂದು ಮಾದರಿಯು ಒಂದು ಸಣ್ಣ ಗುಂಪಿನೊಂದಿಗೆ, ಮತ್ತು ಗುರಿಯಾಗಬಲ್ಲ ಪ್ರೋಟೀನ್‌ಗಳ ಸಂಪೂರ್ಣ ಗುಂಪಿನೊಂದಿಗೆ ತರಬೇತಿ ಪಡೆಯುತ್ತದೆ. ಇದರಿಂದ, ಎಲ್ಲ ಮಾದರಿಗಳಿಗೂ ಸಮತೋಲಿತ ಮಾಹಿತಿ ಸಿಗುತ್ತದೆ ಮತ್ತು ಪ್ರಮುಖ ಮಾಹಿತಿಯು ಕಣ್ಮರೆಯಾಗುವುದಿಲ್ಲ. ಈ ತಂತ್ರದಿಂದಾಗಿ, ‘ಡ್ರಗ್‌ಪ್ರೊಟ್‌ಎಐ’ ಶೇ. 87ರಷ್ಟು ನಿಖರತೆಯನ್ನು ಸಾಧಿಸಿದೆ.
ತಮ್ಮ ಸಾಧನವು ನೈಜವಾಗಿ ಎಷ್ಟು ಪರಿಣಾಮಕಾರಿ ಎಂದು ಪರೀಕ್ಷಿಸಲು, ಸಂಶೋಧಕರು ಒಂದು ವಿಶೇಷ ಪರೀಕ್ಷೆ ನಡೆಸಿದರು. ಅವರು ‘ಡ್ರಗ್‌ಪ್ರೊಟ್‌ಎಐ’ಅನ್ನು ಇತ್ತೀಚೆಗೆ ಔಷಧಗಳಿಗೆ ಗುರಿ ಎಂದು ಗುರುತಿಸಲ್ಪಟ್ಟಿದ್ದ ಪ್ರೋಟೀನ್‌ಗಳನ್ನು ಗುರುತಿಸಲು ಬಳಸಿದರು. ಈ ಪ್ರೋಟೀನ್‌ಗಳನ್ನು ಕೃತಕ ಬುದ್ಧಿಮತ್ತೆ ಮಾದರಿಯ ತರಬೇತಿಯ ಸಮಯದಲ್ಲಿ ಬಳಸಲಾಗಿರಲಿಲ್ಲ. ಈ ಪರೀಕ್ಷೆಯಲ್ಲಿ, ‘ಡ್ರಗ್‌ಪ್ರೊಟ್‌ಎಐ’ 81 ಹೊಸ ಗುರಿಗಳಲ್ಲಿ 61 ಪ್ರೋಟೀನ್‌ಗಳನ್ನು ಸರಿಯಾಗಿ ಗುರುತಿಸಿತು. ಇದು ಈ ತಂತ್ರಜ್ಞಾನದ ಪ್ರಾಯೋಗಿಕ ಮತ್ತು ನೈಜ-ಜೀವನದ ಅನ್ವಯಿಕತೆಯನ್ನು ಸಾಬೀತುಪಡಿಸುತ್ತದೆ.
ಈ ಸಾಧನದ ಮತ್ತೊಂದು ಪ್ರಮುಖ ವೈಶಿಷ್ಟ್ಯವೆಂದರೆ, ಕೇವಲ ಪ್ರೋಟೀನ್‌ಗಳನ್ನು ಒಂದು ನಿರ್ದಿಷ್ಟ ಮಟ್ಟದಲ್ಲಿ ಊಹಿಸುವುದು (prediction) ಮಾತ್ರ ಅಲ್ಲ, ಅದು ‘ಏಕೆ’ ಒಂದು ಪ್ರೋಟೀನ್ ಡ್ರಗ್ಗೆಬಲ್ ಆಗಿದೆ ಎಂಬುದನ್ನು ವಿವರಿಸುತ್ತದೆ. ‘ಶ್ಯಾಪ್’ (SHAP – SHapley Additive exPlanations) ಎಂಬತಂತ್ರವನ್ನುಬಳಸಿ, ಪ್ರೋಟೀನ್ನಯಾವಗುಣಲಕ್ಷಣಗಳುಅದರಡ್ರಗ್ಗೆಬಿಲಿಟಿಗೆಹೆಚ್ಚುಕಾರಣವಾಗಿವೆಎಂಬುದನ್ನುಇದುವಿಶ್ಲೇಷಿಸುತ್ತದೆ. ಉದಾಹರಣೆಗೆ, ಕೋಶಸಂಕೇತಗಳನ್ನು (cell signalling) ನಿಯಂತ್ರಿಸುವ ‘ಕೈನೇಸ್’ (kinases) ಎಂಬಪ್ರೋಟೀನ್ಗಳುಮತ್ತುಕೆಲವುನಿರ್ದಿಷ್ಟರಚನೆಗಳುಪ್ರೋಟೀನ್ಗಳುಔಷಧಕ್ಕೆಸೂಕ್ತವಾಗಿವೆಎಂಬುದರಪ್ರಬಲಸೂಚಕಗಳಾಗಿವೆಎಂದುಈತಂತ್ರಜ್ಞಾನತೋರಿಸಿಕೊಟ್ಟಿದೆ. ಈ ಅಂಶವು ಸಂಶೋಧಕರಿಗೆ ಒಂದು ನಿರ್ದಿಷ್ಟ ಔಷಧವನ್ನು ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಿದೆ.
‘ಡ್ರಗ್‌ಪ್ರೊಟ್‌ಎಐ’ನಂತಹ ಸಾಧನಗಳು ಔಷಧ ಸಂಶೋಧನೆಯ ಸಮಯ ಮತ್ತು ಹಣವನ್ನು ಕಡಿಮೆ ಮಾಡಬಹುದು. ಇದು ವಿಶೇಷವಾಗಿ ಬೆಂಗಳೂರು ಮತ್ತು ಕರ್ನಾಟಕದಲ್ಲಿರುವ ಹಲವು ಜೈವಿಕ ತಂತ್ರಜ್ಞಾನ ಮತ್ತು ಔಷಧ ಸಂಶೋಧನಾ ಸಂಸ್ಥೆಗಳಿಗೆ ಬಹಳ ಸಹಕಾರಿ ಆಗಬಹುದು. ಈ ತಂತ್ರಜ್ಞಾನವು ಹೆಚ್ಚು ನಿಖರ ಮತ್ತು ವೇಗವಾಗಿ ಕಾರ್ಯನಿರ್ವಹಿಸುವುದರಿಂದ, ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಗಳಿಗೆ ದಾರಿ ಮಾಡಿಕೊಡುತ್ತದೆ. ಸಂಶೋಧಕರು ಹೊಸ ಔಷಧಗಳನ್ನು ವೇಗವಾಗಿ ಕಂಡುಹಿಡಿದು, ಮನುಕುಲದ ಒಳಿತಿಗಾಗಿ ಅದನ್ನು ಇನ್ನಷ್ಟು ಶೀಘ್ರವಾಗಿ ಮಾರುಕಟ್ಟೆಗೆ ತರಬಹುದು. ಎಲ್ಲಕ್ಕಿಂತ ಮುಖ್ಯವಾಗಿ, ‘ಡ್ರಗ್‌ಪ್ರೊಟ್‌ಎಐ’ ಅನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗಿದೆ.
ಹಣ್ಣುಗಳಸಂರಕ್ಷಣೆಗೆಪ್ರೋಟೀನ್
ಸಂದರ್ಭ: ಹಣ್ಣುಗಳು ನಮ್ಮ ಆಹಾರದ ಪ್ರಮುಖ ಭಾಗ. ಇವು ನಮ್ಮ ಪೋಷಣೆ ಮತ್ತು ಬೆಳವಣಿಗೆಗೆ ಅತ್ಯವಶ್ಯವಾಗಿ ಬೇಕಾದ ಆಹಾರದ ವಿಧ; ಸೂಕ್ಷ್ಮ ಪೋಷಕಾಂಶಗಳ ಆಕರ; ತುರ್ತಾಗಿ ನಮ್ಮ ದೇಹಕ್ಕೆ ಚೈತನ್ಯ ನೀಡಬಲ್ಲ ಶಕ್ತಿಯ ಮೂಲ.
ನಮ್ಮ ಆಹಾರದಲ್ಲಿ ಇಷ್ಟೆಲ್ಲಾ ಮಹತ್ವದ ಪಾತ್ರ ವಹಿಸುವ ಹಣ್ಣುಗಳು ಅಷ್ಟೇ ಬೇಗ ಹಾಳಾಗಿ ಹೋಗುವಂಥವು. ಹಾಗಾಗಿ ಹಣ್ಣುಗಳನ್ನು ದೀರ್ಘಕಾಲ ಸಂರಕ್ಷಿಡುವುದು ಅನಿವಾರ್ಯ. ಕಟಾವು ಮಾಡಿದ ನಂತರ ಒಣಗಿಸುವುದು, ಉಪ್ಪಿನಕಾಯಿ ತಯಾರಿಸುವುದು, ಫರ್ಮೆಂಟೇಶನ್ (ಹುದುಗುವಿಕೆ), ಸಕ್ಕರೆ ಪಾಕದಲ್ಲಿ ನೆನೆಸಿಡುವುದು ಮುಂತಾದ ಸಾಂಪ್ರದಾಯಿಕ ವಿಧಾನಗಳನ್ನು ನಾವು ಕೂಡ ಅನುಸರಿಸುತ್ತಿದ್ದೆವು. ಇವು ಇಂದಿಗೂ ಬಳಕೆಯಲ್ಲಿವೆಯೆನ್ನಿ. ಆದರೆ ಈ ವಿಧಾನಗಳಲ್ಲಿ ಹಣ್ಣನ್ನು ಸಂರಕ್ಷಿಸಿ ಅದರಿಂದ ಸಿಗಬೇಕಾದ ಪೋಷಣೆಯನ್ನೇನೊ ಪಡೆದುಕೊಳ್ಳಬಹುದು, ಆಯಾ ಹಣ್ಣುಗಳ ಋತುಮಾನದಿಂದಾಚೆಗೂ! ಆದರೆ ಈ ವಿಧಾನದಿಂದ ತಾಜಾ ಹಣ್ಣುಗಳು ತಿನ್ನಲು ಸಿಗದೆ ಹಣ್ಣನ್ನು ಬೇರೆ ರುಚಿಯಲ್ಲಿ ಸವಿಯಬಹುದಷ್ಟೆ.
ವಿಜ್ಞಾನದಲ್ಲಿನಾವುಮುಂದುವರೆದಂತೆ, ಹಣ್ಣುಗಳನ್ನುಯಥಾವತ್ತಾಗಿಶೈತ್ಯಾಗಾರಗಳಲ್ಲಿಸಂಗ್ರಹಿಸುವುದು (ಡೀಪ್ ಫ್ರೀಜಿಂಗ್), ಹಣ್ಣಿನರಸಗಳನ್ನುತೆಗೆದುಬಾಟಲಿಗಳಲ್ಲಿಸಂಗ್ರಹಿಸುವುದು (ಕ್ಯಾನಿಂಗ್), ಒಣಗಿಸಬಹುದಾದಹಣ್ಣುಗಳಾದರೆಒಣಗಿಸುವುದು, ಫರ್ಮೆಂಟೇಷನ್ ಮತ್ತುಸಕ್ಕರೆಪಾಕದಲ್ಲಿಸಂಗ್ರಹಿಸುವುದು, ಹೈಡ್ರೋಫೋಬಿಕ್ ಸರ್ಫೇಸ್ ಟ್ರೀಟ್ಮೆಂಟ್ (ತೇವಾಂಶವನ್ನುಹೀರಿಕೊಳ್ಳದಸಿಲೇನುಗಳು, ಫ್ಲೂರೋಕಾರ್ಬನ್ಗಳಂತಹರಾಸಾಯನಿಕಗಳನ್ನುಹಣ್ಣುಗಳಹೊರಪದರಕ್ಕೆಲೇಪಿಸುವುದು), ತುಸುಜಟಿಲವಾದಹೊರಪದರವಿರುವಹಣ್ಣುಗಳಿಗೆನೈಸರ್ಗಿಕಪಾಲಿಮರುಗಳಾದಕೈಟೋಸಾನ್, ಶರ್ಕರಗಳಪದರವನ್ನುಲೇಪಿಸುವುದು – ಹೀಗೆ ಹಲವಾರು ವಿಧಾನಗಳಿಂದ ಹಣ್ಣುಗಳನ್ನು ಹಾಳಾಗದಂತೆ ಶೇಖರಿಸುವ ಅವಧಿಯನ್ನು ವಿಸ್ತರಿಸುವುದನ್ನು ಆರಂಭಿಸಿದೆವು.
ಇನ್ನು, ಹೆಚ್ಚಿನ ಪ್ರಮಾಣದಲ್ಲಿ ಬೆಳೆದ, ವೇಗವಾಗಿ ಹಾಳಾಗಿಹೋಗುವಂಥ ಹಣ್ಣುಗಳೆಲ್ಲವನ್ನು ದೀರ್ಘ ಕಾಲದವರೆಗೆ ತಾಜಾರೂಪದಲ್ಲಿ ಬಳಸಬೇಕಾದರೆ ಮತ್ತು ಆರ್ಥಿಕವಾಗಿಯೂ ನಷ್ಟವಾಗದಂತೆ ಖಾತರಿವಹಿಸಲು ಇನ್ನೂ ಆಧುನಿಕವಾದ ಸಂರಕ್ಷಣಾ ವಿಧಾನ ಅನಿವಾರ್ಯವಾಗಿತ್ತು. ಜೆನೆಟಿಕ್ ಮಾಡಿಫಿಕೇಶನ್, ಶೈತ್ಯಾಗಾರಗಳಲ್ಲಿ ಶೇಖರಿಸುವ ಮತ್ತು ಫಾರ್ಮಾಲ್ಡಿಹೈಡ್, ಕಾಫರ್ ಸಲ್ಫೇಟ್, ಪೊಟ್ಯಾಶಿಯಂ ಸಾರ್ಬೇಟ್ ಇತ್ಯಾದಿಗಳಂತಹ ರಾಸಾಯನಿಕಗಳನ್ನು ಬಳಸಿ ಸಂರಕ್ಷಿಸುವ ವಿಧಾನಗಳನ್ನು ಕೂಡ ಅನ್ವೇಷಿ ಸಲಾದರೂ ಇವು ಆರ್ಥಿಕವಾಗಿಯೂ ದುಬಾರಿ ಮತ್ತು ಇಂಗಾಲ ಹೊರಸೂಸುವಿಕೆಯಿಂದಾಗಿ ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತವೆ.
ಹಾಗಾಗಿ ಈ ಎಲ್ಲ ಅಡ್ಡಪರಿಣಾಮಗಳನ್ನು ನಿವಾರಿಸುತ್ತ ನಾವು ಬೆಳೆದ ಹಣ್ಣುಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸುವ ವಿಶೇಷ, ಸುಲಭ ಹಾಗೂ ಪರಿಸರಸ್ನೇಹಿ ಪರಿಹಾರವೊಂದನ್ನು ಚೀನಿವಿಜ್ಞಾನಿಗಳು ಪತ್ತೆ ಮಾಡಿದ್ದಾರಂತೆ. ಅದುವೇ ಕಂಪ್ಯೂಟರ್ ಸಹಾಯದಿಂದ ‘ಮಾಲಿಕ್ಯುಲಾರ್ಸಿಮ್ಯುಲೇಷನ್ ’ ತಂತ್ರವನ್ನುಬಳಸಿಕೊಂಡುಪ್ರೋಟೀನುಸಂಯೋಜನೆಯೊಂದನ್ನುಸಿದ್ಧಪಡಿಸಿಹಣ್ಣಿನಮೇಲ್ಭಾಗಕ್ಕೆಲೇಪನಮಾಡುವುದು! ಈ ಸುದ್ದಿಯನ್ನು ಮೊನ್ನೆ ನೇಚರ್ ಪತ್ರಿಕೆಯಲ್ಲಿ ಚೀನಾದ ಶಾಂಕ್ಸಿ ನಾರ್ಮಲ್ ಯೂನಿವರ್ಸಿಟಿಯ ವಿಜ್ಞಾನಿಗಳು ವರದಿ ಮಾಡಿದ್ದಾರೆ.
ಕಟಾವು ಮಾಡಿತಂದ ಹಣ್ಣುಗಳು ಗಾಳಿಗೆ ತೆರೆದಿಟ್ಟಾಗ ವೇಗವಾಗಿ ಆಕ್ಸಿಡೀಕರಣಕ್ಕೊಳಗಾಗುತ್ತವೆ. ಆಗ ಪೋಷಕಾಂಶಗಳೂ ನಷ್ಟವಾಗಿ, ಸೂಕ್ಷ್ಮಾಣುಜೀವಿಗಳೂ ಹಣ್ಣಿನ ಒಳಪ್ರವೇಶಿಸಲು ಅನುಕೂಲ ವಾತಾವರಣ ಸೃಷಿಯಾಗುತ್ತದೆ. ಆದರೆ ವಿಜ್ಞಾನಿಗಳು ರೂಪಿಸಿರುವ ಪ್ರೋಟೀನ್ ಸಂಯೋಜನೆಯು ಇವೆಲ್ಲವನ್ನೂ ನಿವಾರಿಸುವ ಅತ್ಯುತ್ತಮ ಗುಣವುಳ್ಳವಾಗಿವೆ ಹಾಗೂ ಇದನ್ನು, ಕತ್ತರಿಸಿದ ಹಣ್ಣಿನ ತೊಳೆಗಳನ್ನೂ ತಾಜಾವಾಗಿರಿಸಲು ಬಳಸಬಹುದಾದ್ದರಿಂದ ಜಾಗತಿಕವಾಗಿ ಎದುರಿಸುತ್ತಿರುವ ಆಹಾರ ತ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಇದೂ ಒಂದು ಉತ್ತಮ ಮತ್ತು ಸುಸ್ಥಿರ ಪರಿಹಾರವಾಗಿ ಹೊರಹೊಮ್ಮಲಿದೆ ಎನ್ನುವುದು ವಿಜ್ಞಾನಿಗಳ ಆಶಯ.
ಈಪ್ರೋಟೀನುಹಣ್ಣುಗಳಅವಧಿಯನ್ನುಸುಮಾರುಎರಡರಿಂದಐದುಪಟ್ಟುವಿಸ್ತರಿಸುವುದಲ್ಲದೆ, ಸುಮಾರುಹದಿನೇಳುರೀತಿಯಹಣ್ಣುಗಳನ್ನುಸಂರಕ್ಷಿಸಲುಈತಂತ್ರವನ್ನುಬಳಸಬಹುದಾಗಿದೆಯಂತೆ. ಹಣ್ಣುಗಳಲ್ಲಿ ಕೆಲವು ಕಟಾವು ಮಾಡಿದ ನಂತರವೂ ಮಾಗಲು ಬೇಕಾದ ಹಾರ್ಮೋನ್, ಇಥಿಲೀನ್ ಉತ್ಪಾದನೆಯಾಗುವುದರಿಂದ ಮಾಗುವುದು ಮುಂದುವರೆಯುತ್ತದೆ. ಉದಾಹರಣೆಗೆ, ಬಾಳೆಹಣ್ಣು, ಮಾವು, ಟೊಮ್ಯಾಟೋಇತ್ಯಾದಿ. ಕೆಲವುಹಣ್ಣುಗಳಲ್ಲಿಕಟಾವುಮಾಡಿದನಂತರಇಥಿಲೀನ್ ಉತ್ಪಾದನೆಯಾಗದಿರುವುದರಿಂದಮರದಲ್ಲಿಯೇಪೂರ್ತಿಹಣ್ಣಾದನಂತರವಷ್ಟೇಕಟಾವುಮಾಡಬೇಕಿರುತ್ತದೆ. ಉದಾಹರಣೆಗೆ ಸ್ಟ್ರಾಬೆರಿ, ಕಿತ್ತಳೆ, ದ್ರಾಕ್ಷಿ ಮುಂತಾದವು. ಆದರೆ ಈ ಪ್ರೋಟೀನನ್ನು ಇಂಥ ಎರಡೂ ರೀತಿಯ ಹಣ್ಣುಗಳಲ್ಲಿ ಬಳಸಿ ಸಂರಕ್ಷಿಸ ಬಹುದು ಎನ್ನುವುದು ಮತ್ತೊಂದು ಪ್ರಯೋಜನ.
ಅಲ್ಲದೇ, ಸಂರಕ್ಷಿಸಿದಷ್ಟೂ ದಿನಗಳವರೆಗೆ ಪೋಷಕಾಂಶಗಳ ಪ್ರಮಾಣ ಸುಮಾರು ಪ್ರತಿಶತ 60-98ರಷ್ಟು ಉಳಿದಿತ್ತಂತೆ. ಅರ್ಥಾತ್, ಅವಧಿ ವಿಸ್ತರಣೆಯಾದಷ್ಟೂ ಹಲವು ದಿನಗಳವರೆಗೆ ಪೋಷಕಾಂಶಗಳೂ ಸುಸ್ಥಿರವಾಗಿರುತ್ತವೆ.
ಹಣ್ಣಿನೊಳಗಿನ ನೀರಿನಾಂಶವನ್ನೂ ನಷ್ಟವಾಗದಂತೆ ಕಾಪಾಡುವುದರಿಂದ ಹಣ್ಣಿನ ತೂಕದಲ್ಲಿಯೂ ಇಳಿಕೆಯಾಗುವುದಿಲ್ಲ. ಇತರೆ ಆಹಾರ ಸಂಸ್ಕರಣಾ ವಿಧಾನಗಳಲ್ಲಿ ಪೋಷಕಾಂಶಗಳು ನಷ್ವವಾಗುವ ಸಾಧ್ಯತೆ ಇದ್ದು, ಇಲ್ಲಿ ಹಣ್ಣುಗಳು ತಾಜಾರೂಪದಲ್ಲಿ ಸಿಗುವುದಲ್ಲದೆ, ಪೋಷಕಾಂಶಗಳನ್ನೂ ಪೂರ್ಣಪ್ರಮಾಣದಲ್ಲಿ ಉಳಿಸಿಕೊಡುತ್ತದೆ.
ಹಣ್ಣುಗಳನ್ನು ಸಂರಕ್ಷಿಸುವ ಇತರೆ ವಿಧಾನಗಳಿಗೆ ಹೋಲಿಸಿದರೆ ಇಂಗಾಲ ಹೊರಸೂಸುವಿಕೆಯಲ್ಲಿಯೂ ಸುಮಾರು ಪ್ರತಿಶತ 90ರಷ್ಟು ಇಳಿಕೆಯಾಗುತ್ತ ದಂತೆ.
ಜೊತೆಗೆ ಹೀಗೆ ಲೇಪಿಸುವ ಪ್ರೋಟೀನ್‌ನ ಪದರವು ತಿನ್ನಬಲ್ಲದಾದ್ದರಿಂದ ಅಕಸ್ಮಾತಾಗಿ ಹೊಟ್ಟೆ ಸೇರಿದರೂ ತೊಂದರೆಯಿಲ್ಲ. ಹಣ್ಣುಗಳನ್ನು ಕತ್ತರಿಸುವ ಮುಂಚೆ ಹೊರಪದರವನ್ನು ತೊಳೆಯುವಾಗ ಈ ಪ್ರೋಟೀನ್‌ನ ಲೇಪನವನ್ನು ತೊಳೆದು ಸ್ವಚ್ಛಗೊಳಿಸುವುದೂ ಸುಲಭವಂತೆ. ಸಾಂಪ್ರದಾಯಿಕ ವಿಧಾನಗಳು ಕೆಲವೇ ಹಣ್ಣುಗಳನ್ನು ಮಾತ್ರವೇ ಸಂರಕ್ಷಿಸಲು ಬಳಕೆಯಾದರೆ, ಈ ಪ್ರೋಟೀನ್ ವಿಧಾನವು ವೈವಿಧ್ಯಮಯ ಹಣ್ಣುಗಳನ್ನು ಸಂರಕ್ಷಿಸಲು ಬಳಕೆಯಾಗಬಲ್ಲ, ಆರ್ಥಿಕವಾಗಿಯೂ ಅಗ್ಗವಾಗಿರುವ, ಸುರಕ್ಷಿತ ಹಾಗೂ ಪರಿಸರಸ್ನೇಹಿ ಉಪಾಯ ಎನ್ನುತ್ತಾರೆ, ವಿಜ್ಞಾನಿಗಳು.
ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಸಮುದಾಯಗಳ ಸಾಮಾಜಿಕ ನೆಲೆ ಏನು?
ಸಂವಿಧಾನದ 342ನೇ ವಿಧಿಯ ಅನ್ವಯ ಪರಿಶಿಷ್ಟ ಪಂಗಡವನ್ನು ರೂಪಿಸಲಾಗಿದ್ದು, ಪ್ರಸ್ತುತ ರಾಜ್ಯದ ಈ ಪಟ್ಟಿಯಲ್ಲಿ 50 ಜಾತಿಗಳು ಸ್ಥಾನ ಪಡೆದಿವೆ. ಶ್ರೇಣೀಕೃತ ಜಾತಿ ವ್ಯವಸ್ಥೆಯಲ್ಲಿ ಪರಿಶಿಷ್ಟ ಜಾತಿಗಳಂತೆಯೇ (ಎಸ್‌ಸಿ) ಪರಿಶಿಷ್ಟ ಪಂಗಡಗಳೂ (ಎಸ್‌ಟಿ) ಸಾಮಾಜಿಕವಾಗಿ, ಆರ್ಥಿಕವಾಗಿ ಸವಲತ್ತುಗಳಿಂದ ವಂಚಿತವಾಗಿದ್ದು, ಆ ಸಮುದಾಯಗಳನ್ನು ಸಶಕ್ತಗೊಳಿಸುವ ದಿಸೆಯಲ್ಲಿ ಹಲವು ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಎಸ್‌ಸಿಗಳಂತೆ ಎಸ್‌ಟಿ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಿರುವುದು ಅದರಲ್ಲಿ ಪ್ರಮುಖವಾದುದು.
ಸಂವಿಧಾನ ಏನು ಹೇಳುತ್ತದೆ?
ಸಂವಿಧಾನದ 342ನೇ ವಿಧಿಯು ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಅಲ್ಲಿನ ರಾಜ್ಯಪಾಲರ ಸಲಹೆ ಪಡೆದು ನಿರ್ದಿಷ್ಟ ಸಮುದಾಯ ಅಥವಾ ಜಾತಿಯನ್ನು ಪರಿಶಿಷ್ಟ ಪಂಗಡ ಎಂದು ಅಧಿಸೂಚನೆ ಹೊರಡಿಸುವ ಅಧಿಕಾರವನ್ನು ರಾಷ್ಟ್ರಪತಿಯವರಿಗೆ ನೀಡುತ್ತದೆ.
ಸಂವಿಧಾನದ 366ನೇ ವಿಧಿಯ 25ನೇ ಕಲಂ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಯಾರು ಎಂಬುದನ್ನು ವಿವರಿಸುವಾಗ, ಸಂವಿಧಾನದ 342ನೇ ವಿಧಿಯನ್ನೇ ಉಲ್ಲೇಖಿಸುತ್ತದೆ. ಎಸ್‌ಟಿ ಎಂದು ಗುರುತಿಸಲಾದ ಎಲ್ಲ ಸಮುದಾಯಗಳನ್ನು 1950ರ ರಾಷ್ಟ್ರಪತಿಯವರ (ಪರಿಶಿಷ್ಟ ಪಂಗಡಗಳು) ಆದೇಶದಲ್ಲಿ ಪಟ್ಟಿ ಮಾಡಲಾಗಿದೆ. ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವು ಎಂದು ಸಂವಿಧಾನದ ಪ್ರಕಾರವೇ ಪರಿಗಣಿಸಲಾಗುತ್ತದೆ.
ಸಂಸತ್ತು, ಹೊಸ ಕಾನೂನು ರೂಪಿಸುವುದರ ಮೂಲಕ ಪರಿಶಿಷ್ಟ ವರ್ಗಗಳ ವ್ಯಾಪ್ತಿಗೆ ಹೊಸ ಜಾತಿಯನ್ನು ಸೇರಿಸಬಹುದು ಇಲ್ಲವೇ, ಜಾತಿ ಹೆಸರನ್ನು ತೆಗೆದು ಹಾಕಬಹುದು.
ಎಸ್‌ಟಿ ಪಟ್ಟಿ ಸೇರ್ಪಡೆಗೆ ಮಾನದಂಡವೇನು?
ದೇಶದಲ್ಲಿ 1931ರಲ್ಲಿ ನಡೆದಿದ್ದ ಕೊನೆಯ ಜಾತಿಗಣತಿಯಲ್ಲಿ ‘ಆದಿವಾಸಿ ಬುಡಕಟ್ಟು’ (ಪ್ರಿಮಿಟಿವ್ ಟ್ರೈಬ್ಸ್) ಸಮುದಾಯಗಳನ್ನು ಪಟ್ಟಿ ಮಾಡಲಾಗಿತ್ತು. ನಂತರ 1935ರ ಭಾರತ ಸರ್ಕಾರ ಕಾಯ್ದೆಯಲ್ಲಿ ‘ಹಿಂದುಳಿದ ಬುಡಕಟ್ಟು’ ಸಮುದಾಯಗಳ ಪಟ್ಟಿಯನ್ನು ರೂಪಿಸಿ, ಎಸ್‌ಟಿ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿತ್ತು. ದೇಶದ ಸಂವಿಧಾನವು ನಿರ್ದಿಷ್ಟ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸುವ ಮಾನದಂಡವನ್ನು ವ್ಯಾಖ್ಯಾನಿಸದೇ ಇರುವುದರಿಂದ 1950ರ ರಾಷ್ಟ್ರಪತಿಯವರ ಸಾಂವಿಧಾನಿಕ ಆದೇಶವನ್ನೇ ಪರಿಗಣಿಸಲಾಗುತ್ತದೆ.
1950ರ ಆದೇಶದಲ್ಲಿ ಪರಿಶಿಷ್ಟ ಪಂಗಡಗಳ ಅಡಿಯಲ್ಲಿ ಬರುವ ಜಾತಿಗಳನ್ನು ಪಟ್ಟಿ ಮಾಡುವಾಗ ಸಮುದಾಯಗಳ ಆದಿಮ ಸ್ವರೂಪ ಮತ್ತು ತೀರಾ ಹಿಂದುಳಿದಿರುವಿಕೆ– ಈ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗಿತ್ತು. ಪರಿಶಿಷ್ಟ ಜಾತಿಗಳಂತೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಬರುವ ಸಮುದಾಯಗಳು ಧರ್ಮ ಆಧಾರಿತವಲ್ಲ.
ಪರಿಶಿಷ್ಟ ಪಂಗಡದ ಪಟ್ಟಿ ಸೇರ್ಪಡೆಯ ಮಾನದಂಡ ಬದಲಾಗಿರುವ ಇತಿಹಾಸವಿದೆಯೇ?
1950 ಮತ್ತು 1960ರ ದಶಕಗಳಲ್ಲಿ ಭಾಷೆಗಳ ಆಧಾರದಲ್ಲಿ ಪ್ರತ್ಯೇಕ ರಾಜ್ಯಗಳನ್ನು ರೂಪುಗೊಳಿಸಲಾಯಿತು. ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಹಲವು ರೀತಿಯ ವ್ಯತ್ಯಾಸಗಳು, ಸಮಸ್ಯೆಗಳು ಕಾಣಿಸಿಕೊಂಡವು. ಉದಾಹರಣೆಗೆ, ಬ್ರಿಟಿಷರ ಕಾಲದಲ್ಲಿ ಅಪರಾಧ ಬುಡಕಟ್ಟು ಎಂದು ಪರಿಗಣಿತವಾಗಿದ್ದ ಪಾರ್ಧಿ ಸಮುದಾಯವನ್ನು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಎಸ್‌ಟಿ ಪಟ್ಟಿಗೆ ಸೇರಿಸಲಾಗಿತ್ತು. ಆದರೆ, ಅದೇ ಸಮುದಾಯವನ್ನು ರಾಜಸ್ಥಾನದಲ್ಲಿ ಎಸ್‌ಸಿ ಪಟ್ಟಿಗೆ ಸೇರಿಸಲಾಗಿತ್ತು. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು 1965ರಲ್ಲಿ ಆಗ ಕಾನೂನು ಕಾರ್ಯದರ್ಶಿಯಾಗಿದ್ದ ಪಿ.ಬಿ.ಲೋಕೂರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಪರಿಶಿಷ್ಟ ಪಂಗಡ ಎನ್ನುವುದನ್ನು ಸೂಕ್ತವಾಗಿ ವ್ಯಾಖ್ಯಾನಿಸಲು, ಎಸ್‌ಟಿ ಪಟ್ಟಿಯಲ್ಲಿ ಜಾತಿಗಳನ್ನು ಸೇರಿಸಲು ಮಾನದಂಡಗಳನ್ನು ನಿಗದಿಪಡಿಸುವಂತೆ ಸೂಚಿಸಿತು.
ಎಸ್‌ಟಿ ಪಟ್ಟಿಯಲ್ಲಿ ಬದಲಾವಣೆ ಮಾಡಲು ಯಾವ ಪ್ರಕ್ರಿಯೆಯನ್ನು ಅನುಸರಿಸಬೇಕು?
ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ರಾಷ್ಟ್ರಪತಿಯವರ 1950ರ ಆದೇಶವನ್ನು ಬದಲಾಯಿಸಿ, ನಿರ್ದಿಷ್ಟ ಜಾತಿಯನ್ನು ಪಟ್ಟಿಗೆ ಸೇರಿಸುವಂತೆ ಅಥವಾ ನಿರ್ದಿಷ್ಟ ಜಾತಿಯನ್ನು ಪಟ್ಟಿಯಿಂದ ಕೈಬಿಡುವಂತೆ ಪ್ರಸ್ತಾವವನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ. ನಂತರ, ಆ ಪ್ರಸ್ತಾವವನ್ನು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಮತ್ತು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾಕ್ಕೆ (ಆರ್‌ಜಿಐ) ಕಳುಹಿಸಿ, ಅವರ ಅಭಿಪ್ರಾಯ ಮತ್ತು ಸಲಹೆ ಕೇಳಲಾಗುತ್ತದೆ. ಆರ್‌ಜಿಐನವರು ಆಂಥ್ರೊಪೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳ, ತಜ್ಞರ ಅಭಿಪ್ರಾಯ ಪಡೆಯುತ್ತಾರೆ; ಪ್ರಸ್ತಾವವು ಲೋಕೂರ್ ಸಮಿತಿ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿದೆಯೇ ಎನ್ನುವುದನ್ನು ಪರಿಶೀಲಿಸುತ್ತಾರೆ.
ಎಸ್‌ಟಿ ಪಟ್ಟಿ ಬದಲಾವಣೆ ಮಾಡುವ ದಿಸೆಯಲ್ಲಿ ಲೋಕಸಭೆಯಲ್ಲಿ ಯಾವ ಪ್ರಕ್ರಿಯೆ ನಡೆಯುತ್ತದೆ?
ಆರ್‌ಜಿಐ ಮತ್ತು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದ ಸಲಹೆಗಳ ಆಧಾರದಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಯನ್ನು ಬದಲಾಯಿಸುವ ದಿಸೆಯಲ್ಲಿ ತಿದ್ದುಪಡಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸುತ್ತದೆ. ಆ ಮಸೂದೆಯು ವಿಶೇಷ ಬಹುಮತದೊಂದಿಗೆ ಸಂಸತ್‌ನ ಉಭಯ ಸದನಗಳಲ್ಲಿ ಅಂಗೀಕಾರವಾಗಬೇಕು; ಮೂರನೇ ಎರಡರಷ್ಟು ಸದಸ್ಯರು ಸದನದಲ್ಲಿ ಹಾಜರಿರಬೇಕು ಮತ್ತು ಮತ ಚಲಾಯಿಸಬೇಕು. ಆ ಸಂಖ್ಯೆಯು ಸಂಸತ್‌ನ ಒಟ್ಟು ಬಲದಲ್ಲಿ ಶೇ 50ಕ್ಕಿಂತ ಹೆಚ್ಚಿರಬೇಕು. ಆಧಾರ: ಲೋಕೂರ್ ಸಮಿತಿಯ ವರದಿ, ಮಾಧ್ಯಮ ವರದಿಗಳು
ಲೋಕೂರ್ ಸಮಿತಿಯ ವರದಿಯಲ್ಲೇನಿತ್ತು?
ಪರಿಶಿಷ್ಟ ಪಂಗಡಗಳ ವ್ಯಾಪ್ತಿಗೆ ಬರುವ ಸಮುದಾಯಗಳ ಪಟ್ಟಿಯನ್ನು ಪರಿಷ್ಕರಿಸುವುದಕ್ಕಾಗಿ ಸಮಿತಿಯು ಆದಿವಾಸಿಗಳ ಗುಣಲಕ್ಷಣಗಳನ್ನು ಹೊಂದಿರುವುದು, ವಿಭಿನ್ನ ಸಂಸ್ಕೃತಿ, ಭೌಗೋಳಿಕವಾಗಿ ಪ್ರತ್ಯೇಕವಾಗಿ ವಾಸ ಇರುವುದು, ಇತರ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಬೆರೆಯಲು ಸಂಕೋಚ ಪಡುವುದು ಮತ್ತು ತೀರಾ ಹಿಂದುಳಿದಿರುವಿಕೆಗಳನ್ನು ಪ್ರಮುಖ ಮಾನದಂಡಗಳನ್ನಾಗಿ ಪರಿಗಣಿಸಿತ್ತು.
ಯಾವುದೇ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರು ಮುಖ್ಯವಾಹಿನಿ ಜನರೊಂದಿಗೆ ಬೆರೆತಿದ್ದರೆ, ಅಂತಹವರು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಲು ಅರ್ಹರಲ್ಲ ಎಂದೂ ಸಮಿತಿ ಪ್ರತಿಪಾದಿಸಿತ್ತು.
‘ಕೆಲವು ರಾಜ್ಯಗಳಲ್ಲಿ ಒಂದೇ ಹೆಸರಿನ ಎರಡು ಭಿನ್ನ ಸಮುದಾಯಗಳಿವೆ. ಆದರೆ, ಅವುಗಳಲ್ಲಿ ಒಂದು ಸಮುದಾಯ ಮಾತ್ರ ಎಸ್‌ಟಿ ಪಟ್ಟಿಗೆ ಸೇರಲು ಅರ್ಹವಾಗಿರುವುದು ಕಂಡು ಬಂದಿದೆ. ಬುಡಕಟ್ಟು ಸಮುದಾಯಗಳಿಗೆ ಸೇರಿದ ಜನರು ರಾಜ್ಯವೊಂದರ ನಿರ್ದಿಷ್ಟ ಪ್ರದೇಶಗಳಲ್ಲಿ ನೆಲಸಿರುವ ಮತ್ತು ಅದೇ ಸಮುದಾಯದ ಮತ್ತೂ ಕೆಲವರು ರಾಜ್ಯದ ಉಳಿದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕೆಲವು ಉದಾಹರಣೆಗಳು ಕಂಡುಬಂದಿವೆ. ಇವರಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಅಗತ್ಯವಿದೆ. ಉಳಿದ ಕಡೆಗಳಲ್ಲಿ ನೆಲಸಿರುವವರು ಈ ಪಟ್ಟಿಗೆ ಸೇರುವ ಅರ್ಹತೆ ಪಡೆದಿಲ್ಲ’ ಎಂದು ಸಮಿತಿಯು ತನ್ನ ವರದಿಯಲ್ಲಿ ತಿಳಿಸಿತ್ತು.
ಆದರೆ, ನಂತರದ ವರ್ಷಗಳಲ್ಲಿ ಕೇಂದ್ರ ಸರ್ಕಾರವು ಪಟ್ಟಿಗೆ ಜಾತಿಗಳನ್ನು ಸೇರ್ಪಡೆಯಾಗಲು ಅಥವಾ ಪಟ್ಟಿಯಿಂದ ತೆಗೆದು ಹಾಕಲು ಇರಬೇಕಾದ ವಿಧಾನಗಳನ್ನು ಬದಲಾಯಿಸಿತು.
ಕುರುಬ ಸಮುದಾಯದ ಬೇಡಿಕೆ
ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎನ್ನುವ ಒತ್ತಾಯ ಹಿಂದಿನಿಂದಲೂ ಕೇಳಿಬರುತ್ತಿದೆ. ಪ್ರಸ್ತುತ ಕುರುಬ ಸಮುದಾಯವು ಹಿಂದುಳಿದ ‘ಎ’ ಪಟ್ಟಿಯಲ್ಲಿದ್ದು, ಅದೇ ಪಟ್ಟಿಯಲ್ಲಿರುವ ಇತರೆ 102 ಜಾತಿಗಳೊಂದಿಗೆ ಶೇ 15ರ ಮೀಸಲಾತಿಯನ್ನು ಹಂಚಿಕೊಳ್ಳುತ್ತಿದೆ. ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ 2023ರಲ್ಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಈ ಸಂಬಂಧ ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆ ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನೂ ಲಗತ್ತಿಸಲಾಗಿತ್ತು. ಆದರೆ, ಪ್ರಸ್ತಾವವನ್ನು ಕೇಂದ್ರವು ವಾಪಸ್ ಕಳುಹಿಸಿತ್ತು.
ಕುರುಬರು, ಭಾರತದ ಮೂಲನಿವಾಸಿಗಳಾಗಿದ್ದು, ಸಮುದಾಯವನ್ನು 1868 ಮತ್ತು 1901ರ ಜನಗಣತಿಯ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಎಂದೇ ಗುರುತಿಸಲಾಗಿತ್ತು. ಸ್ವಾತಂತ್ರ್ಯಾನಂತರ ಪಟ್ಟಿಯಿಂದ ಕೈಬಿಡಲಾಗಿತ್ತು. ದೇವರಾಜ ಅರಸರು ಕಾಡು ಕುರುಬ ಮತ್ತು ಜೇನು ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸಿದರು. ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕುರುಬರನ್ನು ಎಸ್‌ಟಿ ಎಂದು ಪರಿಗಣಿಸಲಾಗುತ್ತಿದೆ ಎನ್ನುವುದು ಸಮುದಾಯದ ಮುಖಂಡರ ವಾದ. ಆದರೆ, ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ವಾಲ್ಮೀಕಿ ಮಹಾಸಭಾ ಸೇರಿದಂತೆ ಹಲವು ಸಂಘಟನೆಗಳು, ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.
ಅತ್ಯಲ್ಪ ಯಶಸ್ಸು
ಕರ್ನಾಟಕದಲ್ಲಿ ಹಲವು ಜಾತಿಗಳನ್ನು ಅವುಗಳ ಸ್ಥಿತಿಗತಿ ಆಧರಿಸಿ ಎಸ್‌ಟಿ ಪಟ್ಟಿಗೆ ಸೇರಿಸುವ ಸಂಬಂಧ ಹಿಂದಿನಿಂದಲೂ ಪ್ರಸ್ತಾವಗಳನ್ನು ಕಳುಹಿಸುವುದು ನಡೆದೇ ಇದೆ. ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕೆನ್ನುವ ಬೇಡಿಕೆ ಬಹಳ ಕಾಲದಿಂದಲೂ ಇದೆ. ಈ ಸಂಬಂಧ ರಾಜ್ಯದಿಂದ ಹಿಂದೆಯೇ ಶಿಫಾರಸು ಮಾಡಲಾಗಿತ್ತು. ಇದೇ ರೀತಿ ಗಂಗಾಮತ ಮತ್ತು ಅದರ ಉಪಜಾತಿಗಾಳದ ಕೋಲಿ, ಕಬ್ಬಲಿಗ, ಬೆಸ್ತ, ಬಾರಿಕ, ಅಂಬಿಗ ಇವುಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎನ್ನುವ ಒತ್ತಾಯ ಇದೆ. ಬಹಳ ಹಿಂದಿನಿಂದಲೂ ಈ ಬೇಡಿಕೆ ಇದ್ದು, ಮೂರು ಬಾರಿ ಶಿಫಾರಸು ಮಾಡಲಾಗಿತ್ತು. ಮೂರು ಬಾರಿಯೂ ಪ್ರಸ್ತಾವವನ್ನು ವಾಪಸ್ ಕಳುಹಿಸಲಾಗಿದೆ. ರಾಜ್ಯದ ಇಂಥ ಪ್ರಯತ್ನಗಳ ಪೈಕಿ ಯಶ ಕಂಡಿರುವುದು ಕೆಲವು ಮಾತ್ರ. ರಾಜ್ಯ ಸರ್ಕಾರದ ಶಿಫಾರಸು ಆಧರಿಸಿ ಮೇದಾರ, ತಳವಾರರನ್ನು ಎಸ್‌ಟಿ ಪಟ್ಟಿಗೆ ಸೇರಿಸಲಾಗಿದೆ. ಇದೇ ರೀತಿ ಕೆಲವು ಜಿಲ್ಲೆಗಳಲ್ಲಿರುವ ಸಿದ್ಧಿ ಸಮುದಾಯವನ್ನೂ ಎಸ್‌ಟಿ ಪಟ್ಟಿಗೆ ಸೇರಿಸಲಾಗಿದೆ. ಆದರೆ, ರಾಜ್ಯದ ಪ್ರಯತ್ನಗಳಿಗೆ ಸಿಕ್ಕಿರುವ ಯಶಸ್ಸು ಅತ್ಯಲ್ಪ.
2025ರ ಸೆಪ್ಟೆಂಬರ್ 16ರಂದು ಕರೆದಿದ್ದ ಸಭೆಯಲ್ಲಿ ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರದ ಜತೆಗೆ ಗಂಗಾಮತಸ್ಥರನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಪ್ರಸ್ತಾವದ ಬಗ್ಗೆಯೂ ಚರ್ಚಿಸಬೇಕಾಗಿತ್ತು. ಆದರೆ, ನಂತರ ಆ ಸಭೆ ಮುಂದೂಡಲಾಯಿತು.
ಫಿಡೆ ವಿಶ್ವಕಪ್: ದಿವ್ಯಾ ದೇಶಮುಖ್‌ಗೆ ವೈಲ್ಡ್‌ಕಾರ್ಡ್
ಸಂದರ್ಭ: ಫಿಡೆ ಮಹಿಳಾ ವಿಶ್ವಕಪ್ ವಿಜೇತೆ ಗ್ರ್ಯಾಂಡ್ ಮಾಸ್ಟರ್ ದಿವ್ಯಾ ದೇಶಮುಖ್ ಅವರು ಗೋವಾದಲ್ಲಿನಡೆಯಲಿರುವ 2025ರಆವೃತ್ತಿಯಫಿಡೆವಿಶ್ವಕಪ್ಗೆ ವೈಲ್ಡ್‌ಕಾರ್ಡ್ ಪ್ರವೇಶ ಪಡೆದಿದ್ದಾರೆ.
ವಿಶ್ವಕಪ್ ಟೂರ್ನಿಯು ಅಕ್ಟೋಬರ್ 31ರಿಂದ ನವೆಂಬರ್ 27ರ ತನಕ ನಡೆಯಲಿದೆ. ಒಬ್ಬ ಸ್ಪರ್ಧಿಯು ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಕಾರಣ 19 ವರ್ಷದ ದಿವ್ಯಾ ಅವರಿಗೆ ಅವಕಾಶ ದೊರಕಿದೆ.
ಫಿಡೆವಿಶ್ವಕಪ್ಪ್ರತಿಎರಡುವರ್ಷಗಳಿಗೊಮ್ಮೆನಡೆಯುತ್ತದೆ. ವಿಶ್ವದ 206 ಚೆಸ್‌ಪಟುಗಳು ಕಣಕ್ಕೆ ಇಳಿಯಲಿದ್ದಾರೆ.
ಸಂದರ್ಭ: ದೇಶದ ಪ್ರಮುಖ ಎಂಟು ಮೂಲಸೌಕರ್ಯ ವಲಯಗಳ ಬೆಳವಣಿಗೆ ಆಗಸ್ಟ್‌ನಲ್ಲಿ 13 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿದ್ದು, ಶೇ 6.3ರಷ್ಟು ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕಲ್ಲಿದ್ದಲು, ಉಕ್ಕು, ಸಿಮೆಂಟ್ಉತ್ಪಾದನೆಯಲ್ಲಿನ ಹೆಚ್ಚಳದಿಂದಾಗಿ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ತಿಳಿಸಿದೆ.
ಜುಲೈನಲ್ಲಿ ವಲಯದ ಉತ್ಪಾದನೆ ಶೇ 3.7ರಷ್ಟಿತ್ತು. ಕಳೆದ ವರ್ಷದ ಆಗಸ್ಟ್‌ನಲ್ಲಿ ಬೆಳವಣಿಗೆ ಶೇ (–) 1.5 ದಾಖಲಾಗಿತ್ತು.
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ವಲಯದ ಪ್ರಗತಿ ಶೇ 2.8ರಷ್ಟಾಗಿದೆ ಎಂದು ಕೇಂದ್ರ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಇದು ಶೇ 4.6ರಷ್ಟಿತ್ತು.
ಕಲ್ಲಿದ್ದಲು (ಶೇ 11.4), ಉಕ್ಕು (ಶೇ 14.2), ಸಿಮೆಂಟ್ (ಶೇ 6.1), ಸಂಸ್ಕರಿಸಿದಉತ್ಪನ್ನಗಳು (ಶೇ 3), ರಸಗೊಬ್ಬರ (ಶೇ 4.6), ವಿದ್ಯುತ್ (ಶೇ 3.1ರಷ್ಟು) ಉತ್ಪಾದನೆಹೆಚ್ಚಳವಾಗಿದೆ. ಕಚ್ಚಾ ತೈಲ, ನೈಸರ್ಗಿಕ ಅನಿಲ ಉತ್ಪಾದನೆ ಇಳಿಕೆ ಆಗಿದೆ ಎಂದು ತಿಳಿಸಿದೆ.
ಸಂದರ್ಭ: ನಿತ್ಯ ಬಳಕೆಯ ಉತ್ಪನ್ನಗಳು, ಆಹಾರ ಉತ್ಪನ್ನಗಳು, ವಾಹನಗಳು ಸೇರಿದಂತೆ ಸರಿಸುಮಾರು 375 ಉತ್ಪನ್ನಗಳ ಬೆಲೆಯು ಕಡಿಮೆ ಆಗಲಿವೆ.
ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ತೆರಿಗೆ ಪ್ರಮಾಣವನ್ನು ಜಿಎಸ್‌ಟಿ ಮಂಡಳಿ ಪರಿಷ್ಕರಿಸಿದ್ದು, ಪರಿಷ್ಕೃತ ದರಗಳು ಜಾರಿಗೆ ಬರುತ್ತಿವೆ. ಇದರ ಪ್ರಯೋಜನ ವನ್ನು ಬಹುತೇಕ ಕಂಪನಿಗಳು ಗ್ರಾಹಕರಿಗೆ ವರ್ಗಾವಣೆ ಮಾಡಿವೆ.
ಇಷ್ಟು ವರ್ಷ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ನಾಲ್ಕು ತೆರಿಗೆ ಹಂತಗಳು (ಶೇ 5, 12, 18 ಮತ್ತು 28) ಇದ್ದವು. ಆದರೆ ಇನ್ನು ಮುಂದೆ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಎರಡು ತೆರಿಗೆ ಹಂತಗಳು (ಶೇ 5 ಮತ್ತು 18) ಇರಲಿವೆ. ಐಷಾರಾಮಿ ಉತ್ಪನ್ನಗಳು ಹಾಗೂ ತಂಬಾಕಿನ ಉತ್ಪನ್ನಗಳಿಗೆ ಶೇ 40ರಷ್ಟು ತೆರಿಗೆ ಇರಲಿದೆ. ಈ ಬದಲಾವಣೆಗಳ ಪರಿಣಾಮವಾಗಿ ದೇಶದ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಬಳಕೆ ಉತ್ಪನ್ನಗಳನ್ನು (ಎಫ್‌ಎಂಸಿಜಿ) ತಯಾರಿಸುವ ಕಂಪನಿಗಳು ಪರಿಷ್ಕೃತ ದರವನ್ನು ಪ್ರಕಟಿಸಿವೆ. ಸೋಪು, ಶಾಂಪೂ, ಟೂತ್‌ಪೇಸ್ಟ್ ಸೇರಿದಂತೆ ತಮ್ಮ ಹತ್ತು ಹಲವು ಉತ್ಪನ್ನಗಳ ಮೇಲೆ ಹೊಸ ಎಂಆರ್‌ಪಿ ನಮೂದಿಸಿವೆ.
ಕುರುಕಲು, ಕಾಫಿ ಮತ್ತು ಚಹಾ ಪುಡಿ, ಐಸ್‌ಕ್ರೀಂ, ಚಾಕೊಲೇಟ್ ಹಾಗೂ ಇತರ ಆಹಾರ ವಸ್ತುಗಳ ತಯಾರಿಕಾ ಕಂಪನಿಗಳು ಕೂಡ ತೆರಿಗೆ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲು ಸಜ್ಜಾಗಿವೆ.
ಈ ಕಂಪನಿಗಳು ಪರಿಷ್ಕೃತ ಎಂಆರ್‌ಪಿ ಇರುವ ಉತ್ಪನ್ನಗಳನ್ನು ವಿತರಕರಿಗೆ, ಇ–ವಾಣಿಜ್ಯ ಕಂಪನಿಗಳ ಗೋದಾಮುಗಳಿಗೆ, ಸಾಂಪ್ರದಾಯಿಕ ಕಿರಾಣಿ ಅಂಗಡಿಗಳಿಗೆ ರವಾನಿಸಿರುವುದಾಗಿ ಹೇಳಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳ ಬೆಲೆಯನ್ನು ವಿಶೇಷವಾದ ರಿಯಾಯಿತಿಗಳ ಮೂಲಕ ಸರಿಹೊಂದಿಸಲಾಗಿದೆ ಎಂದು ಹೇಳಿವೆ.
ಡಾಬರ್, ಐಟಿಸಿ, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ, ನೆಸ್ಲೆ, ಆರ್‌ಸಿಪಿಎಲ್, ಅಮೂಲ್, ಎಚ್‌ಯುಎಲ್‌ನಂತಹ ಪ್ರಮುಖ ಕಂಪನಿಗಳು ಪರಿಷ್ಕೃತ ದರದ ಪಟ್ಟಿಯನ್ನು ತಮ್ಮ ವಿತರಕರಿಗೆ ರವಾನಿಸಿವೆ. ಅಲ್ಲದೆ, ತಮ್ಮ ವೆಬ್‌ಸೈಟ್‌ಗಳ ಮೂಲಕ ಹೊಸ ದರವನ್ನು ಗ್ರಾಹಕರಿಗೂ ತಿಳಿಸಿವೆ.
ಕೆಐಒಸಿಎಲ್ ವಿರುದ್ಧಗ್ರಾಮಸಭೆನಿರ್ಣಯ
ಸಂದರ್ಭ: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (ಕೆಐಒಸಿಎಲ್) ಉದ್ದೇಶಿತ ದೇವದಾರಿ ಗಣಿಗೆ ಮತ್ತೊಂದು ಅಡ್ಡಿ ಎದುರಾಗಿದೆ. ಗಣಿಯ ವಿರುದ್ಧ ಸ್ಥಳೀಯ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ದೇವದಾರಿ ಗಣಿಗೆ ಸಂಬಂಧಿಸಿ ಕೆಐಒಸಿಎಲ್ ಮತ್ತು ಅರಣ್ಯ ಇಲಾಖೆ ನಡುವಿನ ನ್ಯಾಯಾಂಗ ಹೋರಾಟದಲ್ಲಿ ಕೋರ್ಟ್ ಕೆಐಒಸಿಎಲ್ ಪರ ಇತ್ತೀಚೆಗೆ ಆದೇಶ ನೀಡಿದೆ. ಈ ಮಧ್ಯೆ ಸಂಡೂರು ತಾಲ್ಲೂಕಿನ ನರಸಿಂಗಪುರ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಜರುಗಿತು.
ಸಭೆಯಲ್ಲಿ ಕೆಐಒಸಿಎಲ್‌ಗೆ ವಿರೋಧ ವ್ಯಕ್ತವಾಗಿದೆ. ‘ಅರಣ್ಯ ಪ್ರದೇಶ, ಮಳೆ, ಪರಿಸರ ಹಿತದೃಷ್ಟಿಯಿಂದ ಕುದುರೆಮುಖ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಗ್ರಾಮಸ್ಥರು ತೀರ್ಮಾನಿಸಿದರು. ಕಂಪನಿಯು ಕೆಲ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಇದಕ್ಕೆ ಅನುಮತಿ ನೀಡಬೇಕು ಎಂದು ಗ್ರಾಮಸ್ಥರೊಬ್ಬರು ಸಭೆಯಲ್ಲಿ ತಿಳಿಸಿದರು. ಮುಂದಿನ ಕ್ರಮಕ್ಕಾಗಿ ಸಂಡೂರು ತಹಶೀಲ್ದಾರರಿಗೆ ಪತ್ರ ಕಳುಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು’ ಎಂದು ಗ್ರಾಮ ಪಂಚಾಯಿತಿ ನಿರ್ಣಯ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ನಿರ್ಣಯಕ್ಕೆ ಮಾನ್ಯತೆಯುಂಟೇ?: ಗ್ರಾಮ ಸಭೆಯ ನಿರ್ಣಯಗಳಿಗೆ ಮಾನ್ಯತೆ ಇರುತ್ತದೆ. ಆದರೆ, ಇದು ಮುಖ್ಯ ಖನಿಜಕ್ಕೆ (ಮೇಜರ್ ಮಿನರಲ್) ಸಂಬಂಧಿಸಿದ ವಿಷಯ. ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಮುಖ್ಯ ಖನಿಜಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಆದ್ದರಿಂದ ಈ ವಿಷಯದಲ್ಲಿ ಗ್ರಾಮಸಭೆ ನಿರ್ಣಯಕ್ಕೆ ಮಾನ್ಯತೆ ಇಲ್ಲ ಎಂಬ ಅಭಿಪ್ರಾಯ ಅಧಿಕಾರಿಗಳಿಂದ ವ್ಯಕ್ತವಾಗಿದೆ.
‘ಗ್ರಾಮ ಪಂಚಾಯಿತಿ ಎಂಬುದು ಸ್ಥಳೀಯ ಸರ್ಕಾರ. ನಮ್ಮ ನಿರ್ಧಾರಕ್ಕೆ ಮಾನ್ಯತೆ ಇದೆ. ಗಣಿ ಲಾರಿಗಳ ಓಡಾಟದಿಂದ ನಮ್ಮ ಗ್ರಾಮಗಳು ದೂಳಿನಲ್ಲಿ ಮುಳುಗಿವೆ. ನಾವೆಲ್ಲರೂ ಶಾಪಗ್ರಸ್ತರಾಗಿದ್ದೇವೆ. ಹೊಸ ಗಣಿ ಬರುವುದಕ್ಕೆ ನಮ್ಮ ವಿರೋಧವಿದೆ’ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಸಂಡೂರುತಾಲ್ಲೂಕಿನಸ್ವಾಮಿಮಲೈಅರಣ್ಯದ 401.57 ಹೆಕ್ಟೇರ್ಪ್ರದೇಶದಲ್ಲಿಕೆಐಒಸಿಎಲ್ ‘ದೇವದಾರಿ’ ಗಣಿಗಾರಿಕೆನಡೆಸಲುಯೋಜನೆರೂಪಿಸಿದೆ. ಆದರೆ, ಅರಣ್ಯ ತೀರುವಳಿ ಪತ್ರ ಇನ್ನೂ ಸಿಕ್ಕಿಲ್ಲ. ಗಣಿಗೆ ಒಂದು ಲಕ್ಷ ಮರಗಳನ್ನು ಕಡಿಯುವ ಅಗತ್ಯವಿದೆ ಎಂದು ಈಗಾಗಲೇ ಅರಣ್ಯ ಇಲಾಖೆ ಹೇಳಿದ್ದು, ಜತೆಗೆ ಆಕ್ಷೇಪವನ್ನೂ ವ್ಯಕ್ತಪಡಿಸಿದೆ.
ಭಾರತ್ಜೆನ್ ಎ.ಐಮಾದರಿಗೆಹಣಕಾಸಿನನೆರವು: ವೈಷ್ಣವ್
ಸಂದರ್ಭ: ಕೇಂದ್ರ ಸರ್ಕಾರದ ಬೆಂಬಲವಿರುವ ಕೃತಕ ಬುದ್ಧಿಮತ್ತೆಯ (ಎ.ಐ) ಪ್ರಮುಖ ಯೋಜನೆ ‘ಭಾರತ್‌ಜೆನ್’ಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ₹988.6 ಕೋಟಿ ಧನಸಹಾಯವನ್ನು ನೀಡಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
₹1,500 ಕೋಟಿ ಮೊತ್ತದ ‘ಇಂಡಿಯಾ ಎ.ಐ ಮಿಷನ್ 2025’ ಅಡಿಯಲ್ಲಿ ಭಾರತದ ಸರ್ಕಾರಿ ಎ.ಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಭಾರತ್‌ಜೆನ್‌ನ ವಹಿಸಬಹುದಾದ ಪಾತ್ರವನ್ನು ಈ ಧನಸಹಾಯವು ತೋರಿಸುತ್ತದೆ.
ಶಕ್ತಿಯುತ ಎ.ಐ ಮಾದರಿಗಳನ್ನು ರಚಿಸಲು ಭಾರತ್‌ಜೆನ್‌ಗೆ ಈ ಧನಸಹಾಯವು ನೆರವು ನೀಡುತ್ತದೆ. ಇದು ಧ್ವನಿಯನ್ನು ಅಕ್ಷರಗಳಿಗೆ ಪರಿವರ್ತಿಸುವ, ಅಕ್ಷರಗಳನ್ನು ಓದಿಹೇಳುವ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಆನಂದಸಂಕೇಶ್ವರಗೆ ‘ಸೌತ್ ಇಂಡಿಯಾಬ್ಯುಸಿನೆಸ್’ ಪ್ರಶಸ್ತಿ
ಸಂದರ್ಭ: ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ‘ಸೌತ್ ಇಂಡಿಯಾ ಬ್ಯುಸಿನೆಸ್ ಪ್ರಶಸ್ತಿ’ (ಎಸ್ಐಬಿಎ) ಸಂದಿದೆ.
ದುಬೈನಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಯುಎಇ ರಾಯಭಾರಿ ಆಗಿದ್ದ ಅಹ್ಮದ್ ಅಬ್ದುಲ್ ರೆಹಮಾನ್ ಅಲ್ಬನ್ನಾ ಅವರು ಆನಂದ ಸಂಕೇಶ್ವರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ ಜಾಗತಿಕವಾಗಿ ಪ್ರಭಾವ ಬೀರಿರುವವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ವಿಆರ್ಎಲ್ ಸಂಸ್ಥೆಯನ್ನು ದೇಶದ ದೊಡ್ಡ ಸಾರಿಗೆ ಕಂಪನಿಯಾಗಿ, ಕಾರ್ಯಾ ಚರಣೆ ದಕ್ಷತೆಯಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬೆಳೆಸುವಲ್ಲಿ ಆನಂದ ಸಂಕೇಶ್ವರ ಕೊಡುಗೆ ನೀಡಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ಹೇಳಿರು ವುದಾಗಿ ಪ್ರಕಟಣೆ ತಿಳಿಸಿದೆ.
ಎಚ್–1ಬಿವೀಸಾ: ಕ್ರಮಕ್ಕೆಒತ್ತಾಯ
ಸಂದರ್ಭ: ‘ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್–1ಬಿ ವೀಸಾ ಅರ್ಜಿಯ ವಾರ್ಷಿಕ ಶುಲ್ಕವನ್ನು ಹೆಚ್ಚಿಸಿರುವುದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು‘ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಆಗ್ರಹಿಸಿದ್ದಾರೆ.
‘ಎಚ್–1ಬಿ ವೀಸಾ ಅರ್ಜಿಯ ವಾರ್ಷಿಕ ಶುಲ್ಕ ಹೆಚ್ಚಳದಿಂದ ತೆಲುಗು ಐಟಿ ವೃತ್ತಿಪರರಿಗೆ ಆಗಿರುವ ನೋವನ್ನು ಊಹಿಸಲೂ ಸಾಧ್ಯವಿಲ್ಲ. ಈ ಸಮಸ್ಯೆಯನ್ನು ಸೌಹಾರ್ದದಿಂದ ಪರಿಹರಿಸಬೇಕು’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಶುಲ್ಕ ಹೆಚ್ಚಿಸುವ ಟ್ರಂಪ್ ಅವರ ಆದೇಶವು ಆಘಾತಕಾರಿಯಾಗಿದೆ. ಭಾರತ–ಅಮೆರಿಕ ನಡುವಿನ ಐತಿಹಾಸಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕ್ರಮವು ಸ್ವೀಕಾರಾರ್ಹವಲ್ಲ’ ಎಂದೂ ಅವರು ಹೇಳಿದ್ದಾರೆ.
‘ಅಮೆರಿಕಕ್ಕಾಗಿ ವರ್ಷಗಳಿಂದ ಕೆಲಸ ಮಾಡುತ್ತಿರುವ ನಮ್ಮ ದೇಶದ ಅಪಾರ ಸಂಖ್ಯೆಯ ಐಟಿ ವೃತ್ತಿಪರರು, ಕೌಶಲ ಆಧಾರಿತ ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಎಚ್–1ಬಿ ವೀಸಾದ ದುರ್ಬಳಕೆಯು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದಿರುವ ಟ್ರಂಪ್, ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸುವ ಆದೇಶಕ್ಕೆ ಶುಕ್ರವಾರ ಸಹಿ ಹಾಕಿದ್ದರು. ಅಮೆರಿಕಕ್ಕೆ ವಲಸೆಯೇತರ ಕಾರ್ಮಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಶುಲ್ಕ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿದ್ದರು.
‘ಅಮೆರಿಕದಿಂದ ಬಲವಂತದ ತಂತ್ರ’
‘ಅಮೆರಿಕವು ತನ್ನ ವ್ಯಾಪಾರ ಹಿತಾಸಕ್ತಿ ರಕ್ಷಿಸಿಕೊಳ್ಳಲು ಭಾರತದ ಮೇಲೆ ಬಲವಂತದ ತಂತ್ರಗಳನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರವು ಈ ಅನ್ಯಾಯದ ವಿರುದ್ಧ ದೃಢ ನಿಲುವು ತೆಗೆದುಕೊಳ್ಳಬೇಕು’ ಎಂದು ಸಿಪಿಎಂ ಪಾಲಿಟ್‌ಬ್ಯೂರೊ ಆಗ್ರಹಿಸಿದೆ.
ಅಮೆರಿಕದ ಶೇ 50 ಸುಂಕ ನೀತಿಗೆ ಭಾರತ ಮಣಿಯುವಂತೆ ಮಾಡಲು ಎಚ್–1ಬಿ ವೀಸಾ ಅರ್ಜಿಯ ಶುಲ್ಕ ಹೆಚ್ಚಳದಂತಹ ಬಲವಂತದ ಕ್ರಮಗಳನ್ನು ಕೈ ಗೊಳ್ಳಲಾಗುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆನ್ನು ಎಡಪಕ್ಷಗಳು ಬಯಸುತ್ತವೆ ಎಂದಿದೆ.
ಪವನ್‌ಕುಮಾರ್ ಭಜಂತ್ರಿಪಟ್ನಾಹೈಕೋರ್ಟ್ ಸಿಜೆ
ಸಂದರ್ಭ: ಕರ್ನಾಟಕದ ಪವನ್‌ಕುಮಾರ್ ಭೀಮಪ್ಪ ಭಜಂತ್ರಿ ಅವರು ಬಿಹಾರದ ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲರಾದ ಆರೀಫ್ ಮೊಹಮ್ಮದ್ ಖಾನ್ ಅವರು ರಾಜಭವನದಲ್ಲಿ ಪವನ್‌ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
1990ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ ಪವನ್‌ಕುಮಾರ್ ಅವರು, 2015ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ನಂತರ ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ, 2018ರಲ್ಲಿ ಮತ್ತೆ ಕರ್ನಾಟಕ ಹೈ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2021ರಿಂದ ಪಟ್ನಾ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಸಾತ್ವಿಕ್–ಚಿರಾಗ್ ಮತ್ತೆರನ್ನರ್ಸ್ ಅಪ್
ಸಂದರ್ಭ: ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ರನ್ನರ್ಸ್ ಅಪ್‌ನೊಂದಿಗೆ ಅಭಿಯಾನ ಮುಗಿಸಿದರು.
ಎಂಟನೇ ಕ್ರಮಾಂಕದ ಭಾರತದ ಆಟಗಾರರು ಪುರುಷರ ಡಬಲ್ಸ್ ಫೈನಲ್‌ನಲ್ಲಿ 19-21, 15-21ರಿಂದ ವಿಶ್ವದ ಅಗ್ರಮಾನ್ಯ ಜೋಡಿ ಕಿಮ್ ವಾನ್ ಹೋ ಮತ್ತು ಸಿಯೋ ಸೆಯುಂಗ್ ಜೇ ಅವರಿಗೆ ಮಣಿದರು. ದಕ್ಷಿಣ ಕೊರಿಯಾದ ಈ ಆಟಗಾರರು 45 ನಿಮಿಷದಲ್ಲಿ ನೇರ ಗೇಮ್‌ಗಳಿಂದ ಮೇಲುಗೈ ಸಾಧಿಸಿದರು.
ಏಷ್ಯನ್ ಗೇಮ್ಸ್ ಚಾಂಪಿಯನ್ ಜೋಡಿ ಈ ಟೂರ್ನಿಯ ಮೂಲಕ ತಮ್ಮ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳುವ ಛಲದಲ್ಲಿದ್ದರು. ಹೋದ ತಿಂಗಳು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಕಂಚಿನ ಪದಕ ಮತ್ತು ಹೋದ ವಾರ ಹಾಂಗ್‌ಕಾಂಗ್ ಓಪನ್‌ನಲ್ಲಿ ರನ್ನರ್ಸ್ ಅಪ್ ಆಗಿದ್ದ ಸಾತ್ವಿಕ್–ಚಿರಾಗ್ ಇಲ್ಲಿ ಒಂದೂ ಗೇಮ್ ಬಿಟ್ಟುಕೊಡದೆ ಪ್ರಶಸ್ತಿ ಸುತ್ತು ತಲುಪಿ, ಭರವಸೆ ಮೂಡಿಸಿದ್ದರು.
ಇತರ ಜೊತೆಗಾರರೊಂದಿಗೆ ಪ್ರಯೋಗ ಮಾಡಿ ಮತ್ತೆ ಈ ಋತುವಿನಲ್ಲಿ ಒಂದಾದ ಕಿಮ್ ಮತ್ತು ಸಿಯೋ ಅವರು 2025ರಲ್ಲಿ ಒಂಬತ್ತನೇ ಟೂರ್ನಿಯಲ್ಲಿ ಫೈನಲ್ ಸ್ಪರ್ಧಿಸಿದ್ದಾರೆ. ಆ ಪೈಕಿ ಪ್ಯಾರಿಸ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ, ಆಲ್ ಇಂಗ್ಲೆಂಡ್ ಮತ್ತು ಇಂಡೋನೇಷ್ಯಾ ಓಪನ್ ಸೇರಿದಂತೆ ಆರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಸಂದರ್ಭ: ಭಾರತದ ಪ್ರಮೋದ್ ಭಗತ್ ಅವರು ಬೀಜಿಂಗ್‌ನಲ್ಲಿ ಭಾನುವಾರ ನಡೆದ ಚೀನಾ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಷನಲ್ ಟೂರ್ನಿಯಲ್ಲಿ ಚಿನ್ನ ಗೆದರೆ, ಸುಕಾಂತ ಕದಂ ಮತ್ತು ಕೃಷ್ಣ ನಗರ್ ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಅನುಭವಿ ಪ್ರಮೋದ್ ಭಾಗವತ್ ಅವರು 18 ತಿಂಗಳ ಅಮಾನತಿನ ನಂತರ ಆಟಕ್ಕೆ ಸ್ಮರಣೀಯ ಪುನರಾಗಮನ ಮಾಡಿದ್ದು, ಪುರುಷರ ಎಸ್‌ಎಲ್3 ವಿಭಾಗದ ಸಿಂಗಲ್ಸ್‌ನಲ್ಲಿ ಚಿನ್ನದ ಗೆದ್ದುಕೊಂಡರು. ಪ್ರಮೋದ್, ಉತ್ತಮ ಹೋರಾಟ ಕಂಡ ಫೈನಲ್‌ನಲ್ಲಿ ಇಂಡೊನೇಷ್ಯಾದ ಮುಹ ಅಲ್ ಇಮ್ರಾನ್ ಎದುರು ಮೊದಲ ಸೆಟ್ ಸೋತರೂ ನಂತರ 21–19, 21–16 ರಲ್ಲಿ ಜಯಗಳಿಸಿದರು.
ಪುರುಷರರಿಲೆ: ಚಿನ್ನಕಸಿದಬೋಟ್ಸ್ವಾನಾ
ಸಂದರ್ಭ: ರೋಮಾಂಚಕ ಹಣಾಹಣಿಯಲ್ಲಿ ಅಮೆರಿಕ ತಂಡವನ್ನು ಕೊನೆಯ ಲೆಗ್‌ನಲ್ಲಿ ಹಿಂದೆಹಾಕಿದ ಬೋಟ್ಸ್‌ವಾನಾ ತಂಡವು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ 4×400 ಮೀಟರ್ಸ್ ರಿಲೆ ಚಿನ್ನವನ್ನು ಬಾಚಿಕೊಂಡಿತು. ಈ ಓಟದಲ್ಲಿ ಚಿನ್ನ ಗೆದ್ದ ಆಫ್ರಿಕಾದ ಮೊದಲ ತಂಡವೆಂಬ ಹೆಗ್ಗಳಿಕೆಗೂ ಪಾತ್ರವಾಯಿತು.
ಭಾನುವಾರ ಮಳೆ ಜೋರಾಗಿದ್ದು ಸ್ಪರ್ಧೆಗಳ ವೇಳಾಪಟ್ಟಿ ಏರುಪೇರಾಯಿತು. ಬೆಳಿಗ್ಗೆ ರನ್‌ಆಫ್‌ನಲ್ಲಿ ಕೆನ್ಯಾ ತಂಡವನ್ನು ಹಿಂದೆಹಾಕಿ ಫೈನಲ್ ತಲುಪಿದ್ದ ಪ್ರಬಲ ಅಮೆರಿಕವು ಚಿನ್ನ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಅಂತಿಮ ಲೆಗ್ ಇರುವಾಗ ಅಮೆರಿಕ ಮುಂದಿತ್ತು. ಆದರೆ 400 ಮೀ. ಓಟದಲ್ಲಿ ವೈಯಕ್ತಿಕ ಚಿನ್ನ ಗೆದ್ದಿದ್ದ, ಕಾಲಿನ್ ಕೆಬಿನಾಟ್ಶಿಪಿ ಅವರು ಮಳೆಯ ನಡುವೆ ಅತ್ಯಮೋಘವಾಗಿ ಅಂತಿಮ ಲೆಗ್ ಓಡಿ ಬೋಟ್ಸ್‌ವಾನಾಕ್ಕೆ ಐತಿಹಾಸಿಕ ಚಿನ್ನ ತಂದುಕೊಟ್ಟರು. ಈ ತಂಡ 2ನಿಮಿಷ 57.56 ಸೆಕೆಂಡುಗಳಲ್ಲಿ ಗುರಿತಲುಪಿತು.
ನಿಕೋಲಾಗೆ ಚಿನ್ನ: ಆಸ್ಟ್ರೇಲಿಯಾದ ನಿಕೋಲಾ ಒಲಿಸ್ಲೇಗರ್ಸ್ ಅವರು ಮಹಿಳೆಯರ ಹೈಜಂಪ್ ಚಿನ್ನ ಗೆದ್ದರು. ಮಳೆಯಿಂದ ಈ ಸ್ಪರ್ಧೆಯ ಕೊನೆಯ ಸುತ್ತಿನ ಯತ್ನಕ್ಕೆ ಸ್ಪರ್ಧಿಗಳು ಸಾಕಷ್ಟು ಕಾಯಬೇಕಾಯಿತು.
ಎರಡು ಬಾರಿಯ ಒಲಿಂಪಿಕ್ ಬೆಳ್ಳಿ ವಿಜೇತೆ ನಿಕೋಲಾ 2.00 ಮೀ. ಜಿಗಿದು ಮೊದಲಿಗರಾದರು. ವಿಶ್ವದಾಖಲೆ ಹೊಂದಿರುವ ಉಕ್ರೇನ್‌ನ ಯರೊಸ್ಲಾವಾ ಮಹುಚಿಕಿ 2.02 ಮೀ. ಎತ್ತರಕ್ಕೆ ಜಿಗಿಯಲು ಉದ್ದೇಶಿಸಿದರೂ ವಿಫಲರಾದರು. ಪೋಲೆಂಡ್‌ನ ಮರಿಯಾ ಜೋಡ್ಜಿಕ್ (2.00) ಬೆಳ್ಳಿ ಗೆದ್ದರು. ಮಹುಚಿಕಿ ಅಂತಿಮವಾಗಿ ಸರ್ಬಿಯಾದ ಆ್ಯಂಜೆಲಿನಾ ಟೋಪಿಕ್ ಅವರೊಂದಿಗೆ 1.97 ಮೀ. ಜಿಗಿದು ಕಂಚಿನ ಪದಕ ಹಂಚಿಕೊಂಡರು.
‘ನಾಡಹಬ್ಬ’ಕ್ಕೆಬಾನುಚಾಲನೆಇಂದು
ಸಂದರ್ಭ: ರಾಜ್ಯದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಅರಂಭವಾಗಿದೆ.
ಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ( ಸೆ.22 to ಅ.2 ರವರೆಗೆ ನಡೆಯುವ ಉತ್ಸವಕ್ಕೆ ಚಾಲನೆ ನೀಡ ಲಿದ್ದಾರೆ
ಸಂದರ್ಭ: ಅಮೆರಿಕದ ಐಟಿ ಉದ್ಯೋಗಿಗಳಾಗಿರುವ ಕೆಲವು ಭಾರತೀಯರು ತವರಿಗೆ ಬರುವುದಕ್ಕಾಗಿ ಸ್ಯಾನ್ ಫ್ರಾನ್ಸಿಸ್ಕೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಏರಿದ್ದರು. ಸ್ವಲ್ಪ ಹೊತ್ತಿನಲ್ಲಿ ವಿಮಾನ ಹೊರಡುವುದಿತ್ತು. ಅಷ್ಟು ಹೊತ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್–1ಬಿ ವೀಸಾದ ಅರ್ಜಿ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಸುಮಾರು ₹88 ಲಕ್ಷ) ಏರಿಸುವ ಕಾರ್ಯಾದೇಶಕ್ಕೆ ಸಹಿ ಹಾಕಿದರು.
ವಿಮಾನದಲ್ಲಿದ್ದ ಭಾರತೀಯರಿಗೆ ಈ ಸುದ್ದಿ ಸಿಕ್ಕಿದ್ದೇ ತಡ, ಆತಂಕಗೊಂಡರು. ತಮ್ಮನ್ನು ವಿಮಾನದಿಂದ ಕೆಳಗಿಳಿಸುವಂತೆ ವಿಮಾನದ ಸಿಬ್ಬಂದಿಗೆ ಕೇಳಿಕೊಂಡರು. ಟೆಕಿಗಳಿಗೆಮಾತ್ರವಲ್ಲ, ಅವರನ್ನುನೇಮಿಸಿಕೊಂಡಿರುವಮೆಟಾ, ಮೈಕ್ರೊಸಾಫ್ಟ್, ಗೂಗಲ್ನಂತಹತಂತ್ರಜ್ಞಾನಕ್ಷೇತ್ರದಬೃಹತ್ ಕಂಪನಿಗಳೂಈಆದೇಶದಿಂದಗಾಬರಿಗೊಂಡುಈವೀಸಾದಅಡಿಯಲ್ಲಿಕೆಲಸಮಾಡುತ್ತಿರುವತಮ್ಮೆಲ್ಲಾಸಿಬ್ಬಂದಿಗೆದೇಶತೊರೆಯದಂತೆಸೂಚಿಸಿದವು.
‘ಅಮೆರಿಕವೇಮೊದಲು’ ಎಂದು ಹೇಳುತ್ತಿರುವ ಟ್ರಂಪ್ ಆಡಳಿತದ ನಿರ್ಧಾರ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.
ಅಮೆರಿಕದ ನಿರ್ಧಾರವು ಭಾರತೀಯರ ‘ಕುಟುಂಬಗಳನ್ನು ಗಲಿಬಿಲಿಗೊಳಿಸಲಿದೆ’ ಎಂಬ ಭಾರತದ ವಿದೇಶಾಂಗ ಸಚಿವಾಲಯದ ಪ್ರತಿಕ್ರಿಯೆ ಕೂಡ ಟ್ರಂಪ್ ಆದೇಶದಿಂದ ಭಾರತೀಯರ ಮೇಲಾಗಲಿರುವ ಪರಿಣಾಮವನ್ನು ಒತ್ತಿ ಹೇಳುತ್ತದೆ. ಅದಕ್ಕೆ ಕಾರಣವೂ ಇದೆ.
ಈ ವೀಸಾ ಯೋಜನೆಯ ಅತಿ ಹೆಚ್ಚು ಫಲಾನುಭವಿಗಳು ಭಾರತೀಯ ಯುವ ಜನರು. ಅಮೆರಿಕದಲ್ಲಿ ದುಡಿದು ಹಣ ಸಂಪಾದಿಸಬೇಕು ಎಂಬ ಅವರ ಕನಸನ್ನು ನನಸು ಮಾಡಿದ್ದು ಇದೇ ಎಚ್–1ಬಿ ವೀಸಾ. ಈ ವೀಸಾದ ಮೂಲಕ ಅಲ್ಲಿಗೆ ತೆರಳಿ ಒಂದಷ್ಟು ವರ್ಷ ಕೆಲಸ ಮಾಡಿ, ನಂತರ ಪೌರತ್ವ ಪಡೆದು ಅಲ್ಲಿಯೇ ನೆಲಸಿದ ಭಾರತೀಯರ ಸಂಖ್ಯೆ ದೊಡ್ಡದಿದೆ.
ಹೀಗಿರುವಾಗ 2,000 ಡಾಲರ್‌ನಿಂದ 5,000 ಡಾಲರ್‌ವರೆಗೆ ಇದ್ದ ವೀಸಾ ಶುಲ್ಕವನ್ನು ದಿಢೀರ್ ಒಂದು ಲಕ್ಷ ಡಾಲರ್‌ಗೆ ಏರಿಸಿರುವುದು ಅಮೆರಿಕದಲ್ಲಿ ಕೆಲಸ ಮಾಡಬೇಕು, ನಂತರ ಅಲ್ಲಿಯೇ ನೆಲಸಬೇಕು ಎನ್ನುವ ದೇಶದ ಲಕ್ಷಾಂತರ ಯುವಕ–ಯುವತಿಯರ ಕನಸಿಗೆ ತಣ್ಣೀರು ಎರಚಿದೆ.
ಈ ವೀಸಾದ ಅಡಿಯಲ್ಲಿ ಅಮೆರಿಕದಲ್ಲಿ ಈಗ ಕೆಲಸ ಮಾಡುತ್ತಿರುವವರೂ ಶನಿವಾರ ಆದೇಶ ಹೊರಬಿದ್ದ ತಕ್ಷಣ ಆತಂಕಗೊಂಡಿದ್ದರು. ತಮ್ಮನ್ನು ನೇಮಕ ಮಾಡಿಕೊಂಡ ಕಂಪನಿಗಳು ಲಕ್ಷ ಡಾಲರ್ ಶುಲ್ಕ ಭರಿಸದೇ ಇದ್ದರೆ, ಕೆಲಸ ಕಳೆದುಕೊಂಡು ಭಾರತಕ್ಕೆ ಮರಳಬೇಕಾದೀತು ಎಂಬ ಕಳವಳ ಅವರನ್ನು ಕಾಡಿತ್ತು. ಆದರೆ, ಶ್ವೇತಭವನದಿಂದ ಸ್ಪಷ್ಟನೆ ಹೊರಬಿದ್ದ ಬಳಿಕ ಅವರು ಕೊಂಚ ನಿರಾಳರಾಗಿದ್ದಾರೆ.
ಶ್ವೇತ ಭವನದ ಆಡಳಿತ ನೀಡಿರುವ ಸ್ಪಷ್ಟನೆಯ ಪ್ರಕಾರ, ಹೊಸ ಶುಲ್ಕ ಹೊಸ ಅರ್ಜಿಗಳಿಗಷ್ಟೇ ಅನ್ವಯವಾಗುತ್ತದೆ (ಮುಂದಿನ ಲಾಟರಿ ಸೈಕಲ್‌ಗೆ). ಈ ವೀಸಾದಡಿ ಈಗ ಕೆಲಸ ಮಾಡುತ್ತಿರುವವರು ಹೊಸ ಶುಲ್ಕ ಪಾವತಿಸಬೇಕಾಗಿಲ್ಲ. ಅಲ್ಲದೇ ವೀಸಾ ಅವಧಿ ಮುಕ್ತಾಯಗೊಂಡ ನಂತರ ಸಲ್ಲಿಸಲಾಗುವ ನವೀಕರಣ ಅರ್ಜಿಗೂ ಇದು ಅನ್ವಯವಾಗುವುದಿಲ್ಲ. ಹಾಲಿ ವೀಸಾ ಹೊಂದಿರುವವರು ಈಗಿನಂತೆ ಹೊರ ದೇಶಗಳಿಗೆ ಹೋಗಬಹುದು, ಅಮೆರಿಕಕ್ಕೆ ಬರಬಹುದು. ಅದೇ ರೀತಿ, ಎಚ್–1ಬಿ ವೀಸಾಕ್ಕಾಗಿ ಪ್ರತಿ ವರ್ಷ ಲಕ್ಷ ಡಾಲರ್ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಆರಂಭದಲ್ಲಿ ವರದಿಯಾಗಿತ್ತು. ಆದರೆ, ಇದಕ್ಕೂ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, ಈ ಶುಲ್ಕವು ವೀಸಾದ ಪೂರ್ಣ ಅವಧಿಗೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ಕಡಿಮೆಯಾಗಲಿದೆ ಅವಕಾಶ: ಹೊರದೇಶಗಳ ಕೌಶಲಯುಕ್ತ ವೃತ್ತಿಪರರನ್ನು ನೇಮಿಸಿಕೊಳ್ಳುವ ಕಂಪನಿಗಳು ಈ ವೀಸಾಕ್ಕಾಗಿ ಅರ್ಜಿ ಸಲ್ಲಿಸುತ್ತವೆ. ಶುಲ್ಕವನ್ನು ಭರಿಸುವುದೂ ಅವುಗಳೇ. ಶುಲ್ಕ ಹೆಚ್ಚಾಗಿರುವುದು ಕಂಪನಿಗಳಿಗೆ ಹೊರೆಯಾಗುವುದು ಖಂಡಿತ. ಹಾಗಾಗಿ, ವಿದೇಶ ವೃತ್ತಿಪರರನ್ನು ನೇಮಿಸುವುದಕ್ಕಾಗಿ ಅಷ್ಟು ಮೊತ್ತದ ಶುಲ್ಕ ನೀಡಲು ಅವುಗಳು ಹಿಂದೇಟು ಹಾಕಬಹುದು. ಇಲ್ಲವೇ ಹೆಚ್ಚು ಪರಿಣತಿ ಇರುವ ನಿರ್ದಿಷ್ಟ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಲೇ ಬೇಕು ಎಂಬಂತಹ ಅನಿವಾರ್ಯ ಸನ್ನಿವೇಶದಲ್ಲಿ ಮಾತ್ರ ಈ ವೀಸಾದಡಿ ಕಂಪನಿಗಳು ನೇಮಕಾತಿಗೆ ಮುಂದಾಗಬಹುದು. ನೇಮಕ ಮಾಡಿದರೂ, ಉದ್ಯೋಗಿಗಳ ಸಂಖ್ಯೆ ತುಂಬಾ ಕಡಿಮೆ ಇರಬಹುದು. ವೀಸಾ ನವೀಕರಣಕ್ಕೆ ಹೊಸ ಶುಲ್ಕ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿರುವುದು ಸಮಾಧಾನಕರ ಸಂಗತಿ. ನವೀಕರಣಕ್ಕೆ ಈ ಶುಲ್ಕ ಅನ್ವಯವಾಗಿದ್ದರೆ ಸಾವಿರಾರು ಭಾರತೀಯರು ಕೆಲಸ ಕಳೆದುಕೊಳ್ಳುತ್ತಿದ್ದರು ಎಂಬುದು ತಜ್ಞರ ಅಭಿಪ್ರಾಯ.
ಭಾರತೀಯರೇಫಲಾನುಭವಿಗಳು
‘ಎಚ್1–ಬಿ’ ಯು ವಲಸೆಯೇತರ ವೀಸಾ. ಹೊರದೇಶಗಳ ಪರಿಣತ ವೃತ್ತಿಪರರಿಗೆ ಅಮೆರಿಕದಲ್ಲಿ ಕೆಲಸ ನೀಡಲು ಅಲ್ಲಿನ ಕಂಪನಿಗಳಿಗೆ ಇದು ಅವಕಾಶ ನೀಡುತ್ತದೆ. ಇದು ತಾತ್ಕಾಲಿಕ ವೀಸಾ ಆಗಿದ್ದು, ಇದಕ್ಕೆ ಮೂರರಿಂದ ಆರು ವರ್ಷಗಳ ಅವಧಿ ಇರುತ್ತದೆ.
ಈ ವೀಸಾದ ಅಡಿಯಲ್ಲಿ ಅಮೆರಿಕಕ್ಕೆ ತೆರಳುವವರಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಭಾರತದ ಎಂಜಿನಿಯರ್‌ಗಳು ಹಾಗೂ ಇತರ ಕ್ಷೇತ್ರಗಳ ತಜ್ಞರನ್ನು ತಂತ್ರಜ್ಞಾನ ಹಾಗೂ ಇತರ ಕಂಪನಿಗಳು ಕರೆಸಿಕೊಳ್ಳುತ್ತವೆ. ಅಮೆರಿಕ ಸರ್ಕಾರ ವಿತರಿಸುವ ಬಹುಪಾಲು ವೀಸಾಗಳ ಫಲಾನುಭವಿಗಳು ತಂತ್ರಜ್ಞಾನ ಕಂಪನಿಗಳು. ಕಂಪ್ಯೂಟರ್‌ಗೆ ಸಂಬಂಧಿಸಿದ ಉದ್ಯೋಗದಲ್ಲಿರುವ ಶೇ 65ರಷ್ಟು ಮಂದಿ ಈ ವೀಸಾದ ಫಲಾನುಭವಿಗಳು.
ಟ್ರಂಪ್ ಅವರು ತಮ್ಮ ಕಾರ್ಯಾದೇಶದಲ್ಲಿ, ಎಚ್–1ಬಿ ವೀಸಾ ಅರ್ಜಿ ಶುಲ್ಕ ಹೆಚ್ಚಿಸುವುದಕ್ಕೆ ಏನು ಕಾರಣ ಎಂಬುದನ್ನೂ ವಿವರಿಸಿದ್ದಾರೆ. ಕಂಪನಿಗಳು ಈ ವೀಸಾ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಸ್ಥಳೀಯರಿಗೆ ಹೆಚ್ಚು ಸಂಬಳ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ನೀಡದೆ, ಹೊರದೇಶಗಳಿಂದ ಕಡಿಮೆ ಸಂಬಳಕ್ಕೆ ವೃತ್ತಿಪರರನ್ನು ಕರೆಸಿಕೊಂಡು ಉದ್ಯೋಗ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ವಿಜ್ಞಾನ, ತಂತ್ರಜ್ಞಾನಎಂಜಿನಿಯರಿಂಗ್ ಮತ್ತುಗಣಿತಕ್ಷೇತ್ರದಲ್ಲಿ (ಸ್ಟೆಮ್) ದುಡಿಯುತ್ತಿರುವವಿದೇಶಿಉದ್ಯೋಗಿಗಳಸಂಖ್ಯೆ 2000 ಮತ್ತು 2019ರನಡುವೆದುಪ್ಪಟ್ಟಾಗಿದೆ. ಐಟಿಕಂಪನಿಗಳುಈವೀಸಾಯೋಜನೆಯನ್ನುಅತಿಹೆಚ್ಚುದುರ್ಬಳಕೆಮಾಡಿಕೊಂಡಿವೆ. ಕಳೆದಐದುವರ್ಷಗಳಲ್ಲಿಕಂಪನಿಗಳುಎಚ್–1ಬಿವೀಸಾಪಡೆಯುವಪ್ರಮಾಣಶೇ 65ರಷ್ಟುಹೆಚ್ಚಾಗಿದೆಎಂದುಟ್ರಂಪ್ ಅವರುಆದೇಶದಲ್ಲಿವಿವರಿಸಿದ್ದಾರೆ.
ಕಂಪನಿಗಳು ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಎಚ್–1ಬಿ ವೀಸಾಕ್ಕೆ ಅರ್ಜಿ ಸಲ್ಲಿಸಿ ವಿದೇಶದವರಿಗೆ ಉದ್ಯೋಗ ನೀಡುತ್ತಿವೆ. ಅದೇ ಸಮಯದಲ್ಲಿ ಹೆಚ್ಚು ಸಂಬಳದ ಕಾರಣಕ್ಕೆ ಅಮೆರಿಕದವರನ್ನು ಕೆಲಸದಿಂದ ತೆಗೆಯುತ್ತಿವೆ. ಎಂದು ಆರೋಪಿಸಿರುವ ಅವರು, ಇದಕ್ಕೆ ಹಲವು ಉದಾಹರಣೆಗಳನ್ನೂ ನೀಡಿದ್ದಾರೆ. ವೀಸಾ ಯೋಜನೆಯ ದುರ್ಬಳಕೆ ತಡೆಯಲು ಮತ್ತು ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಲು ವೀಸಾ ಅರ್ಜಿ ಶುಲ್ಕ ಹೆಚ್ಚಿಸುವುದು ಅನಿವಾರ್ಯ ಎಂದು ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಆದೇಶ ಒಂದು ವರ್ಷ (ಸೆ.21 2026) ಜಾರಿಯಲ್ಲಿರಲಿದೆ ಎಂದು ಕಾರ್ಯಾದೇಶದಲ್ಲಿ ಹೇಳಲಾಗಿದೆ. ಒಂದು ವೇಳೆ, ಅದರ ಒಳಗಾಗಿ ಅವಧಿಯನ್ನು ವಿಸ್ತರಿಸದೇ ಇದ್ದರೆ ಆದೇಶ ಅನೂರ್ಜಿತ ಗೊಳ್ಳಲಿದೆ.
ಸದ್ಬಳಕೆಗೆಅವಕಾಶ
ಟ್ರಂಪ್ ಅವರ ಈ ಕ್ರಮವನ್ನು ಸದ್ಬಳಕೆ ಮಾಡುವುದಕ್ಕೆ ಭಾರತಕ್ಕೆ ಅವಕಾಶ ಇದೆ. ಅಮೆರಿಕದಲ್ಲಿನ ಕಂಪನಿಗಳು ಪರಿಣತ ವೃತ್ತಿಪರರನ್ನು ನೇಮಕ ಮಾಡಿಕೊಳ್ಳದೇ ಇದ್ದರೆ, ಅವರು ಭಾರತದಲ್ಲೇ ಉಳಿಯಲಿದ್ದಾರೆ. ಅವರಿಗೆ ಇಲ್ಲೇ ಉತ್ತಮ ಅವಕಾಶ ಸಿಕ್ಕಿದರೆ ದೇಶದಲ್ಲಿ ಉದ್ಯಮಗಳು ಬೆಳೆಯುತ್ತವೆ. ಇದು ದೇಶದ ಅಭಿವೃದ್ಧಿಗೂ ಅನುಕೂಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
‘ಅಮೆರಿಕದಿಂದ ವಾಪಸ್ ಆಗುವ ಮತ್ತು ದೇಶದಲ್ಲಿರುವ ತಜ್ಞ ಪ್ರತಿಭೆಗಳನ್ನು ದೇಶದ ಸಾಫ್ಟ್‌ವೇರ್, ಕ್ಲೌಡ್ ಮತ್ತು ಸೈಬರ್‌ಭದ್ರತೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಬಳಸಿಕೊಂಡು ಲಾಭ ಪಡೆಯುವ ಯೋಜನೆಯನ್ನು ಭಾರತ ರೂಪಿಸಬೇಕು. ಆ ಮೂಲಕ ‘ಡಿಜಿಟಲ್ ಸ್ವರಾಜ್ ಮಿಷನ್’ಗೆ ಉತ್ತೇಜನ ನೀಡಬೇಕು’ ಎಂದು ಜಿಟಿಆರ್‌ಐ ಸಂಸ್ಥಾಪಕ ಅಜಯ್ ಶ್ರೀವಾಸ್ತವ ಹೇಳಿದ್ದಾರೆ.
‘ಅಮೆರಿಕಕ್ಕೇನಷ್ಟ’
ಟ್ರಂಪ್ ಅವರ ಈ ನಿರ್ಧಾರದಿಂದ ಭಾರತಕ್ಕಿಂತಲೂ ಅಮೆರಿಕಕ್ಕೆ ಹೆಚ್ಚು ನಷ್ಟ ಆಗಬಹುದು ಎಂದು ಚಿಂತಕರ ಚಾವಡಿ ಜಿಟಿಆರ್‌ಐ ಹೇಳಿದೆ.
‘ಅಮೆರಿಕದಲ್ಲಿ ಭಾರತದ ಐಟಿ ಕಂಪನಿಗಳು ಈಗಾಗಲೇ ಶೇ 50ರಿಂದ ಶೇ 80ರಷ್ಟು ಸ್ಥಳೀಯರನ್ನೇ ನೇಮಕ ಮಾಡಿಕೊಂಡಿವೆ. ಟ್ರಂಪ್ ಕ್ರಮವು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸದು. ಭಾರತೀಯರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಂಪನಿಗಳು ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಲು ಕಂಪನಿಗಳು, ಹೊರದೇಶಗಳಿಂದಲೇ ತಮ್ಮ ಕಂಪನಿಗಳ ಕಾರ್ಯಾಚರಣೆಯನ್ನು ತೀವ್ರಗೊಳಿಸಬಹುದು. ಉದಾಹರಣೆಗೆ, ತಮ್ಮ ಉದ್ಯೋಗಿಗಳ ಮೂಲಕ ಭಾರತದಿಂದಲೇ ಕಾರ್ಯಾಚರಣೆಯನ್ನು ಹೆಚ್ಚಿಸಬಹುದು’ ಎಂದು ಅದು ಅಭಿಪ್ರಾಯಪಟ್ಟಿದೆ.
ಟ್ರಂಪ್ ನೀತಿಯಿಂದಾಗಿ ಭಾರತದ ಐಟಿ ವಲಯವು ಅಮೆರಿಕದ ಪ್ರಾಜೆಕ್ಟ್‌ಗಳಿಗಾಗಿ ತನ್ನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕಾಗಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಭಾರತದ ಐಟಿ ವಲಯವು ತನ್ನ ಒಟ್ಟಾರೆ ಆದಾಯದಲ್ಲಿ ಅಮೆರಿಕದಿಂದಲೇ ಶೇ 57ರಷ್ಟು ಆದಾಯ ಪಡೆಯುತ್ತದೆ.
ಏಷ್ಯಾದಮೊದಲಮಹಿಳಾರೈಲುಚಾಲಕಿಸುರೇಖಾನಿವೃತ್ತಿ
ಸಂದರ್ಭ: ಇದು ಮಹಿಳೆಯರ ಕೈಲಾಗುವಂಥ ಕೆಲಸವಲ್ಲ ಎನ್ನುತ್ತಿದ್ದ ಕಾಲದಲ್ಲಿಯೇ ರೈಲು ಎಂಜಿನಿಯರ್ ಆಗಿ ಉದ್ಯೋಗ ಪಡೆದವರು ಸುರೇಖಾ ಯಾದವ್. ಮಹಿಳೆಯೊಬ್ಬರು ರೈಲು ಚಲಾಯಿಸಿದ ಏಷ್ಯಾದ ಮೊದಲಿಗರಿವರು. 36 ವರ್ಷದ ವೃತ್ತಿ ಜೀವನ ಮುಗಿಸಿದ ಸುರೇಖಾ ಅವರು ಇದೇ 30ರಂದು ನಿವೃತ್ತಿಯಾಗಲಿದ್ದಾರೆ.
1988ರಲ್ಲಿಇವರುರೈಲುಎಂಜಿನಿಯರ್ ಆಗಿತಮ್ಮವೃತ್ತಿಆರಂಭಿಸಿದರು. ಗುರಿಸಾಧನೆ, ಹಿಡಿದಛಲಬಿಡದಿರುವುದುಮತ್ತುಅತ್ಯಂತಸವಾಲಿನವೃತ್ತಿರಂಗದಲ್ಲಿನಲಿಂಗತಾರತಮ್ಯದಅಡೆತಡೆಗಳನ್ನುಮೀರಿದಇವರಜೀವನಗಾಥೆಯೇಅಸಾಧಾರಣವಾದುದು. ಅವರಿಗೀಗ 60 ವರ್ಷ.
ಗೂಡ್ಸ್ ರೈಲಿನ ಚಾಲಕಿಯಾಗಿ ಅವರು ತಮ್ಮ ವೃತ್ತಿ ಆರಂಭಿಸಿದರು. ಬಳಿಕ, ಮುಂಬೈನ ಲೋಕಲ್ ರೈಲುಗಳಲ್ಲಿ ಕಾರ್ಯನಿರ್ವಹಿಸಿದರು. ಪ್ರತಿಷ್ಠಿತ ‘ಡೆಕ್ಕನ್ ಕ್ವೀನ್’ನನ್ನೂ ಇವರು ಚಲಾಯಿಸಿದ್ದಾರೆ. ಆಧುನಿಕ ಕಾಲದ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಚಲಾಯಿಸಿದ್ದಾರೆ. ವಿಶೇಷವೆಂದರೆ, ಇಷ್ಟೊಂದು ವೈವಿಧ್ಯಮಯ ರೈಲುಗಳನ್ನು ಚಲಾಯಿಸಿದ ಮೊದಲ ಮಹಿಳೆಯೂ ಇವರೇ ಆಗಿದ್ದಾರೆ.
‘ಈ ವೃತ್ತಿ ಆಯ್ಕೆ ಮಾಡಿಕೊಳ್ಳಲು ಪೋಷಕರು ನನಗೆ ಬೇಡ ಎನ್ನಲೇ ಇಲ್ಲ’ ಎನ್ನುವ ಸುರೇಖಾ ಅವರು ಹುಟ್ಟಿದ್ದು ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ. ಹೈಸ್ಕೂಲ್ ಮುಗಿಸಿದ ಬಳಿಕ ಇವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮುಗಿಸಿದರು. ಸುರೇಖಾ ಅವರ ಪತಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರು ಮಕ್ಕಳು ಎಂಜಿನಿಯರ್‌ಗಳು.
ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಸುರೇಖಾ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
‘ಸೇವೆಅಜರಾಮರ’
ತಮಗೆ ಎದುರಾದ ಎಲ್ಲ ಅಡೆತಡೆಗಳನ್ನು ದಾಟಿದವರು. ಅಸಂಖ್ಯ ಮಹಿಳೆಯರಿಗೆ ಸ್ಫೂರ್ತಿದಾಯಕರು. ಯಾವುದೇ ಕನಸನ್ನೂ ನನಸು ಮಾಡಿಕೊಳ್ಳುವುದು ಸಾಧ್ಯ ಎಂದು ತೋರಿಸಿಕೊಟ್ಟವರು. ಭಾರತೀಯ ರೈಲ್ವೆಯಲ್ಲಿ ಮಹಿಳಾ ಸಬಲೀಕರಣದ ರೂಪಕವಾಗಿ ಸುರೇಖಾ ಅವರ ವೃತ್ತಿ ಜೀವನವು ಅಜರಾಮರ
ಒಮ್ಮೆಲೆಹೆಚ್ಚಿಸಿದರೆಹೊರೆ
ಐದು–ಹತ್ತು ವರ್ಷಗಳಿಗೊಮ್ಮೆ ಟಿಕೆಟ್ ದರ ಒಮ್ಮೆಲೇ ಹೆಚ್ಚಿಸಿದರೆ ಪ್ರಯಾಣಿಕರಿಗೂ ಹೊರೆಯಾಗುತ್ತದೆ. ಕಾಲಕಾಲಕ್ಕೆ ಅಲ್ಪ ಪ್ರಮಾಣದಲ್ಲಿ ವೈಜ್ಞಾನಿಕವಾಗಿ ದರ ಏರಿಕೆ ಮಾಡಿದಾಗ ಹೊರೆಯಾಗುವುದು ತಪ್ಪಲಿದೆ. ಅಲ್ಲದೇ ರಾಜಕೀಯ ಹಿತಾಸಕ್ತಿಗಳಿಂದ ದೂರ ಇದ್ದು, ಸ್ವತಂತ್ರವಾಗಿ ಸಮಿತಿಯು ಕಾರ್ಯನಿರ್ವಹಿಸುವುದರಿಂದ ಸಂಸ್ಥೆಗಳಿಗೂ ಒಳಿತಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ವೆಂಕಟೇಶ್ ಕುಮಾರ್‌ಗೆ ‘ಸಂಗೀತ ವಿದ್ವಾನ್’ ಗರಿ ಸಂದರ್ಭ: ಮೈಸೂರು ದಸರಾ ಸಂದರ್ಭದಲ್ಲಿ ನೀಡುವ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2025ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ವೈ.ಕೆ. ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
‘ಅದ್ಭುತ ಗಾಯನದ ಮೂಲಕ ವೆಂಕಟೇಶ್ ಕುಮಾರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ’.
ಎಚ್–1ಬಿ ವೀಸಾ ಶುಲ್ಕ 1 ಲಕ್ಷ ಡಾಲರ್‌ಗೆ ಹೆಚ್ಚಳ ಸಂದರ್ಭ: ವಿವಿಧ ದೇಶಗಳ ಜನರನ್ನು ನೇಮಕ ಮಾಡಿಕೊಳ್ಳುವ ಅಮೆರಿಕದ ಕಂಪನಿ ಗಳು ತಮ್ಮ ಉದ್ಯೋಗಿಗಳಿಗಾಗಿ ಪಡೆಯುವ ಎಚ್–1ಬಿ ವೀಸಾ ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.
ಚಾಲ್ತಿಯಲ್ಲಿ ಇರುವವರಿಗೆ ಅನ್ವಯಿಸದು: ‘ಪರಿಷ್ಕೃತ ನಿಯಮವು ಮಾನ್ಯತೆ ಹೊಂದಿದ ಎಚ್–1ಬಿ ವೀಸಾ ಹೊಂದಿರುವವರಿಗೆ ಅನ್ವಯ ಆಗುವುದಿಲ್ಲ. ಹೊಸ ಶುಲ್ಕವು ಈಗಾಗಲೇ ಎಚ್–1ಬಿ ವೀಸಾ ಹೊಂದಿರುವವರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವರದಿಯಲ್ಲಿ ತಿಳಿಸಿದೆ. ‘ಅಮೆರಿಕಕ್ಕೆ ಮರಳಲು ಯಾವುದೇ ಸಮಸ್ಯೆಯಿಲ್ಲ. ವೀಸಾ ನವೀಕರಿಸುವವರಿಗೂ ಯಾವುದೇ ತೊಂದರೆಯಿಲ್ಲ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
‘ಮುಂದಿನ ದಿನಗಳಲ್ಲಿ ಲಾಟರಿ ಮೂಲಕ ಆಯ್ಕೆಯಾಗುವ ಎಚ್–1ಬಿ ವೀಸಾ ಅರ್ಜಿದಾರರಿಗೆ ಮಾತ್ರ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ’ ಎಂದು ಸ್ಪಷ್ಟಪಡಿಸಿದೆ.
‘ಇತರ ದೇಶಗಳಿಂದ ಅಮೆರಿಕಕ್ಕೆ ಬರುವ ಜನರು ಅಧಿಕ ಕೌಶಲ ಉಳ್ಳವರಾಗಿರಬೇಕು ಹಾಗೂ ಈ ವೀಸಾ ಪಡೆದು ಬರುವವರಿಂದಾಗಿ ಸ್ಥಳೀಯರು ತಮ್ಮ ಉದ್ಯೋಗ ಕಳೆದುಕೊಳ್ಳುವುದಿಲ್ಲ ಎಂಬುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಟ್ರಂಪ್ ಆಡಳಿತ ಹೇಳಿದೆ.
ಟ್ರಂಪ್ ಅವರ ಈ ನಡೆಯು, ಉದ್ಯೋಗ ವೀಸಾ ಪಡೆದು ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯರು, ಅದರಲ್ಲೂ ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದುಡಿಯುತ್ತಿರುವವರ ಮೇಲೆ ಭಾರಿ ಪರಿಣಾಮ ಬೀರಲಿದೆ.
‘ಎಚ್–1ಬಿ ವೀಸಾ ಸೌಲಭ್ಯದ ಪ್ರಯೋಜನ ಪಡೆಯಲು ಬಯಸುವ ಕಂಪನಿಗಳ ಮೇಲೆ ಅಧಿಕ ವೆಚ್ಚ ಹೇರು ವುದು ಅಗತ್ಯವಾಗಿದೆ. ಈ ಮೂಲಕ, ಅವುಗಳು ಈ ವೀಸಾ ಸೌಲಭ್ಯ ದುರ್ಬಳಕೆ ಮಾಡದಂತೆ ತಡಯಬಹುದಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ.
‘ಭಾರತದ ಕಂಪನಿಗಳ ಮೇಲೆ ಪರಿಣಾಮ’
ಅಮೆರಿಕದ ಎಚ್–1ಬಿ ವೀಸಾ ಅರ್ಜಿ ಶುಲ್ಕ ₹88.09 ಲಕ್ಷ ತಂತ್ರಜ್ಞಾನ ಸೇವಾ ಕಂಪನಿಗಳಿಗೆ ತೊಂದರೆ: ನಾಸ್ಕಾಂ
ಎಚ್–1ಬಿ ವೀಸಾ ಅರ್ಜಿಗಳಿಗೆ ವಿಧಿಸುವ ಶುಲ್ಕವನ್ನು 1 ಲಕ್ಷ ಅಮೆರಿಕನ್ ಡಾಲರ್‌ಗೆ (ಅಂದಾಜು ₹88.09 ಲಕ್ಷ) ನಿಗದಿಪಡಿಸುವ ಅಮೆರಿಕ ಸರ್ಕಾರದ ತೀರ್ಮಾನವು ಭಾರತದ ತಂತ್ರಜ್ಞಾನ ಸೇವಾ ಕಂಪನಿಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ನಾಸ್ಕಾಂ ಅಂದಾಜು ಮಾಡಿದೆ.
ಅಮೆರಿಕದಲ್ಲಿಯೇ ಉಳಿದು ಮಾಡಬೇಕಾದ ಕೆಲಸಗಳ ಮೇಲೆ ಈ ತೀರ್ಮಾನದಿಂದಾಗಿ ಪರಿಣಾಮ ಉಂಟಾಗಲಿದೆ ಎಂದು ಐ.ಟಿ. ಸೇವಾ ಕಂಪನಿಗಳ ಸಂಘಟನೆಯಾದ ನಾಸ್ಕಾಂ ಹೇಳಿದೆ.
ಅಮೆರಿಕದ ಎಚ್–1ಬಿ ವೀಸಾಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುವುದು ಭಾರತದ ಟೆಕಿಗಳು. ಅಮೆರಿಕವು ಪ್ರತಿ ವರ್ಷ 6,50,000 ಎಚ್–1ಬಿ ವೀಸಾ ನೀಡುತ್ತದೆ. ಈ ಬಗೆಯ ವೀಸಾಗಳನ್ನು 2024–25ರಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡ ಕಂಪನಿಗಳ ಪಟ್ಟಿಯಲ್ಲಿ ಅಮೆಜಾನ್ ಮೊದಲ ಸ್ಥಾನದಲ್ಲಿದೆ (10,044).
ಅಮೆರಿಕಕ್ಕೆ ನಷ್ಟ, ಭಾರತಕ್ಕೆ ಲಾಭ: ಅಮಿತಾಭ್ ಕಾಂತ್
‘ಎಚ್–1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರವು ಅಮೆರಿಕದಲ್ಲಿ ಅನ್ವೇಷಣೆಗಳು ಉಸಿರುಗಟ್ಟುವಂತೆ ಮಾಡಲಿದೆ. ಆದರೆ, ಈ ನಿರ್ಧಾರವು ಭಾರತದ ಅಭಿವೃದ್ಧಿಗೆ ವೇಗ ನೀಡಲಿದೆ’ ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ ಹೇಳಿದ್ದಾರೆ.
ವೀಸಾ ಶುಲ್ಕ ಹೆಚ್ಚಳವು, ಜಾಗತಿಕ ಪ್ರತಿಭೆಗಳಿಗೆ ಬಾಗಿಲು ಹಾಕುವ ಕೆಲಸ ಮಾಡಲಿದೆ. ಇದರಿಂದ ಅಮೆರಿಕದಲ್ಲಿ ಸ್ಥಾಪನೆಯಾಗಬೇಕಾದ ಪ್ರಯೋಗಾಲಯಗಳು, ಅಲ್ಲಿಗೆ ಸಿಗಬೇಕಾದ ಹಕ್ಕುಸ್ವಾಮ್ಯ, ಅಲ್ಲಿ ಆಗಬೇಕಾದ ಸಂಶೋಧನೆ ಮತ್ತು ಅಲ್ಲಿ ಸ್ಥಾಪನೆ ಆಗಬಹುದಾಗ ನವೋದ್ಯಮಗಳು ಬೆಂಗಳೂರು, ಹೈದರಾಬಾದ್, ಪುಣೆ ಮತ್ತು ಗುರುಗ್ರಾಮದಂತಹ ನಗರಗಳಿಗೆ ಹೋಗುವಂತೆ ಮಾಡಲಿದೆ ಎಂದು ಹೇಳಿದ್ದಾರೆ.
ಇದರಿಂದಾಗಿ ಭಾರತದ ಅತ್ಯುತ್ತಮ ವೈದ್ಯರು, ಎಂಜಿನಿಯರ್‌ಗಳು, ವಿಜ್ಞಾನಿಗಳು, ನಾವೀನ್ಯಕಾರರು ವಿಕಸಿತ ಭಾರತದ ಗುರಿ ಮತ್ತು ಪ್ರಗತಿಗೆ ಕೊಡುಗೆ ನೀಡಲು ಅವಕಾಶ ಹೊಂದಲಿದ್ದಾರೆ. ಅಮೆರಿಕದ ಈ ನಿರ್ಧಾರವು ಭಾರತಕ್ಕೆ ಲಾಭ ಉಂಟುಮಾಡುತ್ತದೆ ಎಂದು ಅಮಿತಾಭ್ ಕಾಂತ್ ‘ಎಕ್ಸ್’ನಲ್ಲಿ ಹೇಳಿದ್ದಾರೆ.
ಎಂಎಸ್‌ಪಿ ಅಡಿ ಐದು ಧಾನ್ಯಗಳ ಖರೀದಿ ಸಂದರ್ಭ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಐದು ಧಾನ್ಯಗಳ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.
2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
38,000 ಟನ್ ಹೆಸರು ಕಾಳು, 60,810 ಟನ್ ಉದ್ದು, 15,650 ಟನ್ ಸೂರ್ಯಕಾಂತಿ, 61,148 ಟನ್ ಕಡಲೆಬೀಜ ಮತ್ತು 1,15,000 ಟನ್ ಸೋಯಾಬೀನ್ ಖರೀದಿಗೆ ಅನುಮತಿ ಸಿಕ್ಕಿದೆ.
ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದ ಕೃಷಿಕರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾನ್ಯಗಳನ್ನು ಖರೀದಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದರು.
ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆಯ ನೆರವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಒದಗಿಸಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಸಂದರ್ಭ: ಬೆಳಗಾವಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿಯ ಸದಸ್ಯ.
‘ಬೆಳಗಾವಿ ಬಾಲಾಜಿ ಟ್ರಸ್ಟ್ ಎಂಬ ಸಂಸ್ಥೆಯು ಸುವರ್ಣ ಸೌಧದ ಎದುರು ಏಳು ಎಕರೆ ಜಾಗವನ್ನು ಖರೀದಿಸಿದೆ. ಅಲ್ಲಿ ಅಂದಾಜು ₹100 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಿಸಲು ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ’.
ಮೋಹನ್‌ಲಾಲ್‌ಗೆ ಫಾಲ್ಕೆ ಗರಿ ಸಂದರ್ಭ: ಮಲಯಾಳ ಚಿತ್ರರಂಗದ ಹಿರಿಯ ನಟ ಮೋಹನ್‌ಲಾಲ್ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಸಿನಿಮಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ.
2023ನೇ ಸಾಲಿನ ಪ್ರಶಸ್ತಿಗೆ 65 ವರ್ಷದ ಮೋಹನ್‌ಲಾಲ್ ಅವರನ್ನು ಆಯ್ಕೆ ಮಾಡಿರುವ ವಿಷಯವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ‘ಎಕ್ಸ್’ನಲ್ಲಿ ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮೋಹನ್‌ಲಾಲ್ ಅವರಿಗೆ 2001ರಲ್ಲಿ ಪದ್ಮಶ್ರೀ ಮತ್ತು 2019ರಲ್ಲಿ ಪದ್ಮಭೂಷಣ ಪುರಸ್ಕಾರ ಲಭಿಸಿದ್ದವು.
350ಕ್ಕೂ ಹೆಚ್ಚು ಸಿನಿಮಾದಲ್ಲಿ ನಟನೆ ನಾಲ್ಕು ದಶಕಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ ಮೋಹನ್‌ಲಾಲ್ ಅವರು ಮಲಯಾಳ, ತಮಿಳು, ತೆಲುಗು, ಹಿಂದಿ ಮತ್ತು ಕನ್ನಡ ಭಾಷೆಗಳ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತನ್ಮಾತ್ರ, ಇರುವರ್, ದೃಶ್ಯಂ, ವಾನಪ್ರಸ್ಥಂ, ಕಂಪನಿ, ಮುಂದಿರಿವಳ್ಳಿಗಳ್ ತಳಿರ್ಕುಂಬೋಳ್ ಮತ್ತು ಪುಲಿಮುರುಗನ್ ಅವರಿಗೆ ಹೆಸರು ತಂದುಕೊಟ್ಟ ಪ್ರಮುಖ ಚಿತ್ರಗಳಾಗಿವೆ.
ಬಹುಪತ್ನಿತ್ವ ಒಪ್ಪಲಾಗದು: ಹೈಕೋರ್ಟ್ ಸಂದರ್ಭ: ‘ಪತ್ನಿಯರನ್ನು ಸಲಹುವ ಸಾಮರ್ಥ್ಯ ಇಲ್ಲದಿದ್ದರೆ ಮುಸ್ಲಿಂ ಪುರುಷನೊಬ್ಬ ಒಂದಕ್ಕಿಂತ ಹೆಚ್ಚು ಮದುವೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂದಲ್‌ಮಣ್ಣ ನಿವಾಸಿ 39 ವರ್ಷದ ಮಹಿಳೆಯೊಬ್ಬರು, ಭಿಕ್ಷಾಟನೆಯಿಂದ ಜೀವನ ನಿರ್ವಹಣೆ ಮಾಡುತ್ತಿರುವ ತನ್ನ ಪತಿಯಿಂದ ಪ್ರತಿ ತಿಂಗಳು ₹10 ಸಾವಿರ ಜೀವನಾಂಶ ಕೋರಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ವಿ.ಕುಂಞಿಕೃಷ್ಣನ್, ‘ಮುಸ್ಲಿಂ ಪುರುಷನೊಬ್ಬನಿಗೆ ತನ್ನ ಪತ್ನಿಯರನ್ನು ನೋಡಿಕೊಳ್ಳುವ ಆರ್ಥಿಕ ಸಾಮರ್ಥ್ಯ ಇಲ್ಲದಿದ್ದರೆ ಮತ್ತು ಆತನ ಪತ್ನಿಯರಲ್ಲಿ ಒಬ್ಬರು ಜೀವನಾಂಶಕ್ಕಾಗಿ ಕೋರ್ಟ್ ಮೊರೆ ಹೋಗುತ್ತಾರೆ ಎನ್ನುವುದಾದರೆ ಆತನ ಬಹುಪತ್ನಿತ್ವ ವನ್ನು ಒಪ್ಪಲು ಸಾಧ್ಯವಿಲ್ಲ’ ಎಂದಿದ್ದಾರೆ.
ದೂರುದಾರ ಮಹಿಳೆ ಮೊದಲು ಕೌಟುಂಬಿಕ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅಲ್ಲಿ ಆಕೆಯ ಮನವಿಯನ್ನು ತಳ್ಳಿಹಾಕಿದಾಗ, ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಪಾಲಕ್ಕಾಡ್‌ನ ಕುಂಬಡಿ ಗ್ರಾಮದ 44 ವರ್ಷದ ನನ್ನ ಪತಿಯು ಭಿಕ್ಷಾಟನೆಯಿಂದ ಜೀವಿಸುತ್ತಿದ್ದು, ತಿಂಗಳಿಗೆ ₹25 ಸಾವಿರ ಆದಾಯವಿದೆ. ಆದರೆ, ನನಗೆ ಜೀವನಾಂಶ ನೀಡುತ್ತಿಲ್ಲ’ ಎಂದು ದೂರಿದ್ದರು.
ದೂರುದಾರ ಮಹಿಳೆಯ ವಾದ ಆಲಿಸಿದ ನ್ಯಾಯಮೂರ್ತಿ, ‘ಭಿಕ್ಷಾಪಾತ್ರೆಗೆ ಕೈ ಹಾಕಲು ಹೋಗಬೇಡಿ’ ಎನ್ನುವ ಮಲಯಾಳಂ ನುಡಿಗಟ್ಟು ಬಳಸಿದರು. ಈ ಪ್ರಕರಣದಲ್ಲಿ ‘ಪತ್ನಿಗೆ ಜೀವನಾಂಶ ನೀಡುವಂತೆ ಭಿಕ್ಷುಕನಿಗೆ ಕೋರ್ಟ್ ನಿರ್ದೇಶಿಸುವಂತಿಲ್ಲ. ಆದರೆ, ದೂರುದಾರ ಮಹಿಳೆಗೆ ಆಹಾರ, ಬಟ್ಟೆಗಳನ್ನು ಒದಗಿಸಲಾಗಿದೆಯೇ ಎನ್ನುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು’ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಆದೇಶದ ಪ್ರತಿಯನ್ನು ನೀಡುವಂತೆ ಸೂಚಿಸಿದ ಕೋರ್ಟ್, ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿತು.
‘ಏಕಪತ್ನಿತ್ವ: ಜಾಗೃತಿ ಮೂಡಿಸಬೇಕು’
ಬಹುತೇಕ ಮುಸ್ಲಿಮರು ಏಕಪತ್ನಿತ್ವವನ್ನೇ ಅನುಸರಿ ಸುತ್ತಾರೆ. ಇದು ಕುರಾನ್‌ನ ನಿಜವಾದ ಆಶಯವನ್ನು ಪ್ರತಿಬಿಂಬಿ ಸುತ್ತದೆ. ಕೆಲವರಷ್ಟೇ ಬಹುಪತ್ನಿತ್ವ ಹೊಂದಿದ್ದಾರೆ. ಸಮುದಾಯ ಮತ್ತು ಧಾರ್ಮಿಕ ಮುಖಂಡರು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
ಸಂದರ್ಭ: ಪ್ರತಿಯೊಂದು ಮಗುವೂ ಉತ್ತಮ ಶಿಕ್ಷಣ ಪಡೆಯಬೇಕು. ಉನ್ನತ ಶಿಕ್ಷಣ ಪಡೆಯುವ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗಬೇಕು. ಅದಕ್ಕಾಗಿ ನಮ್ಮ ಫೌಂಡೇಷನ್ ಶ್ರಮಿಸುತ್ತಿದೆಅಜೀಂ ಪ್ರೇಮ್‌ಜಿ, ಉದ್ಯಮಿ.
ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ರಾಜ್ಯದ ಹೆಣ್ಣು ಮಕ್ಕಳಿಗೆ ಇನ್ನು ಮುಂದೆ ಅಜೀಂ ಪ್ರೇಮ್‌ಜಿ ಫೌಂಡೇಷನ್ ಆರ್ಥಿಕ ನೆರವು ನೀಡಲಿದ್ದು, ಅದಕ್ಕಾಗಿ ₹2,000 ಕೋಟಿ ಹಾಗೂ ರಾಜ್ಯ ಸರ್ಕಾರ ₹200 ಕೋಟಿ ಒದಗಿಸಿವೆ.
ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ ವಿದ್ಯಾರ್ಥಿ ವೇತನ ನೀಡಲು ಅಜೀಂ ಪ್ರೇಮ್‌ಜಿ ಫೌಂಡೇಷನ್ ಹಾಗೂ ಉನ್ನತ ಶಿಕ್ಷಣ ಇಲಾಖೆ ‘ದೀಪಿಕಾವಿದ್ಯಾರ್ಥಿವೇತನ’ ಕಾರ್ಯಕ್ರಮ ರೂಪಿಸಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯು ಉತ್ತೀರ್ಣರಾಗಿ 2025–26ನೇ ಸಾಲಿನಲ್ಲಿ ಸಾಮಾನ್ಯ ಪದವಿ ಅಥವಾ ವೃತ್ತಿ ಶಿಕ್ಷಣ ಪದವಿಗೆ ಸೇರುವ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನದ ನೆರವು ಸಿಗಲಿದೆ. ಅರ್ಹ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾದರೆ ಆ ಮೊತ್ತವನ್ನು ರಾಜ್ಯ ಭರಿಸಲಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ‘ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಅವರು ಸುಶಿಕ್ಷಿತರಾದರೆ ಅವರ ಕುಟುಂಬ, ಸಮಾಜ, ರಾಜ್ಯವೇ ಸುಶಿಕ್ಷಿತವಾಗುತ್ತದೆ.
ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿನಿಯ ರಿಗೆ ಬೋಧನೆ ಹಾಗೂ ಪ್ರಯೋಗಾಲಯ ಶುಲ್ಕಗಳನ್ನು ಮರುಪಾವತಿ ಮಾಡಲಾಗುತ್ತಿದೆ. ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ ನಿರ್ಮೂಲನೆಯ ಹೋರಾಟಕ್ಕೆ ಶಕ್ತಿ ತುಂಬಲಿದೆ’ ಎಂದರು.
ಸಂದರ್ಭ: ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ಸರ್ಕಾರದ ಮೇಲೆ ಆರ್ಥಿಕ ಹೊರೆ ಬೀಳುವ ಸಾಧ್ಯತೆಯಿಲ್ಲ ಎಂದು ರೇಟಿಂಗ್ ಸಂಸ್ಥೆ ಕ್ರಿಸಿಲ್ ತಿಳಿಸಿದೆ.
ಜಿಎಸ್‌ಟಿ ಪರಿಷ್ಕರಣೆಯಿಂದ ಅಲ್ಪಾವಧಿವರೆಗೆ ವಾರ್ಷಿಕ ₹48 ಸಾವಿರ ಕೋಟಿ ನಷ್ಟ ಉಂಟಾಗಲಿದೆ ಎಂದು ಸರ್ಕಾರ ಅಂದಾಜಿಸಿತ್ತು ಎಂದು ಕ್ರಿಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕಳೆದ ಆರ್ಥಿಕ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹವು ₹10.6 ಲಕ್ಷ ಕೋಟಿಯಾಗಿತ್ತು. ಆದ್ದರಿಂದ, ನಷ್ಟದ ಪ್ರಮಾಣ ಗಮನಾರ್ಹವಾಗಿ ಇಲ್ಲ ಎಂದು ಹೇಳಿದೆ.
ಜಿಎಸ್‌ಟಿ ಮಂಡಳಿಯು ದರ ಪರಿಷ್ಕರಣೆ ಮಾಡಿರುವುದರಿಂದ ನಾಲ್ಕು ಹಂತದ ತೆರಿಗೆ, ಎರಡು ಹಂತಕ್ಕೆ ಇಳಿಯಲಿದೆ. ಇದರಿಂದ ಸರಕು ಮತ್ತು ಸೇವೆಗಳ ದರ ಕಡಿಮೆಯಾಗಲಿದೆ ಎಂದು ಹೇಳಿದೆ.
ಜಿಎಸ್‌ಟಿ ಪರಿಷ್ಕರಣೆ ಮೊದಲು ಶೇ 18ರ ಹಂತದ ತೆರಿಗೆಯಿಂದ ಶೇ 75ರಷ್ಟು ವರಮಾನ ಬರುತ್ತಿತ್ತು. ಶೇ 6ರಷ್ಟು ವರಮಾನ ಶೇ 12ರ ಹಂತದ ತೆರಿಗೆಯಿಂದ ಮತ್ತು ಶೇ 15ರಷ್ಟು ವರಮಾನ ಶೇ 28 ಹಂತದಿಂದ ಬರುತ್ತಿತ್ತು.
ನೇರತೆರಿಗೆಸಂಗ್ರಹಹೆಚ್ಚಳ
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ 1ರಿಂದ ಸೆಪ್ಟೆಂಬರ್ 17ರ ವರೆಗೆ ದೇಶದ ನಿವ್ವಳ ನೇರ ತೆರಿಗೆ ಸಂಗ್ರಹವು ₹10.82 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
2024–25ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹9.91 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಸಂಗ್ರಹವು ಶೇ 9ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ. ಹೆಚ್ಚಿದ ಮುಂಗಡ ತೆರಿಗೆ ಮತ್ತು ಮರುಪಾವತಿ ಯಲ್ಲಿನ (ರೀಫಂಡ್) ಇಳಿಕೆಯು ಸಂಗ್ರಹ ಹೆಚ್ಚಲು ಕಾರಣವಾಗಿದೆ ಎಂದು ತಿಳಿಸಿದೆ.
ಏಪ್ರಿಲ್ 1ರಿಂದ ಸೆಪ್ಟೆಂಬರ್ 17ರ ವರೆಗೆ ಮರುಪಾವತಿ ಪ್ರಮಾಣ ಶೇ 24ರಷ್ಟು ಇಳಿಕೆಯಾಗಿದ್ದು, ₹1.61 ಲಕ್ಷ ಕೋಟಿಯಾಗಿದೆ. ಈ ಅವಧಿಯಲ್ಲಿ ಮುಂಗಡ ತೆರಿಗೆ ಸಂಗ್ರಹವು ಶೇ 6ರಷ್ಟು ಹೆಚ್ಚಳವಾಗಿದ್ದು, ₹3.52 ಲಕ್ಷ ಕೋಟಿ ದಾಟಿದೆ. ಆದರೆ, ಕಾರ್ಪೊರೇಟ್‌ಯೇತರ ತೆರಿಗೆ ಸಂಗ್ರಹವು ಶೇ 7ರಷ್ಟು ಇಳಿಕೆಯಾಗಿದ್ದು, ₹96,784 ಕೋಟಿಯಾಗಿದೆ.
ನಿವ್ವಳ ಕಾರ್ಪೊರೇಟ್ ತೆರಿಗೆ ಸಂಗ್ರಹವು ₹4.72 ಲಕ್ಷ ಕೋಟಿ ಮತ್ತು ವೈಯಕ್ತಿಕ ಆದಾಯ ತೆರಿಗೆಯನ್ನು ಒಳಗೊಂಡಿರುವ ಕಾರ್ಪೊರೇಟ್‌ಯೇತರ ತೆರಿಗೆ, ₹5.84 ಲಕ್ಷ ಕೋಟಿಯಷ್ಟಾಗಿದೆ.
ಷೇರು ವಹಿವಾಟು ತೆರಿಗೆ (ಎಸ್‌ಟಿಟಿ) ಸಂಗ್ರಹವು ₹26,306 ಕೋಟಿಗೆ ಹೆಚ್ಚಳವಾಗಿದೆ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ನೇರ ತೆರಿಗೆ ಮೂಲಕ ₹25.20 ಲಕ್ಷ ಕೋಟಿ ಸಂಗ್ರಹದ ಗುರಿ ಹೊಂದಿದೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 12ರಷ್ಟು ಹೆಚ್ಚಳವಿದು. ಎಸ್‌ಟಿಟಿ ಮೂಲಕ ₹78 ಸಾವಿರ ಕೋಟಿ ಸಂಗ್ರಹಿಸಲು ಯೋಜಿಸಿದೆ.
ಗಾಜಾದಲ್ಲಿಕದನವಿರಾಮ: ನಿರ್ಣಯದವಿರುದ್ಧಅಮೆರಿಕಮತ
ಸಂದರ್ಭ: ಭಯೋತ್ಪಾದನೆಯ ಕುರಿತು ಭದ್ರತಾ ಮಂಡಳಿಯು ಕಣ್ಣುಮುಚ್ಚಿ ಕುಳಿತರೂ ಇಸ್ರೇಲ್ ಮಾತ್ರ ಹಮಾಸ್ ವಿರುದ್ಧದ ತನ್ನ ಯುದ್ಧವನ್ನು ಮುಂದುವರಿಸುತ್ತದೆ ಡ್ಯಾನಿ ಡ್ಯಾನನ್, ವಿಶ್ವ ಸಂಸ್ಥೆಗೆ ಇಸ್ರೇಲ್ ರಾಯಭಾರಿ.
‘ಗಾಜಾದಲ್ಲಿ ತಕ್ಷಣದಲ್ಲಿ ಕದನವಿರಾಮ ಘೋಷಿಸ ಬೇಕು ಮತ್ತು ಈ ಕದನವಿರಾಮವು ಶಾಶ್ವತವಾಗಿ ಇರಬೇಕು’ ಎಂಬ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ಅಮೆರಿಕವು ಮತ್ತೊಮ್ಮೆ ತನ್ನ ಪರಮಾಧಿಕಾರವನ್ನು ಚಲಾಯಿಸಿತು.
ನಿರ್ಣಯದಲ್ಲಿ ಹಮಾಸ್ ಬಂಡುಕೋರರನ್ನು ಸೂಕ್ತ ರೀತಿಯಲ್ಲಿ ಖಂಡಿಸಲಾಗಿಲ್ಲ ಎಂಬುದು ಅಮೆರಿಕದ ಆಕ್ಷೇಪ. ಆದರೆ, ಮಂಡಳಿಯ ಉಳಿದೆಲ್ಲ ಪ್ರಮುಖ 14 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿವೆ. ‘ಗಾಜಾದಲ್ಲಿ ಮಾನವೀಯ ಪರಿಸ್ಥಿತಿಯು ದುರಂತಮಯವಾಗಿದೆ. ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಧಿಸಿರುವ ಎಲ್ಲ ನಿರ್ಬಂಧವನ್ನು ಇಸ್ರೇಲ್ ತೆಗೆದು ಹಾಕಬೇಕು’ ಎಂದು ಇವುಗಳು ಹೇಳಿವೆ.
‘ಹಮಾಸ್‌ನ ಕ್ರಿಯೆಗಳನ್ನು ಖಂಡಿಸಲಾಗಿಲ್ಲ ಅಥವಾ ತನ್ನನ್ನು ತಾನು ರಕ್ಷಿಸಿಕೊಳ್ಳಲು ಇಸ್ರೇಲ್‌ಗೆ ಹಕ್ಕಿದೆ ಎಂಬುದನ್ನೂ ಉಲ್ಲೇಖಿಸಲಾಗಿಲ್ಲ. ಹಮಾಸ್‌ಗೆ ಅನುಕೂಲವಾಗುವ ತಪ್ಪು ಸಂಕಥನಕ್ಕೆ ಈ ನಿರ್ಣಯವು ಅಂಕಿತ ಹಾಕಿದೆ. ಇದಕ್ಕೆ ಈ ಮಂಡಳಿಯ ಇತರ ಸದಸ್ಯರು ದನಿಗೂಡಿಸಿದ್ದಾರೆ’ ಎಂದು ಮತಚಲಾಯಿಸುವುದಕ್ಕೂ ಮುನ್ನ ಅಮೆರಿಕದ ನೀತಿ ಸಲಹೆಗಾರ ಮಾರ್ಗನ್ ಒರ್ಟಗಸ್ ಹೇಳಿದರು.
474 ಪಕ್ಷಗಳನ್ನುಪಟ್ಟಿಯಿಂದಕೈಬಿಟ್ಟಆಯೋಗ
ಸಂದರ್ಭ: ನೋಂದಾಯಿತ ಮತ್ತು ಮಾನ್ಯತೆ ಪಡೆಯದ 474 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆ ಯಲ್ಲಿ ಭಾಗವಹಿಸಿಲ್ಲ ಹಾಗೂ ಮಾನದಂಡಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅದು ಹೇಳಿದೆ. ಇದರೊಂದಿಗೆ ಕಳೆದ 2 ತಿಂಗಳಲ್ಲಿ ಒಟ್ಟು 808 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಆ.9 ರಂದು ಮೊದಲ ಹಂತದಲ್ಲಿ 334 ಪಕ್ಷಗಳನ್ನು ಕೈಬಿಡಲಾಯಿತು.
ಲೈಲ್ಸ್ ಮಿಂಚು: ಅಮೆರಿಕದನೋವಾಲೈಲ್ಸ್ ಸತತನಾಲ್ಕನೇಬಾರಿವಿಶ್ವಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 200 ಮೀ. ಓಟದಲ್ಲಿಚಿನ್ನದಪದಕಗೆಲ್ಲುವಮೂಲಕದಿಗ್ಗಜಅಥ್ಲೀಟ್ ಉಸೇನ್ಬೋಲ್ಟ್ ದಾಖಲೆಸರಿಗಟ್ಟಿದರು.
ಅಮೆರಿಕದ ಓಟಗಾರ ನೋವಾ ಲೈಲ್ಸ್ ಅವರು ಸತತ ನಾಲ್ಕನೇ ಬಾರಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 200 ಮೀ. ಓಟದಲ್ಲಿ ಚಿನ್ನ ಗೆಲ್ಲುವ ಮೂಲಕ ದಿಗ್ಗಜ ಅಥ್ಲೀಟ್ ಉಸೇನ್ ಬೋಲ್ಟ್ ಅವರ ದಾಖಲೆಯನ್ನು ಸರಿಗಟ್ಟಿದರು. ನ್ಯಾಷನಲ್ ಸ್ಟೇಡಿಯಮ್‌ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಲೈಲ್ಸ್ 19.52 ಸೆ.ಗಳಲ್ಲಿ ಗುರಿಮುಟ್ಟಿದರು.
ಜಮೈಕದದಂತಕಥೆಉಸೇನ್ಬೋಲ್ಟ್ 200 ಮೀ. ಓಟದಲ್ಲಿಸತತನಾಲ್ಕುಬಾರಿಚಿನ್ನಗೆದ್ದಿದ್ದರು. 2009 ರಿಂದ 2015ರಅವಧಿಯಲ್ಲಿಅವರುವಿಶ್ವಕೂಟದಲ್ಲಿ 100 ಮೀಮತ್ತು 200 ಮೀ. ಓಟದಲ್ಲಿಪಾರಮ್ಯಮೆರೆದಿದ್ದರು. ವಿಶ್ವಕೂಟದಲ್ಲಿ 11 ಚಿನ್ನಮತ್ತುಒಲಿಂಪಿಕ್ಸ್ ನಲ್ಲಿಎಂಟುಚಿನ್ನಬಾಚಿದ್ದರು.
ಈ ಕೂಟದ 100 ಮೀ. ಓಟದಲ್ಲಿ ಲೈಲ್ಸ್ ಕಂಚಿನ ಪದಕ ಗೆದ್ದುಕೊಂಡಿದ್ದು, 200 ಮೀ. ಓಟವನ್ನು ನಿರೀಕ್ಷೆಯಂತೆ ಗೆದ್ದರು. ಸ್ವದೇಶದ ಕೆನ್ನಿ ಬೆಡ್ನಾರೆಕ್ 19.58 ಸೆ.ಗಳಲ್ಲಿ ಗುರಿತಲುಪಿ ಬೆಳ್ಳಿ ಗೆದ್ದರೆ, ಜಮೈಕಾದ ಬ್ರಯಾನ್ ಲೆವೆಲ್ (19.64 ಸೆ.) ಕಂಚಿನ ಪದಕ ಗೆದ್ದುಕೊಂಡರು.
ಒಲಿಂಪಿಕ್ ಚಾಂಪಿಯನ್, ಬೋಟ್ಸ್‌ವಾನಾದ ಲೆಟ್ಸಿಲಿ ಟೆಬಾಗೊ ಸೆಕೆಂಡಿನ ನೂರನೇ ಒಂದು ಭಾಗದಿಂದ ಪದಕ ಕಳೆದುಕೊಂಡರು. ಕಣದಲ್ಲಿದ್ದ 20 ವರ್ಷದೊಳಗಿನ ಏಕೈಕ ಅಥ್ಲೀಟ್ ಅಂಗಿಲ್ಲಾ (ಪೂರ್ವ ಕೆರಿಬಿಯನ್ ಭಾಗ) ಸಂಜಾತ ಬ್ರಿಟನ್‌ನ ಝರ್ನೆಲ್ ಹ್ಯೂಸ್ (19.78 ಸೆ.) ಐದನೇ ಸ್ಥಾನ ಪಡೆದರು.
28 ವರ್ಷ ವಯಸ್ಸಿನ ‘ಷೋ ಮ್ಯಾನ್’ ಲೈಲ್ಸ್, ಸೆಮಿಫೈನಲ್‌ನಲ್ಲಿ ದಾಖಲೆಯ 19.51 ಸೆ.ಗಳಲ್ಲಿ ಓಡಿದ್ದರು. ಫೈನಲ್‌ನಲ್ಲಿ ಆರನೇ ಲೇನ್‌ನಲ್ಲಿ ಓಡಿ, ಗುರಿಮುಟ್ಟಿದ ತಕ್ಷಣ, ಕೈಗಳನ್ನು ಮೇಲೆತ್ತಿ ಅರೆಕ್ಷಣ ಮುಗಿಲಿನತ್ತ ದಿಟ್ಟಿಸಿದರು.
ಮೆಲಿಸಾಗೆ ಸ್ಪ್ರಿಂಟ್ ಡಬಲ್: ಅಮೆರಿಕದ ಮೆಲಿಸ್ಸಾ ಜೆಫರ್ಸನ್–ವೂಡೆನ್ ಅವರು ಮಹಿಳೆಯರ 200 ಮೀ. ಓಟವನ್ನು 21.68 ಸೆ.ಗಳಲ್ಲಿ ಪೂರೈಸಿ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸ್ಪ್ರಿಂಟ್ ಡಬಲ್ (100 ಮತ್ತು 200 ಮೀ. ಓಟ) ಸಾಧಿಸಿದರು. ಅವರು ಕೂಟದ ಮೂರನೇ ದಿನ 100 ಮೀ. ಓಟದಲ್ಲಿ ವಿಜೇತರಾಗಿದ್ದರು.
ಶೆಲ್ಲಿ–ಆ್ಯನ್ ಫ್ರೇಸರ್–ಪ್ರೈಸ್ 2013ರಲ್ಲಿ ಸ್ಪ್ರಿಂಟ್ ಡಬಲ್ ಸಾಧಿಸಿದ್ದರು. ನಂತರ ಮೆಲಿಸ್ಸಾ ಈ ಸಾಧನೆಗೆ ಪಾತ್ರರಾಗಿದ್ದಾರೆ.
ಬೋಲ್‌ಗೆ ಚಿನ್ನ: ಡಚ್ ಓಟಗಾರ್ತಿ ಫೆಮ್ಕೆ ಬೋಲ್ ಅವರು ಮಹಿಳೆಯರ 400 ಮೀ. ಹರ್ಡಲ್ಸ್ ಓಟದ ಸ್ಪರ್ಧೆಯನ್ನು 51.54 ಸೆ.ಗಳಲ್ಲಿ ಓಡಿ ಗೆಲ್ಲುವ ಮೂಲಕ ಚಿನ್ನದ ಪದಕವನ್ನು ತಮ್ಮಲ್ಲೇ ಉಳಿಸಿಕೊಂಡರು.
ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಹಾಗೂ ವಿಶ್ವದಾಖಲೆ ಹೊಂದಿರುವ ಸಿಡ್ನಿ ಮೆಕ್‌ಲಾಫ್ಲಿನ್ ಲೆವ್ರೊನ್ ಸ್ಪರ್ಧೆಯಿಂದ ಹಿಂದೆಸರಿದರು. ಅವರು 400 ಮೀ.ಫೈನಲ್ ಓಟದ ಕಡೆ ಗಮನ ಕೇಂದ್ರೀಕರಿಸುವ ಸಲುವಾಗಿ ಹರ್ಡಲ್ಸ್‌ನಿಂದ ಹಿಂದೆಸರಿದಿದ್ದರು.
ಬೋಲ್‌ಗೆ ತೀವ್ರ ಪೈಪೋಟಿ ನೀಡಿದ ಅಮೆರಿಕದ ಜಾಸ್ಮಿನ್ ಜೋನ್ಸ್ (52.03 ಸೆ.) ಬೆಳ್ಳಿ ಪದಕ ಗೆದ್ದರು. ಸ್ಲೊವಾಕಿಯಾದ ಎಮ್ಮಾ ಝಪ್ಲೆಟಲೊವಾ (53.00 ಸೆ.) ಮೂರನೇ ಸ್ಥಾನ ಗಳಿಸಿದರು.
ಪುರುಷರ ವಿಭಾಗದಲ್ಲಿ ಒಲಿಂಪಿಕ್ ಚಾಂಪಿಯನ್ ರಾಯ್ ಬೆಂಜಮಿನ್ 46.52 ಸೆ.ಗಳಲ್ಲಿ ಗುರಿತಲುಪಿ ಚಿನ್ನ ಗೆದ್ದುಕೊಂಡರು. ಜೊತೆಗೆ ಅನರ್ಹತೆ ಆತಂಕದಿಂದ ಬಚಾವಾದರು.
ಅಮೆರಿಕದ 28 ವರ್ಷ ವಯಸ್ಸಿನ ಓಟಗಾರ, ಅಂತಿಮ ತಡೆ ದಾಟುವಾಗ ಹರ್ಡಲ್ಸ್ ಬಿದ್ದು, ಇತರ ಅಥ್ಲೀಟುಗಳ ಓಟದ ಮೇಲೆ ಪರಿಣಾಮವಾಯಿತು. ಆದರೆ ಅಂತಿಮವಾಗಿ ಫಲಿತಾಂಶ ಪ್ರಕಟವಾದಾಗ ಅವರು ಹೆಸರು ಅಗ್ರಸ್ಥಾನದಲ್ಲೇ ಉಳಿಯಿತು.
ಬ್ರೆಜಿಲ್‌ನ ಅಲಿಸನ್ ಡಾಸ್ ಸಂಟೋಸ್ (46.84 ಸೆ.) ಎರಡನೇ ಸ್ಥಾನ ಪಡೆದರೆ, ಕತಾರಿನ ಅಬ್ದರೆಹಮಾನ್ ಸಂಬಾ (47.06 ಸೆ.) ಕಂಚಿನ ಪದಕ ತಮ್ಮದಾಗಿಸಿಕೊಂಡರು.
ಸಂದರ್ಭ: ಮಾನವಸಹಿತ ಗಗನಯಾನಕ್ಕೆ ಪೂರ್ವಬಾವಿಯಾಗಿ ಕೈಗೊಳ್ಳಲಾಗುವ ಮಾನವರಹಿತ ಕಾರ್ಯಾಚರಣೆಗೆ ವಿನ್ಯಾಸಗೊಳಿಸಲಾಗಿರುವ ‘ವ್ಯೋಮಮಿತ್ರ’ವು, ಮನುಷ್ಯನ ಪ್ರತಿಕೃತಿ ಯಂತಿರುವ ರೊಬೊಟ್ ಆಗಿದ್ದು, ಇದು ಕೃತಕ ಬುದ್ಧಿಮತ್ತೆ (ಎಐ) ಆಧರಿಸಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಗುರುವಾರ ಇಲ್ಲಿ ಹೇಳಿದ್ದಾರೆ.
‘ವ್ಯೋಮಮಿತ್ರ’ ಹೊತ್ತ ಬಾಹ್ಯಾಕಾಶ ಕೋಶವನ್ನು ಡಿಸೆಂಬರ್ ಅಂತ್ಯಕ್ಕೆ ಉಡ್ಡಯನ ಮಾಡಲಾಗುವುದು.
‘ಮಾನವಸಹಿತ ಗಗನಯಾನ ಕಾರ್ಯಕ್ರಮದ ಭಾಗವಾಗಿ ಗಗನಯಾನಿಗಳನ್ನು ಹೊತ್ತ ಕೋಶವನ್ನು ಭೂಮಿಯಿಂದ 400 ಕಿ.ಮೀ ದೂರದ ಕಕ್ಷೆಗೆ ಕಳುಹಿಸಲಾಗುವುದು. ಈ ವೇಳೆ, ತಾಪಮಾನ, ವಾಯುಭಾರ, ತೇವಾಂಶ ಹಾಗೂ ಇಂಗಾಲದ ಡೈಆಕ್ಸೈಡ್ ಪ್ರಮಾಣದಂತಹ ಅಂಶಗಳ ಕುರಿತು ಅಧ್ಯಯನ ನಡೆಸಲಾಗುವುದು’.
‘ಈ ಮಹತ್ವಾಕಾಂಕ್ಷೆ ಯೋಜನೆಗೆ ಭಾರತೀಯ ವಾಯುಪಡೆ, ನೌಕಾಪಡೆ, ಡಿಆರ್‌ಡಿಒ ಹಾಗೂ ಇತರ ಹಲವು ಸಂಸ್ಥೆಗಳು ಇಸ್ರೊ ಜೊತೆ ಕೈಜೋಡಿಸಿವೆ’.
ಕೆಲ ಭಾರತೀಯರ ವೀಸಾ ರದ್ದು
ಸಂದರ್ಭ: ‘ಫೆಂಟಾನಿಲ್’ ಮಾದಕದ್ರವ್ಯ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪದ ಮೇರೆಗೆ ಭಾರತದ ಕೆಲ ಉದ್ಯಮ ಕಾರ್ಯನಿರ್ವಾಹಕರು ಮತ್ತು ಕಾರ್ಪೊರೇಟ್ ಸಂಸ್ಥೆಗಳ ಪ್ರಮುಖರ ವೀಸಾಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ಅಮೆರಿಕ ತಿಳಿಸಿದೆ.
ಮಾದಕದ್ರವ್ಯ ಕಳ್ಳಸಾಗಣೆ ಆರೋಪದ ಮೇರೆಗೆ ವೀಸಾ ರದ್ದು ಮಾಡಿರುವ ಮತ್ತು ವೀಸಾ ನಿರಾಕರಿಸಿರುವ ವ್ಯಕ್ತಿಗಳ ಗುರತನ್ನು ಅಮೆರಿಕದ ರಾಯಭಾರ ಕಚೇರಿ ಸಾರ್ವಜನಿಕವಾಗಿ ಪ್ರಕಟಿಸಿಲ್ಲ. ಅಮೆರಿಕದ ಈ ಕ್ರಮದ ಬಗ್ಗೆ ಕೇಂದ್ರ ಸರ್ಕಾರದಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ತಿಳಿಸಿದೆ. ಇದರ ಪರಿಣಾಮ, ವೀಸಾ ರದ್ದುಗೊಳಿಸಿರುವ ಅಥವಾ ನಿರಾಕರಿಸಿರುವ ವ್ಯಕ್ತಿಗಳು ಮತ್ತು ಅವರ ಕುಟುಂಬದ ಸದಸ್ಯರು ಅಮೆರಿಕಕ್ಕೆ ಪ್ರಯಾಣಿಸಲು ಅನರ್ಹರು ಎಂದು ಪ್ರಕಟಣೆ ವಿವರಿಸಿದೆ.
ವಿಶ್ವ ಕುಸ್ತಿ: ಅಂತಿಮ್‌ಗೆ ಕಂಚು
ಸಂದರ್ಭ: ಯುವ ಕುಸ್ತಿಪಟು ಅಂತಿಮ್ ಪಂಘಲ್ ಅವರು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಪದಕ ತಮ್ಮದಾಗಿಸಿಕೊಂಡರು. ಈ ಚಾಂಪಿಯನ್ ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊದಲ ಪದಕ ಇದಾಗಿದೆ.
2023ರ ಆವೃತ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದ 21 ವರ್ಷದ ಅಂತಿಮ್, ಮಹಿಳೆಯರ 53 ಕೆ.ಜಿ. ವಿಭಾಗದ ಕಂಚಿನ ಪದಕದ ಸ್ಪರ್ಧೆಯಲ್ಲಿ 9–1 ಅಂತರದಿಂದ ಸ್ವೀಡನ್‌ನ ಎಮ್ಮಾ ಜೊನ್ನಾ ಡೆನಿಸ್ ಮಾಲ್ಮ್‌ಗ್ರೆನ್ ಅವರನ್ನು ಸುಲಭವಾಗಿ ಮಣಿಸಿದರು. ಎಮ್ಮಾ ಅವರು 23 ವರ್ಷದೊಳಗಿನ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿದ್ದಾರೆ.
ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡು ಪದಕ ಗೆದ್ದ ಭಾರತದ ಎರಡನೇ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಅಂತಿಮ್ ಪಾತ್ರವಾದರು. ವಿನೇಶ್ ಪೋಗಟ್ ಎರಡು ಪದಕ ಗೆದ್ದ ಮೊದಲ ಕುಸ್ತಿಪಟುವಾಗಿದ್ದಾರೆ.